ಪ. ವರ್ಗದ ವಿದ್ಯಾರ್ಥಿಗಳ ದಾಖಲಾತಿ ಅವಧಿ ವಿಸ್ತರಣೆ
Team Udayavani, May 31, 2023, 6:35 AM IST
ಮಂಗಳೂರು: ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ದಾಖಲಿಸಲು ಜೂ. 7ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ಮಂಗಳೂರು ನಗರದ ಕೊಡಿಯಾಲಬೈಲ್‌ನ ಶಾರದಾ ವಿದ್ಯಾಲಯ, ಬಂಟ್ವಾಳ ತಾಲೂಕಿನ ಪುಣ್ಯಕೋಟಿ ನಗರದಲ್ಲಿರುವ ಶಾರದಾ ಗಣಪತಿ ವಿದ್ಯಾಕೇಂದ್ರ, ಮಾಣಿಯಲ್ಲಿರುವ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿಟ್ಲದ ಬಸವನಗುಡಿಯಲ್ಲಿರುವ ವಿಟ್ಲ ಜೆಸಿಸ್ ಆಂಗ್ಲ ಮಾಧ್ಯಮ ಶಾಲೆ, ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಹಳೆಕೋಟೆಯಲ್ಲಿರುವ ವಾಣಿ ಇಂಗ್ಲಿಷ್ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರಿನಲ್ಲಿರುವ ಸೇಕ್ರೆಡ್ ಹಾಟ್ಸ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗಕ್ಕೆ ದಾಖಲು ಮಾಡಿಕೊಳ್ಳಲಾಗುವುದು.
ಅರ್ಹತೆ, ಷರತ್ತುಗಳು
ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷ ರೂ.ಗಳಿಗೆ ಮೀರಿರಬಾರದು. (2022-23ನೇ ಸಾಲಿನ ಆದಾಯ ಪ್ರಮಾಣ ಪತ್ರ ಲಗತ್ತೀಕರಿಸಬೇಕು), 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ. 5ನೇ ತರಗತಿಯಲ್ಲಿ ಶೇ. 60 ಅಂಕ ಪಡೆದಿರಬೇಕು. ದಕ್ಷಿಣಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಮಾತ್ರ ಅಂದರೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿಗೆ ಅವಕಾಶ ಕಲ್ಪಿಸುವುದು. ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೆ ಅವಕಾಶ ನೀಡಲಾಗುವುದು.
ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಯಾ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಪರಿಶೀಲಿ ಸಿದ ಅನಂತರ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ. ಕಚೇರಿ, ಅಶೋಕನಗರ ಅಂಚೆ, ಮಂಗಳೂರು-575006 ಇಲ್ಲಿಗೆ ಸಲ್ಲಿಸುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.