Gurupura Kaikamba ಪೇಟೆ; ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಯ ತ್ಯಾಜ್ಯ ನೀರು
Team Udayavani, Apr 14, 2023, 4:14 PM IST
ಕೈಕಂಬ: ಗುರುಪುರ-ಕೈಕಂಬ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿಗಳು ನಡೆಯುತ್ತಿದ್ದು ಗಂಜಿ ಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿಗಳ ಮೇಲೆ ಮಣ್ಣು ಹಾಕಿದ ಕಾರಣ ಚರಂಡಿಯಲ್ಲಿ ಹರಿಯುವ ನೀರು ಈಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿದು ಹೋಗುತ್ತಿದೆ. ಹೆದ್ದಾರಿಯೇ ತ್ಯಾಜ್ಯ ನೀರು ಶೇಖರಣೆಯಾಗಿ ಪರಿಸರವೆಲ್ಲ ದುರ್ನಾತ ಹಾಗೂ ಸೊಳ್ಳೆ ಉತ್ಪತ್ತಿಗೆ ಕಾರಣವಾಗಿದೆ. ಕಳೆದ ಒಂದು ವಾರದಿಂದ ಈ ಚರಂಡಿಯಲ್ಲಿ ಹೊಟೇಲ್, ಅಂಗಡಿಗಳ ತ್ಯಾಜ್ಯ ನೀರು ಈ ರೀತಿ ಯಾಗಿ ಹರಿದು ಹೋಗುತ್ತಿದೆ. ಕೆಟ್ಟವಾಸನೆಯಿಂದ ಜತೆಗೆ ವಾಹನಗಳು ಸಂಚರಿ ಸುವಾಗ ತ್ಯಾಜ್ಯ ನೀರು ಪಾದಚಾರಿಗಳ ಮೇಲೆ ಎರಚಲ್ಪಡುತ್ತಿದೆ.
ತ್ಯಾಜ್ಯ ನೀರು ಹೆದ್ದಾರಿಯ ಪಕ್ಕದಲ್ಲಿಯೇ ಶೇಖರಣೆ
ಚರಂಡಿಯಲ್ಲಿ ತುಂಬಿ ತುಳುಕುವ ತ್ಯಾಜ್ಯ ನೀರು ರಾಷ್ಟ್ರೀಯ ಹೆದ್ದಾರಿಯ ಒಂದು ಬದಿ ಯಿಂದ ಹರಿದು ಹೆದ್ದಾರಿ ಇನ್ನೊಂದು ಬದಿ ಯಲ್ಲಿ ಶೇಖರಣೆಯಾಗಿದೆ. ಇದು ಸೊಳ್ಳೆ ಉತ್ಪತ್ತಿಗೆ ಕಾರಣವಾಗಲಿದೆ. ಮಧ್ಯಾಹ್ನ 11ರ ವೇಳೆ ಮತ್ತು ಸಂಜೆ ವೇಳೆಗೆ ತ್ಯಾಜ್ಯ ನೀರಿನ ಪ್ರಮಾಣ ಜಾಸ್ತಿಯಾಗಿರುತ್ತದೆ. ಪ್ರಮಾಣ ಜಾಸ್ತಿಯಾದಂತೆ ವಾಹನ ಸಂಚರಿಸುವಾಗ ತ್ಯಾಜ್ಯ ನೀರು ದೂರದವರೆಗೆ ಎರಚಲ್ಪಡುತ್ತದೆ.
ತಾತ್ಕಾಲಿಕ ವ್ಯವಸ್ಥೆಗೆ ಸಾರ್ವಜನಿಕರ ಆಗ್ರಹ
ಚರಂಡಿಯಲ್ಲಿ ಹೊಟೇಲ್ ಹಾಗೂ ವಸತಿ ಸಮುಚ್ಚಯ, ಅಂಗಡಿಗಳ ತ್ಯಾಜ್ಯ ನೀರು ಹರಿಯುತ್ತಿದೆ. ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂಗು ಗುಂಡಿ ತೆಗೆದು ಅದರಲ್ಲಿ ಬಿಡಬೇಕು. ತಾತ್ಕಾಲಿಕವಾಗಿ ವ್ಯವಸ್ಥೆಯನ್ನು ಹೆದ್ದಾರಿ ಇಲಾಖೆ ಮಾಡಬೇಕು. ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಗಮನಿಸಿ ಶೀಘ್ರ ಕಾರ್ಯವೆಸಗಬೇಕು ಎಂದು ಸಾರ್ವಜನಿಕರು ಅಗ್ರಹಿಸಿದ್ದಾರೆ. ಈ ಬಗ್ಗೆ ಹೆದ್ದಾರಿ ಇಲಾಖೆಯ ಎಂಜಿನಿಯರ್‌ಗೆ ತಿಳಿಸಲಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.