ಮಾಸ್ಕ್ ಧರಿಸದವರಿಂದ ದ.ಕ. ಜಿಲ್ಲೆಯಲ್ಲಿ ಒಟ್ಟು 20 ಲಕ್ಷ ರೂ. ದಂಡ ವಸೂಲಿ!
Team Udayavani, Jan 5, 2021, 4:47 AM IST
ಮಹಾನಗರ: ಕೋವಿಡ್ ಹರಡದಂತೆ ಮುಂಜಾಗ್ರತೆ ವಹಿಸುವಲ್ಲಿ ಮಾಸ್ಕ್ ಧರಿಸುವಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಜನ ಮಾತ್ರ ಇನ್ನೂ ಜಾಗೃತಿಗೊಂಡಂತೆ ಕಂಡು ಬರುತ್ತಿಲ್ಲ. ನಗರದಲ್ಲಿ ಮಾಸ್ಕ್ ಧರಿಸದೆಯೇ ತಿರುಗಾಡುವವರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಪೂರಕವೆಂಬಂತೆ ಮಾಸ್ಕ್ ಧರಿಸದವರಿಗೆ ಒಂಬತ್ತು ತಿಂಗಳುಗಳ ಅವಧಿಯಲ್ಲಿ ವಿಧಿಸಲಾದ ದಂಡದ ಮೊತ್ತ 20 ಲಕ್ಷ ರೂ. ದಾಟಿದೆ.
ಕೊರೊನಾ ನಿಯಂತ್ರಣಕ್ಕೆ ಬರಬೇಕಾದರೆ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಸರಕಾರ ಆದೇಶ ಹೊರಡಿಸಿದೆ. ಅದರಂತೆ, ದ್ವಿಚಕ್ರ ವಾಹನಗಳಲ್ಲಿ ತೆರಳುವಾಗ, ನಡೆದಾಡುವಾಗ ಮಾಸ್ಕ್ ಧರಿಸದಿದ್ದರೆ ಅಂತಹವರಿಗ 200 ರೂ. ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ. ದ.ಕ. ಜಿಲ್ಲೆಯೊಂದರಲ್ಲೇ ಈವರೆಗೆ 19,543 ಮಂದಿಗೆ ದಂಡ ವಿಧಿಸಲಾಗಿದ್ದು, ಒಟ್ಟು 20,73,928 ರೂ. ದಂಡ ವಿಧಿಸಲಾಗಿದೆ.
ಜ. 2: 498 ಮಂದಿ ಉಲ್ಲಂಘನೆ
ಹೊಸ ವರ್ಷ ಕಳೆದ ಮರುದಿನದಂದು ಅಂದರೆ ಜ. 2ರಂದು ಬರೋಬ್ಬರಿ 498 ಮಂದಿ ಕೊರೊನಾ ನಿಯಮಾವಳಿ ಉಲ್ಲಂಘನೆ ಮಾಡಿರುವುದು ಗಮನಾರ್ಹ. ಇಷ್ಟೂ ಮಂದಿ ಮಾಸ್ಕ್ ಧರಿಸದೇ ಸಂಚರಿಸಿದ ಕಾರಣಕ್ಕಾಗಿ ಒಟ್ಟು 49,800 ರೂ. ದಂಡ ವಿಧಿಸಿಕೊಂಡಿದ್ದಾರೆ.
ಮಾಸ್ಕ್ ಧರಿಸಿ ನಿಮ್ಮನ್ನು ರಕ್ಷಿಸಿಕೊಳ್ಳಿ
ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಕಡಿಮೆಯಾಗುತ್ತಿದೆ ಎಂಬ ಕಾರಣಕ್ಕಾಗಿ ನಿಯಮಾವಳಿಗಳ ನಿರ್ಲಕ್ಷ್ಯ ಸಲ್ಲದು. ಮಾಸ್ಕ್ ಧರಿಸದೆಯೇ ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಂಚರಿಸುವುದು, ಸನಿಹ ನಿಂತು ಮಾತನಾಡುವುದು ಮುಂತಾದವುಗಳು ಅಪಾಯವನ್ನು ಆಹ್ವಾನಿಸಿದಂತೆ. ಹಾಗಾಗಿ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿ ನಡೆಯಬೇಕು ಎನ್ನುತ್ತಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು.
ಸ್ವಯಂ ಎಚ್ಚರಿಕೆ ಅಗತ್ಯ
ಮಾಸ್ಕ್ ಧರಿಸುವ ಅಭ್ಯಾಸ ನಗರದ ಜನತೆಯಲ್ಲಿ ಕಡಿಮೆಯಾಗುತ್ತಿದೆ. ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲವಾದ್ದರಿಂದ ಮಾಸ್ಕ್ ಧರಿಸಿಯೇ ತೆರಳಬೇಕು. ದಂಡ ವಿಧಿಸುವುದೇ ನಮ್ಮ ಉದ್ದೇಶವಲ್ಲ. ಆದರೆ ಜನ ಎಚ್ಚರಿಕೆ ವಹಿಸಬೇಕೆಂಬ ಕಾರಣಕ್ಕಾಗಿ ದಂಡ ವಿಧಿಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಆಗಾಗ ಕೈ ತೊಳೆದು ಕೊಳ್ಳುವುದನ್ನು ಮರೆಯದಿರಿ.
-ಡಾ| ರಾಮಚಂದ್ರ ಬಾಯರಿ, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.