‘ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಸರಕಾರದ್ದು’
Team Udayavani, Jun 29, 2019, 5:00 AM IST
ಸುರತ್ಕಲ್: ಜನರ ಸಂಕಷ್ಟ ಗಳಿಗೆ ಸ್ಪಂದಿಸಬೇಕಾದ್ದು ಸರಕಾರದ ಜವಾಬ್ದಾರಿ. ಆದರೆ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಓಟು ಬಿಜೆಪಿಗೆ ಹಾಕಿದ ಮತದಾರರ ಮೇಲೆ ಆಕ್ರೋಶ ಗೊಳ್ಳುತ್ತಿರುವುದು ಖೇದಕರ ಎಂದು ಶಾಸಕ ಡಾ| ಭರತ್ ಶೆಟ್ಟಿ ವೈ. ಹೇಳಿದರು.
ಸುರತ್ಕಲ್ನಲ್ಲಿ ಶುಕ್ರವಾರ ಸಾರ್ವಜನಿಕ ಅಹವಾಲು ಸ್ವೀಕರಿಸಿ ಮಾಧ್ಯಮದೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಸ್ಥಾನ ಗೌರವಯುತವಾದುದು. ಅಧಿಕಾರ ಸ್ವೀಕರಿಸಿದ ಬಳಿಕ ಮತದಾರರ ನಡುವೆ ಯಾವುದೇ ಭೇದಭಾವ ಸಲ್ಲದು. ಎಲ್ಲರಿಗೂ ಸಮಾನವಾದ ಅಭಿವೃದ್ಧಿಯ ಕೆಲಸವನ್ನು, ಬೇಡಿಕೆಗಳನ್ನು ಈಡೇರಿಸ ಬೇಕಾಗುತ್ತದೆ. ಆದರೆ ಈಗಿನ ಮುಖ್ಯಮಂತ್ರಿಗಳು ಜನರ ನಡುವೆ ಬೆರೆಯುವ ಬದಲು ದೂರ ವಾಗುತ್ತಿದ್ದಾರೆ ಎಂದರು.
ಸಮ್ಮಿಶ್ರ ಸರಕಾರದ ಅಸ್ಥಿರತೆಯ ನಡುವೆ ಅಭಿವೃದ್ಧಿ ಕಾಮಗಾರಿಗಳು ಕುಂಠಿತ ವಾಗುತ್ತಾ ಹೋಗುತ್ತಿದೆ. ಅನುದಾನಗಳು ಬಿಡುಗಡೆಯಾಗುವಲ್ಲಿ ವಿಳಂಬವಾಗುತ್ತಿದೆ. ರಾಜ್ಯದಲ್ಲಿ ಬರದ ಛಾಯೆ ಆತಂಕ ತಂದಿದ್ದು, ಸರಕಾರ ಈಗಿನಿಂದಲೇ ಬರ ನಿರ್ವಹಣೆಗೆ ವಿಶೇಷ ಪ್ಯಾಕೇಜ್ ಸಹಿತ ಸವಲತ್ತು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸರಕಾರವನ್ನು ಆಗ್ರಹಿಸಿದರು.
ಬಿಜೆಪಿ ಮುಖಂಡರಾದ ಗಣೇಶ್ ಹೊಸಬೆಟ್ಟು, ಲೋಕೇಶ್ ಬೊಳ್ಳಜೆ, ಕಿರಣ್ ಕುಮಾರ್ ಕೋಡಿಕಲ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.