ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್: ಕೋವಿಡ್ 19 ಪರೀಕ್ಷೆಗೆ ಐಸಿಎಂಆರ್ ಅನುಮೋದನೆ
Team Udayavani, May 21, 2020, 7:02 AM IST
ಮಂಗಳೂರು: ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಕೋವಿಡ್ -19 ಪರೀಕ್ಷೆ ನಡೆಸಲು ಐಸಿಎಂಆರ್ ಅನುಮೋದನೆ ನೀಡಿದೆ. ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಪ್ರಾರಂಭಿಸಲು ಬೆಂಗಳೂರಿನ ನಿಮ್ಹಾನ್ಸ್ ಮಾರ್ಗದರ್ಶಿ ಕೇಂದ್ರದಿಂದ ಕಿರುಪಟ್ಟಿ ಪಡೆದ ಕೇಂದ್ರಗಳಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯೂ ಒಂದು. ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಯ ಮೈಕ್ರೋಬಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ| ಅನುಪ್ ಕುಮಾರ್ ಅವರು ಈ ಉದ್ದೇಶಕಾಗಿ ನಿಮ್ಹಾನ್ಸ್‌ನಲ್ಲಿ ತರಬೇತಿ ಪಡೆದಿದ್ದಾರೆ.
ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಪ್ರಯೋಗಾಲಯವು “ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತ ಮಂಡಳಿ’ಯಿಂದ 2012ರಿಂದ ಮಾನ್ಯತೆ ಪಡೆದಿದೆ ಮತ್ತು ಈಗಾಗಲೇ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿದೆ.
ಪ್ರಯೋಗಾಲಯವು ರೋಗಿ ಮತ್ತು ಸಿಬಂದಿಯ ಆರೋಗ್ಯ ಸುರಕ್ಷೆ ವಿಚಾರದಲ್ಲಿ ರಾಷ್ಟ್ರೀಯ/ಅಂತಾರಾಷ್ಟ್ರೀಯ ಗುಣಮಟ್ಟದ ಮಾರ್ಗಸೂಚಿಗಳನ್ನು ಅನುಸರಿಸುತ್ತಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.