ಬಡ ದಂಪತಿಗೆ ಮಾಜಿ ಮೇಯರ್ ಸುಧೀರ್ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ
Team Udayavani, Jan 6, 2025, 12:02 AM IST
ಮಂಗಳೂರು: ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ವತಿಯಿಂದ 30ನೇ ಕೊಡಿಯಾಲಬೈಲು ವಾರ್ಡ್ ಸಮಿತಿ ಸಹಕಾರದಿಂದ ಮಂಗಳೂರಿನ ಕೊಡಿಯಾಲಬೈಲು ವಾರ್ಡ್ ವಿವೇಕನಗರದ ಬಳಿ ಗಣೇಶ್ -ರೋಹಿಣಿ ದಂಪತಿಗೆ ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿ ಕೊಡಲಾದ “ಕೇಶವ ಸದನ’ ಮನೆಯ ಗೃಹಪ್ರವೇಶ ಕಾರ್ಯಕ್ರಮ ರವಿವಾರ ನೆರವೇರಿತು.
ದಂಪತಿಗೆ ಮನೆಯ ಕೀಲಿಕೈ ಹಸ್ತಾಂತರಿಸಿ ಮಾತನಾಡಿದ ಆರೆಸ್ಸೆಸ್ ದಕ್ಷಿಣ ಮಧ್ಯಕ್ಷೇತ್ರೀಯ ಸಹ ಸಂಘ ಚಾಲಕ ಡಾ| ವಾಮನ್ ಶೆಣೈ, ಸುಧೀರ್ ಶೆಟ್ಟಿ ತನ್ನ ಹುಟ್ಟುಹಬ್ಬದ ದಿನದಂದೇ ಶ್ರೇಷ್ಠ ಕಾರ್ಯವನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಇಂದು ಸಮಾಜದಲ್ಲಿ ಒಳ್ಳೆಯವರು ದೊಡ್ಡ ಪ್ರಮಾಣದಲ್ಲಿದ್ದಾರೆ. ಪ್ರತಿಯೊಬ್ಬರಿಂ ದಲೂ ಇಂತಹ ಕಾರ್ಯಗಳು ಆಗಬೇಕಾಗಿದೆ ಎಂದರು.
ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಕಣ್ಣೂರು ವಾರ್ಡ್‌ನಲ್ಲಿ ನಾಲ್ಕು ಹಾಗೂ ಕೊಡಿಯಾಲಬೈಲಿನಲ್ಲಿ ಒಂದು ಸೇರಿ ಒಟ್ಟು ಐದು ಮನೆಗಳನ್ನು ನಿರ್ಮಿಸಲಾಗಿದೆ. ಕಳೆದ ಮಳೆಗಾಲ ಸಂದರ್ಭದಲ್ಲಿ ಗಣೇಶ್ ಅವರ ಕುಸಿದು ಬಿದ್ದಿತ್ತು. ಸೂಕ್ತ ದಾಖಲೆಗಳು ಇಲ್ಲದೆ ಸರಕಾರದಿಂದ ಅನುದಾನ ಒದಗಿಸಲು ಸಾಧ್ಯವಾಗಿಲ್ಲ. ವಾರ್ಡ್ ಸಮಿತಿಯ ಪ್ರಮುಖರ ಸಹಕಾರದಿಂದ ಮನೆ ನಿರ್ಮಾಣ ಮಾಡಲಾಗಿದೆ ಎಂದರು.
ಮನೆ ಮಾಲಕ ಗಣೇಶ್ ಮಾತನಾಡಿ, ಕಷ್ಟ ಕಾಲಕ್ಕೆ ನೆರವಾದ ಸುಧೀರ್ ಶೆಟ್ಟಿಗೆ ಕೃತಜ್ಞತೆಗಳು. ಅವರಿಂದ ಮುಂದಿನ ದಿನಗಳಲ್ಲೂ ಇನ್ನಷ್ಟು ಮಂದಿಗೆ ನೆರವು ಸಿಗುವಂತಾಗಲಿ ಎಂದರು.
ಶಾಸಕ ವೇದವ್ಯಾಸ ಕಾಮತ್, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಜಿ.ಪಂ. ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ರಾವ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಪ್ರಮುಖರಾದ ರಾಮದಾಸ್ ಬಂಟ್ವಾಳ, ವಿಜಯ ಕುಮಾರ್ ಶೆಟ್ಟಿ, ಪ್ರಶಾಂತ್ ಆಳ್ವ, ಸುನಿಲ್ ಕುಮಾರ್, ರಮೇಶ್ ಹೆಗ್ಡೆ, ಸಿದ್ಧಾರ್ಥ್ ಉಪಸ್ಥಿತರಿದ್ದರು.
ಶಕ್ತಿ ಕೇಂದ್ರ ಪ್ರಮುಖ್ ವಿವೇಕ ದೇವಾಡಿಗ ಸ್ವಾಗತಿಸಿದರು. ಅಭಿಷೇಕ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.