ಸೌಹಾರ್ದಕ್ಕಾಗಿ ಪ್ರಾರ್ಥಿಸಿ: ಜಮೀರ್ ಅಹ್ಮದ್
Team Udayavani, Jul 22, 2018, 12:45 PM IST
ಬಜಪೆ: ಜೀವನದಲ್ಲಿ ಒಮ್ಮೆಯಾದರೂ ಹಜ್ ಯಾತ್ರೆ ನಡೆಸಬೇಕು ಎಂದು ಪ್ರತಿಯೊಬ್ಬ ಮುಸಲ್ಮಾನ ಬಯಸುತ್ತಾನೆ. ಎಲ್ಲರಿಗೂ ಆ ಅವಕಾಶ ಸಿಗುವುದಿಲ್ಲ. ಶ್ರೀಮಂತರು ಇತರರನ್ನು ಹಜ್‌ಗೆ ಕಳುಹಿಸಬೇಕು, ಆಗ ಪುಣ್ಯ ಸಿಗುತ್ತದೆ. ಯಾತ್ರಿಗಳು ಒಗ್ಗಟ್ಟು, ಸೌಹಾರ್ದ ಬಾಳುವಂತೆ, ದೇಶ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಬೇಕು ಎಂದು ರಾಜ್ಯ ಹಜ್, ವಕ್ಫ್ ಮತ್ತು
ಅಲ್ಪಸಂಖ್ಯಾಕ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಬಜಪೆ ಅನ್ಸಾರ್ ಆಂಗ್ಲ ಮಾಧ್ಯಮ ಶಾಲೆಯ ಸಭಾಭವನದಲ್ಲಿ ಭಾರತೀಯ ಹಜ್ ಸಮಿತಿ ಮೂಲಕ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಪವಿತ್ರ ಹಜ್ ಯಾತ್ರೆಯ ಪ್ರಥಮ ತಂಡಕ್ಕೆ ಶನಿವಾರ ಚಾಲನೆ ನೀಡಿದರು. ಅಡ್ಯಾರ್‌ನಲ್ಲಿ ಹಜ್ ಭವನ ಹಜ್ ಭವನಕ್ಕೆ ಬಜಪೆ ಸಮೀಪ ಮಂಜೂರಾದ ಸ್ಥಳ ಕೈಬಿಟ್ಟು ಅಡ್ಯಾರ್‌ನಲ್ಲಿ ಖಾಸಗಿ ಜಾಗ ಪರಿಶೀಲನೆ ಮಾಡ
ಲಾಗಿದೆ. ಅಲ್ಲಿ ಹಜ್ ಭವನ ನಿರ್ಮಿಸುವ ಯೋಜನೆ ಇದೆ ಎಂದರು.ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಖಾಜಿ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್, ಮಂಗಳೂರು ಹಜ್ ಕ್ಯಾಂಪ್‌ನ ನಿರ್ವಹಣ ಸಮಿತಿ ಅಧ್ಯಕ್ಷ ವೈ. ಮಹಮದ್ ಕುಂಞಿ, ಪ್ರ. ಕಾರ್ಯದರ್ಶಿ ಎಸ್.ಎಂ.ರಶೀದ್, ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಯು.ಕೆ. ಮೋನು, ಕೆ.ಪಿ. ಇಬ್ರಾಹಿಂ, ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್.ಎಂ. ಮಸೂದ್ ಇದ್ದರು. ಹಜ್ ಸಮಿತಿ ಇಒ ಸಫ್ìರಾಜ್ ಖಾನ್ ಸರ್ದಾರ್ ಸ್ವಾಗತಿಸಿದರು.
6,624 ಮಂದಿ
ರಾಜ್ಯದ 6,624 ಸಹಿತ ಭಾರತದಿಂದ ಈ ಬಾರಿ 1.73 ಲಕ್ಷ ಮಂದಿ ಹಜ್ ಯಾತ್ರೆ ಮಾಡಲಿದ್ದಾರೆ. ಒಟ್ಟು 18,427 ಅರ್ಜಿಗಳು ಬಂದಿದ್ದವು. ದ.ಕ., ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರಿನ 432 ಮಂದಿ 42 ದಿನಗಳ ಯಾತ್ರೆ ಕೈಗೊಳ್ಳಲಿದ್ದಾರೆ.
ಸೆ. 1-3ರಂದು ವಾಪಸಾಗುವರು ಎಂದು ಕೆ.ಎಂ. ಅಬೂಬಕರ್ ಮೋಂಟುಗೋಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.