“ಆರ್ಥಿಕ ಗಣತಿ ಕುರಿತು ಜನರಿಗೆ ಸಂಕ್ಷಿಪ್ತ ಮಾಹಿತಿ ನೀಡಿ’
ಆರ್ಥಿಕ ಗಣತಿ ಕಾರ್ಯಾಚರಣೆ; ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆ
Team Udayavani, Jan 25, 2020, 8:30 PM IST
ಮಹಾನಗರ: ಆರ್ಥಿಕ ಗಣತಿಯ ಕುರಿತು ಜನರಿಗೆ ಮಾಹಿತಿ ನೀಡಬೇಕು. ಮೊಬೈಲ್ ಆ್ಯಪ್ ಮೂಲಕ ಕ್ಷೇತ್ರ ಕಾರ್ಯ ನಡೆಸಲಾಗುತ್ತಿರುವು ದರಿಂದ ಸವಿವರವಾದ ಮಾಹಿತಿಯನ್ನು ಜನರಿಗೆ ಜಾಗೃತಿ ಕಾರ್ಯಕ್ರಮಗಳ ಮೂಲಕ ತಲುಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ 7ನೇ ಆರ್ಥಿಕ ಗಣತಿ ಕಾರ್ಯಾಚರಣೆಯ ಸಂಯೋಜನೆಗೆ ಗುರುವಾರ ನಡೆದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಥಿಕ ಗಣತಿಯ ಕುರಿತು ತಾಲೂಕು ಮಟ್ಟದಲ್ಲಿ ಸಭೆ ಕರೆದು ಪ್ರತೀ ತಾಲೂಕು ತಹಶೀಲ್ದಾರರು, ತಾ.ಪಂ. ಅಧಿಕಾರಿಗಳು, ತಾಲೂಕು ಮಟ್ಟದ ಪೊಲೀಸ್ ಅ ಧಿಕಾರಿಗಳನ್ನು ಒಳಗೊಂಡು ಚರ್ಚಿಸಬೇಕು. ಆರ್ಥಿಕ ಗಣತಿಯ ಮುಖ್ಯ ಉದ್ದೇಶ ಏನು, ಯಾವ ಕಾರಣಕ್ಕಾಗಿ ಈ ಗಣತಿ ಮಾಡಲಾಗುತ್ತದೆ, ಮತ್ತು ಯಾವ ಪ್ರಶ್ನೆಗಳನ್ನು ಯಾಕೆ ಕೇಳಲಾಗುತ್ತದೆ ಎಂಬುದನ್ನು ಮೊದಲು ಜನರಿಗೆ ಮನವರಿಕೆ ಮಾಡಬೇಕು. ಇದೇ ಮೊದಲ ಬಾರಿಗೆ ಗಣತಿ ಕಾರ್ಯ ವನ್ನು ಮೊಬೈಲ್ ಆ್ಯಪ್ ಮೂಲಕ ಕೈಗೊಳ್ಳ ಲಾಗಿರುತ್ತದೆ. ಆ್ಯಪ್‌ನ ವೈಶಿಷ್ಟಗಳು ಯಾವುದು, ಅದನ್ನು ಉಪಯೋಗಿಸುವ ಕ್ರಮಗಳು ಯಾವುದು ಎಂಬ ಪ್ರತಿ ಮಾಹಿತಿ ಜನರಿಗೆ ದೊರಕಬೇಕು ಎಂದರು.
ಜನರು ಮಾಹಿತಿ ನೀಡಲು ಹಿಂಜರಿದರೆ ವಿಶೇಷವಾಗಿ ಆರ್ಥಿಕ ಗಣತಿಯ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನೀಡಿ ಗಣತಿಗೆ ಸ್ಪಂದನೆ ನೀಡುವಂತೆ ಕಾರ್ಯ ನಿರ್ವಹಿಸಬೇಕು. ಗಣತಿಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಚುರುಕಾಗಿ ಆಸಕ್ತಿಯಿಂದ ಈ ಗಣತಿಯನ್ನು ಯಶಸ್ವಿಯಾಗಿಸಬೇಕು ಎಂದರು. ಪುತ್ತೂರು ತಹಶೀಲ್ದಾರ್ ರಾಹುಲ್ ಶಿಂಧೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿ ಕಾರಿ ಡಾ| ಉದಯ ಶೆಟ್ಟಿ, ಸಹಾಯಕ ಸಾಂಖೀಕ ಅಧಿಕಾರಿ ಎ.ಡಿ. ಬೋಪಯ್ಯ, ವಿವಿಧ ತಾಲೂಕು ಅಧಿಕಾರಿಗಳು, ತಹಶೀಲ್ದಾರರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಉತ್ತಮ ಸಹಕಾರ ನೀಡುವಂತೆ ಮಾಹಿತಿ ಪಡೆಯಬೇಕು
7ನೇ ಆರ್ಥಿಕ ಗಣತಿಯಲ್ಲಿ ಕಟ್ಟಡದ ವಿಧ, ಕುಟುಂಬ ವಿವರ, ಸಾಮಾಜಿಕ ಗುಂಪು ಮತ್ತು ಧರ್ಮ, ಆರ್ಥಿಕ ಚಟುವಟಿಕೆಯ ವಿಧ, ಕಾರ್ಯವಿಧಾನ ಸ್ವರೂಪ, ಮನೆಯಲ್ಲಿ ಆರ್ಥಿಕ ಚಟುವಟಿಕೆ ನಡೆಸುವ ಸದಸ್ಯರ ವಿವರ, ಹಣಕಾಸಿನ ಮೂಲ, ಹೂಡಿಕೆ, ವಾರ್ಷಿಕ ವ್ಯವಹಾರ, ಕೆಲಸಗಾರರ ಸಂಖ್ಯೆ, ಘಟಕದ ನೋಂದಣಿಯ ವಿವರ, ಉದ್ಯಮ ಮಾಲಕರ ಲಿಂಗವಾರು ಸಾಮಾಜಿಕ ಗುಂಪುವಾರು ಮಾಹಿತಿಗಳು, ಗಂಡು ಹೆಣ್ಣು ಕೆಲಸಗಾರರು, ಮಜೂರಿದಾರ ಕೆಲಸಗಾರರು, ಮಜೂರಿದಾರರಲ್ಲದ ಕೆಲಸ ಗಾರರು ಇವರ ಉದ್ದಿಮೆಗಾಗಿ ಹಣಕಾಸಿನ ಮೂಲ ಇತ್ಯಾದಿ ಮಾಹಿತಿಗಳು ಈ ಗಣತಿಯಲ್ಲಿ ಸಂಗ್ರಹವಾಗುತ್ತವೆೆ. ಗಣತಿ ಸಂದರ್ಭದಲ್ಲಿ ಉತ್ತಮವಾದ ಸಹಕಾರ ನೀಡುವಂತೆ ಮಾಹಿತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.