ಸೇತುವೆ ನಿರ್ಮಾಣಕ್ಕೆ ಸಮತಟ್ಟು ಕಾರ್ಯ ಆರಂಭ
Team Udayavani, Jan 19, 2019, 6:07 AM IST
ಗುರುಪುರ : ಬರೋಬ್ಬರಿ 96 ವರ್ಷಗಳಷ್ಟು ಕಾಲ ಹಳೆಯದಾಗಿರುವ ಗುರುಪುರ ಸೇತುವೆಗೆ ಪರ್ಯಾಯ ವಾಗಿ ನಿರ್ಮಾಣಗೊಳ್ಳಲಿರುವ ನೂತನ ಸೇತುವೆಯ ಜಮೀನು ಸಮತಟ್ಟು ಕಾರ್ಯ ಆರಂಭಗೊಂಡಿದೆ.
ಮಂಗಳೂರು- ಮೂಡಬಿದಿರೆ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169 ಹಾದುಹೋಗಲಿರುವ ರಸ್ತೆಯ ಗುರುಪುರದ ಫಲ್ಗುಣಿ ನದಿಗೆ ಅಡ್ಡಲಾಗಿ ಕುದುರೆಗಾಡಿ ಹಾದುಹೋಗಲೆಂದು ಬ್ರಿಟಿಷರು 1923ರಲ್ಲಿ ಈ ಸೇತುವೆಯನ್ನು ನಿರ್ಮಿಸಿದ್ದರು. ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದ ಬಳಿಕವೂ ಇದೇ ಸೇತುವೆಯಲ್ಲಿ ಸಾವಿರಾರು ವಾಹನಗಳು ಸಂಚಾರ ನಡೆಸುತ್ತಿದ್ದು, ಸಂಪೂರ್ಣವಾಗಿ ಶಿಥಿಲಾವಸ್ಥೆಗೊಂಡಿದೆ.
ಕಳೆದ ಮಳೆಗಾಲದ ವೇಳೆ ಮೂಲರಪಟ್ಣ ಸೇತುವೆ ಕುಸಿದುಬಿದ್ದ ಬಳಿಕ ಗುರುಪುರ ಸೇತುವೆಯ ದೃಢತೆಯ ಬಗ್ಗೆ ಆತಂಕ ಉಂಟಾಗಿತ್ತು. ಪಿಡಬ್ಲ್ಯೂಡಿ ಅಧಿಕಾರಿಗಳ ತಂಡ ಆಗಮಿಸಿ ಸೇತುವೆಯ ಧಾರಣಾ ಸಾಮರ್ಥ್ಯವನ್ನು ಪರೀಕ್ಷೆ ನಡೆಸಿ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ವಾಹನಗಳ ತೂಕ (ಸಾಂದ್ರತೆ)ಕ್ಕೆ ತಕ್ಕಂತೆ ಸೇತುವೆಯು ಧಾರಣೆಯ ಶಕ್ತಿ ಹೊಂದಿಲ್ಲ ಎಂದಿತ್ತು. ಈ ಹಿನ್ನೆಲೆಯಲ್ಲಿ ನೂತನ ಸೇತುವೆಗೆ ಕಾಮಗಾರಿ ನಡೆಸಲಾಗುತ್ತಿದೆ.
ಮಂಗಳೂರಿನಿಂದ ಮೂಡಬಿದಿರೆಗೆ ಸಾಗುವ ಸೇತುವೆಯ ಎಡಭಾಗದಲ್ಲಿ ಈ ನೂತನ ಸೇತುವೆ ನಿರ್ಮಾಣಗೊಳ್ಳಲಿದೆ. ಸೇತುವೆಯ ಎರಡೂ ಭಾಗದಲ್ಲಿ ಮಣ್ಣು ಸಮತಟ್ಟು ನಡೆಸಿ ಪಿಲ್ಲರ್‌ಗಳಿಗೆ ಗುರುತು ಹಾಕುವ ಕೆಲಸ ನಡೆದಿದೆ. ಹಳೆ ಸೇತುವೆಯು 4.5 ಮೀಟರ್ ಅಗಲವಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ನೂತನ ಸೇತುವೆ 11 ಮೀ. ಅಗಲ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.