ದನ ಕಟ್ಟಿ ಹಾಕುವ ವಿಚಾರ: ಮಗನನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
Team Udayavani, Jun 22, 2021, 11:52 AM IST
ಮಂಗಳೂರು: ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಪ್ಪಿನಮೊಗರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕೊಪ್ಪರಿಗೆಗುತ್ತು ನಿವಾಸಿ ಸ್ವಾಮೀತ್ ಶೆಟ್ಟಿ (25 ವ) ಎಂಬವರು ಸುಟ್ಟ ಗಾಯಗೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರೋಪಿ ವಿಶ್ವನಾಥ ಶೆಟ್ಟಿ (52 ವ) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ಕಬ್ಬಿನ ಗದ್ದೆಯಲ್ಲಿ 8 ವರ್ಷದ ಬಾಲಕಿಯ ಕತ್ತು ಹಿಸುಕಿ ಕೊಲೆ; ಅತ್ಯಾಚಾರ ಶಂಕೆ
ಸೋಮವಾರ ರಾತ್ರಿ ಸುಮಾರು 11:30 ಗಂಟೆಗೆ ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ಎಂಬಲ್ಲಿ ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ ಸ್ವಾಮೀತ್ ಶೆಟ್ಟಿಯ ತಂದೆ ವಿಶ್ವನಾಥ ಶೆಟ್ಟಿರವರು ತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದಿದ್ದಾರೆ. ಬಳಿಕ ಮನೆಯ ಒಳಗಡೆ ಬಂದು ಬಾಗಿಲು ಮುಚ್ಚಿ, ಚಿಲಕ ಹಾಕಿ ಪ್ಲಾಸ್ಟಿಕ್ ಕ್ಯಾನ್ ನಲ್ಲಿದ್ದ ಪೆಟ್ರೊಲ್ ನ್ನು ಮಗನ ಮೈ ಮೇಲೆ ಸುರಿದು ಅಲ್ಲಿಯೇ ಇದ್ದ ಸಿಗರ್ ಲೈಟರ್ ನಿಂದ ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಅ.ಕ್ರ 85/2021 ಕಲಂ 504, 506, 323, 307 ಐಪಿಸಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.