Mangaluru Airport; ಪ್ರಯಾಣಿಕರಿಂದ 48.75 ಲಕ್ಷ ರೂ.ಮೌಲ್ಯದ ಚಿನ್ನ, ಇ-ಸಿಗರೇಟ್ ವಶ
Team Udayavani, Dec 7, 2024, 6:12 PM IST
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಡಿ1 ಮತ್ತು 2 ರಂದು ಅನುಮಾನದ ಮೇಲೆ ಇಬ್ಬರು ಪ್ರಯಾಣಿಕರನ್ನು ತಡೆದು ತಪಾಸಣೆ ನಡೆಸಿದಾಗ ಭಾರೀ ಪ್ರಮಾಣದ ಕಳ್ಳಸಾಗಣೆ ಚಟುವಟಿಕೆಗಳನ್ನು ಬಯಲು ಮಾಡಿದ್ದಾರೆ.
ಕೇರಳದ ಕಾಸರಗೋಡಿನ ನಿವಾಸಿಗಳಾದ ಪ್ರಯಾಣಿಕರು ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳಲ್ಲಿ ಬಂದಿದ್ದರು.
ಪರಿಶೀಲನೆ ವೇಳೆ ಒಬ್ಬ ಪ್ರಯಾಣಿಕನ ದೇಹದಲ್ಲಿ ಬಚ್ಚಿಟ್ಟಿದ್ದ ಮೂರು ಅಂಡಾಕಾರದ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡು 625 ಗ್ರಾಂ ತೂಕದ 48.75 ಲಕ್ಷ ರೂ.ಮೌಲ್ಯದ 24 ಕ್ಯಾರೆಟ್ ಚಿನ್ನ ಪತ್ತೆಯಾಗಿದೆ.
ಕಸ್ಟಮ್ಸ್ ತಂಡವು ಚೆಕ್-ಇನ್ ಬ್ಯಾಗೇಜ್ನಲ್ಲಿ ರಟ್ಟಿನ ಪೆಟ್ಟಿಗೆಯೊಳಗೆ ಮರೆಮಾಡಿ ಇಟ್ಟಿದ್ದ 1.41 ಲಕ್ಷ ಮೌಲ್ಯದ ಇ-ಸಿಗರೆಟ್ಗಳ ಪಾಡ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.