Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
ಹೊಂಡಗುಂಡಿಗಳಿಂದ ತುಂಬಿರುವ ರಸ್ತೆ; ಸಂಚಾರ ದುಸ್ತರ
Team Udayavani, Nov 26, 2024, 2:58 PM IST
ಹಂಪನಕಟ್ಟೆ: ಹಂಪನಕಟ್ಟೆ ಸಿಗ್ನಲ್ (ಐಡಿಯಲ್ಸ್) ಬಳಿಯಿಂದ ಸೆಂಟ್ರಲ್ ಮಾರ್ಕೆಟ್ ಕಡೆಗೆ ಸಾಗುವ ಸುಮಾರು 100 ಮೀ. ಉದ್ದದ ರಸ್ತೆ ಹೊಂಡಗುಂಡಿಗಳಿಂದ ಕೂಡಿದ್ದು, ಸಾರ್ವಜನಿಕರಿಗೆ, ಲಘು ವಾಹನಗಳಿಗೆ ಸಂಚಾರಿಸಲು ದುಸ್ತರವಾಗಿದೆ. ತೇಪೆ ಹಾಕಿದರೂ ಮತ್ತೆ ಮತ್ತೆ ಗುಂಡಿಗಳು ಉಂಟಾಗುತ್ತಿದೆ. ಕಳೆದ ಹದಿನೈದು ವರ್ಷಗಳಿಂದ ಈ ರಸ್ತೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ರಸ್ತೆ ಅಭಿವೃದ್ಧಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿಬಂದಿದೆ.
ರಸ್ತೆಯ ಇಕ್ಕೆಲಗಳಲ್ಲಿ ಅಂಗಡಿ ಮಳಿಗೆಗಳಿದ್ದು, ಅತೀ ಹೆಚ್ಚಿನ ವ್ಯಾಪಾರ ವಹಿವಾಟು ಕೂಡ ಇಲ್ಲಿ ನಡೆಯುತ್ತದೆ. ಪ್ರತಿ ನಿತ್ಯ ಸಾವಿರಾರು ಮಂದಿ ಈ ರಸ್ತೆಯಲ್ಲಿ ಅಡ್ಡಾಡುತ್ತಾರೆ. ಆಟೋ, ದ್ವಿ ಚಕ್ರ ವಾಹನಗಳಿಗೂ ಸಂಚಾರಕ್ಕೆ ಅವಕಾಶವಿದೆ. ಆದರೆ ರಸ್ತೆಯ ಅವ್ಯವಸ್ಥೆಯಿಂದ ಸಂಚಾರಿಸುವುದೇ ತ್ರಾಸದಾಯಕವಾಗಿದೆ.
ನಗರದ ವಿವಿಧೆಡೆ ಗಲ್ಲಿ ಗಲ್ಲಿಗಳಲ್ಲೂ ಕಾಂಕ್ರೀಟ್ ರಸ್ತೆಯಿದ್ದರೆ, ಈ ರಸ್ತೆ ಮಾತ್ರ ಡಾಮರು ರಸ್ತೆಯಾಗಿದೆ. ಗುಂಡಿ ಎದ್ದಾಗ ಒಮ್ಮೆ ತೇಪೆ ಕಾಣುತ್ತದೆ. ಇದನ್ನು ಹೊರತು ಪಡಿಸಿ ಪೂರ್ಣ ಪ್ರಮಾಣದಲ್ಲಿ ರಸ್ತೆಯ ಅಭಿವೃದ್ಧಿ ಕೆಲಸ ಇಲ್ಲಿಯ ವರೆಗೆ ನಡೆದಿಲ್ಲ.
ಚರಂಡಿ ವ್ಯವಸ್ಥೆಯೂ ಇಲ್ಲ
ಸೂಕ್ತ ಚರಂಡಿ ವ್ಯವಸ್ಥೆ ಎನ್ನುವುದು ಈ ರಸ್ತೆಯಲ್ಲಿ ಕಾಣುವುದಿಲ್ಲ. ಪರಿಣಾಮ ಮಳೆಗಾಲದಲ್ಲಿ ರಸ್ತೆಯಲ್ಲೇ ನೀರು ಹರಿದು ಹೋಗುತ್ತದೆ. ರಸ್ತೆ ಮಟ್ಟಕ್ಕಿಂತ ಕೆಳಗಿರುವ ಕೆಲವು ಅಂಗಡಿಗಳಿಗೆ ನೀರು ನುಗ್ಗಿರುವ ಉದಾಹರಣೆಗಳೂ ಇವೆ. ಆದ್ದರಿಂದ ಶೀಘ್ರದಲ್ಲಿ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಮಹಾನಗರ ಪಾಲಿಕೆ ಮುಂದಾಗಬೇಕು ಎಂದು ಸ್ಥಳೀಯ ವರ್ತಕರು ಆಗ್ರಹಿಸಿದ್ದಾರೆ.
ಶೀಘ್ರ ರಸ್ತೆ ಅಭಿವೃದ್ಧಿ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮನಪಾ ಅಧಿಕಾರಿಗಳು, ಮಾರ್ಕೆಟ್ ರಸ್ತೆ ಅಭಿವೃದ್ಧಿಗೆ ಈಗಾಗಲೇ ಯೋಜನೆ ರೂಪಿಸಲಾಗಿದೆ. ಆರಂಭದಲ್ಲಿ ಒಳಚರಂಡಿಗೆ ಜಾಲವನ್ನು ಸರಿಪಡಿಸುವ ಕೆಲಸಗಳು ನಡೆಯಲಿದೆ. ಆ ಬಳಿಕ ರಸ್ತೆ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ. ಕಾಮಗಾರಿ ವೇಳೆ ಸ್ಥಳೀಯ ಅಂಗಡಿಯವರಿಗೂ ಸಮಸ್ಯೆಯಾಗುವ ಅಗತ್ಯವಿದ್ದು, ಸಹಕಾರ ಅಗತ್ಯ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.