ಗುರುಗಳ ಸಂದೇಶ ಎಲ್ಲ ಕಾಲಕ್ಕೂ ಅನ್ವಯ: ಸ್ವಾಮೀಜಿ


Team Udayavani, Sep 19, 2019, 4:00 AM IST

q-14

ಮಂಗಳಗಂಗೋತ್ರಿ: ಮಾನವೀಯ ಮೌಲ್ಯ ಮನುಷ್ಯತ್ವದ ಸವಿಗುಣಗಳನ್ನು ಪ್ರದರ್ಶಿ ಸುತ್ತಾ ಮಾನವ ಹೇಗೆ ಇರಬೇಕು, ಹೇಗೆ ಬದುಕಿದರೆ ಶಾಶ್ವತವಾದ ಶಾಂತಿ ಸಮಾಧಾನ ಸಿಗುತ್ತದೆ ಎಂಬುದನ್ನು ತೋರಿಸಿಕೊಟ್ಟ ಮಹಾನ್‌ ಚೇತನ ಬ್ರಹ್ಮಶ್ರೀ ನಾರಾಯಣಗುರುಗಳು ಅಂದು ಅವರು ನೀಡಿದ ಸಂದೇಶ ಎಲ್ಲ ಕಾಲಕ್ಕೆ ಅನ್ವಯವಾಗುವಂತದ್ದು ಎಂದು ಶಿರ್ತಾಡಿ ಬಲ್ಲೊಟ್ಟು ಗುರುಕೃಪ ಸೇವಾಶ್ರಮದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಆಡಿಟೋರಿಯಂನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ವತಿಯಿಂದ ಮಂಗಳವಾರ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ -2019ರಲ್ಲಿ ಭಾಗವಹಿಸಿ ಆಶಿರ್ವಚನ ನೀಡಿದರು.

ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್‌ ಮಾತನಾಡಿ ಅಧ್ಯಯನ ಪೀಠಗಳು ಪರಸ್ಪರ ವಿಶ್ವಾಸ ಮೂಡಿಸಲು ಪ್ರಯತ್ನಿಸಬೇಕು. ಅಧ್ಯಯನ ಪೀಠದ ಕಾರ್ಯಕ್ರಮ ಬಲಿಷ್ಠ ಭಾರತ ಕಟ್ಟಲು ನೆರವಾಗಬೇಕು. ಸರಕಾರ ಮಂಗಳೂರು ವಿವಿಯ ಇಪ್ಪತ್ತಮೂರು ಅಧ್ಯಯನ ಪೀಠಕ್ಕೂ ತಲಾ ಎರಡು ಕೋಟಿ ರೂ. ಮೀಸಲಿಡಲಿ. ಆ ಮೂಲಕ ಬಹಳಷ್ಟು ಕಾರ್ಯಕ್ರಮ ನಡೆಸಲು ಸಾಧ್ಯವಾಗುತ್ತದೆ. ಅದಕ್ಕಾಗಿ ಜಾಗ ವಿವಿ ಕೊಟ್ರೆ ಅನುದಾನ ನಾವು ಮಂಜೂರು ಮಾಡಿಸಿ ಸುಂದರ ಕಟ್ಟಡ ನಿರ್ಮಿಸಿ ಕೊಡುತ್ತೇವೆ. ಅದರಲ್ಲಿ ಸುಂದರ ಸಭಾಂಗಣ ಹಾಗೂ ಎಲ್ಲ ಅಧ್ಯಯನ ಪೀಠಕ್ಕೆ ಕಚೇರಿ ನಿರ್ಮಿಸಲು ಸಾಧ್ಯವಾಗುತ್ತದೆ ಎಂದರು.

ಕಲಾವಿಭಾಗದ ಡೀನ್‌ ಪ್ರೊ| ಕಿಶೋರಿ ನಾಯಕ್‌ ಅಧ್ಯಕ್ಷತೆ ವಹಿಸಿದ್ದರು.ಅಖೀಲ ಭಾರತ ಬಿಲ್ಲವರ ಯೂನಿಯನ್‌ ಅಧ್ಯಕ್ಷ ನವೀನ್‌ ಚಂದ್ರ ಡಿ. ಸುವರ್ಣ ಹಾಗೂ ನಾರಾಯಣಗುರು ಅಧ್ಯಯನ ಪೀಠದ ಸಲಹಾ ಮಂಡಳಿ ಸದಸ್ಯೆ ಪ್ರೊ| ಮರಿಯ ಡಿ.ಕೋಸ್ಟ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ “ಗುರುವಿನ ಅರಿವು ಸ್ಪರ್ಧಾ ಪ್ರಬಂಧಗಳ ಸಂಕಲನ’ ಕೃತಿ ಬಿಡುಗಡೆಗೊಳಿಸಲಾಯಿತು.

ಭಾಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿಜಯಪುರದಲ್ಲಿ ನಡೆದ ನೃತ್ಯರೂಪಕದಲ್ಲಿ ಬಹುಮಾನ ವಿಜೇತ ನಾಟಕ ತಂಡದ ನಿರ್ದೇಶಕ ಅರವಿಂದ ಚೊಕ್ಕಾಡಿ ಹಾಗೂ ನೃತ್ಯರೂಪಕ ಪ್ರದರ್ಶಿಸಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

ಹುಸೇನ್‌ ಕಾಟಿಪಳ್ಳ ಅವರು ನಾರಾಯಣಗುರು ಕುರಿತಾದ ಹಾಡನ್ನು ಬ್ಯಾರಿ ಭಾಷೆಯಲ್ಲಿ ಹಾಡಿದರು. ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕ ಮುದ್ದು ಮೂಡುಬೆಳ್ಳೆ ಸ್ವಾಗತಿಸಿದರು.ಕನ್ನಡ ವಿಭಾಗ ಸಂಶೋಧನಾ ವಿದ್ಯಾರ್ಥಿ ಶಿವರಾಜು ಎಸ್‌. ನಿರೂಪಿಸಿ, ಡಾ| ರವಿರಾಜ್‌ ಬಿ.ವಿ. ವಂದಿಸಿದರು.

ನಾರಾಯಣಗುರುಗಳ ಸಂದೇಶ ಎಲ್ಲ ಕಾಲಕ್ಕೂ ಪ್ರಸ್ತುತ
ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಕಾಲಘಟ್ಟದಲ್ಲಿ ಬ್ರಿಟಿಷರ ಆಡಳಿತವಿತ್ತು. ಬಡತನ ಸಹಿಸಲಾರದಷ್ಟಿತ್ತು.
ಅಂತಹ ಕಾಲಘಟ್ಟದಲ್ಲಿಯೂ ಶಿಕ್ಷಣದ ಮೂಲಕವೇ ಅಭಿವೃದ್ಧಿ ಸಾಧ್ಯ ಎಂದು ನಾರಾಯಣ ಗುರುಗಳು ಪ್ರತಿಪಾದಿಸಿದ್ದು ಒಬ್ಬ ದಾರ್ಶನಿಕನಾಗಿ ಅವರು ಕೊಟ್ಟ ಸಂದೇಶ ಎಲ್ಲ ಕಾಲಕ್ಕೂ ಪ್ರಸ್ತುತ, ಕಾಲಾತೀತವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.