ನೆರೆಯಿಂದ ವಿವಿಧೆಡೆ ಮುಳುಗಡೆ; ಭಾರೀ ಗಾಳಿಗೆ ಬೆಚ್ಚಿದ ಜನತೆ

Team Udayavani, Aug 8, 2019, 5:00 AM IST

p-9

ಮಹಾನಗರ: ಎರಡು ದಿನಗಳಿಂದ ದಕ್ಷಿಣ ಕನ್ನಡ ಸಹಿತ ಸೇರಿದಂತೆ ಮಂಗಳೂರು ನಗರದಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಬುಧವಾರದಂದು ಕೊಂಚ ವಿರಾಮ ನೀಡಿದೆ. ಬುಧವಾರ ಬೆಳಗ್ಗೆಯಿಂದ ನಗರದಲ್ಲಿ ಉತ್ತಮ ಮಳೆಯಾಗಿದ್ದು, ಮಂಗಳವಾರಕ್ಕೆ ಹೋಲಿಸಿದರೆ ತುಸು ಕಡಿಮೆಯಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ.7, 8ರಂದು ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಈಗಾಗಲೇ ರೆಡ್‌ ಅಲರ್ಟ್‌ ಘೋಷಣೆ ಮಾಡಿತ್ತು. ಇದೇ ಕಾರಣಕ್ಕೆ ಜಿಲ್ಲಾಡಳಿತವು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ವಿದ್ಯುತ್‌ ತಂತಿಗೆ ಬಿದ್ದ ಮರ

ನಗರದಲ್ಲಿ ಉಂಟಾಗಿದ್ದ ಗಾಳಿಗೆ ಬಿಜೈನ ಭಾರತಿ ನಗರದಲ್ಲಿ ವಿದ್ಯುತ್‌ ತಂತಿಗೆ ಮರವೊಂದು ಬಿದ್ದು ಕೆಲವು ಕಾಲ ವಿದ್ಯುತ್‌ ಸ್ಥಗಿತಗೊಂಡಿತ್ತು. ಸುರಿದ ಮಳೆಯಿಂದಾಗಿ ನಗರದ ಕೆಲವು ಕಡೆಗಳಲ್ಲಿ ಕೃತಕ ನೆರೆ ತುಂಬಿಕೊಂಡಿತ್ತು. ನಗರ ಕೆಲವು ಕಡೆಗಳಲ್ಲಿ ಒಳಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ, ರಸ್ತೆಯಲ್ಲೇ ಕೊಳಚೆ ನೀರು ಹರಿಯುತ್ತಿತ್ತು.

ಹವಾಮಾನ ಇಲಾಖೆಯ ಮುನ್ಸೂ ಚನೆಯ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಂಭವವಿದೆ.

ಸುರತ್ಕಲ್ ಭಾರೀ ಮಳೆ
ಸುರತ್ಕಲ್: ಬುಧವಾರ ಸಂಜೆಯ ವೇಳೆ ಭಾರೀ ಗಾಳಿ ಬೀಸಿದ ಕಾರಣ ಸಾರ್ವಜನಿಕರು ಬೆಚ್ಚಿದ ಘಟನೆ ನಡೆಯಿತು. ಮರಗಳನ್ನು ಅರ್ಧಕ್ಕೆ ಭಾಗಿಸುವಷ್ಟು ಗಾಳಿ ಬೀಸಿದರೆ, ಪಾದಚಾರಿಗಳು ಗಾಳಿಗೆ ನಡೆಯಲಾರದೆ ಕಟ್ಟಡಗಳಲ್ಲಿ ಆಶ್ರಯ ಪಡೆದರು. ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸುರತ್ಕಲ್ ಬೈಕಂಪಾಡಿ ಸಹಿತ ವಿವಿಧೆಡೆ ತಗ್ಗು ಪ್ರದೇಶಗಳು ಮುಳು ಗಡೆಯಾದರೆ, ಮರ, ಮೆಸ್ಕಾಂ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಸುರತ್ಕಲ್ ಬಳಿ ಮುಧವಾರ ಸಂಜೆ ಬೀಸಿದ ಗಾಳಿಗೆ ಮರವೊಂದು ಮನೆ ಮೇಲೆ ಬಿದ್ದು ಅಪಾರ ಹಾನಿಯಾಗಿದೆ.

ಕಳಪೆ ಕಾಮಗಾರಿಯಿಂದ ರಸ್ತೆ ಹಾನಿಗೀಡಾಗಿದ್ದು, ಟೋಲ್ ನೀಡುವುದಿಲ್ಲ ಎಂದು ಸಾರ್ವಜನಿಕರೊಬ್ಬರು ನಿರಾಕರಿಸಿ ಟೋಲ್ ಕೇಂದ್ರದ ಸಿಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ಬೈಕಂಪಾಡಿ:  ಕೈಗಾರಿಕಾ ಪ್ರಾಂಗಣಕ್ಕೆ ಹಾನಿ
ಬೈಕಂಪಾಡಿ ಕೈಗಾರಿಕಾ ಪ್ರದೇಶ ಮಂಗಳವಾರ ರಾತ್ರಿ ಮುಳುಗಡೆಯಾಯಿತು. ಹದಿನೈದಕ್ಕೂ ಅಧಿಕ ಕೈಗಾರಿಕಾ ಪ್ರಾಂಗಣಗಳಿಗೆ ಹಾನಿಯಾಗಿವೆ. ಬೈಕಂಪಾಡಿ ಚಿತ್ರಾಪುರದಲ್ಲಿ ಕಡಲಬ್ಬರ ಮುಂದುವರಿದಿದ್ದು, ರಸ್ತೆಗೆ ಹಾನಿಯಾಗಿದೆ. ಪಂಜಿಮೊಗರು ಬಳಿ ಮರ ಬಿದ್ದು ವಿದ್ಯುತ್‌ ತಂತಿಗಳು ತುಂಡಾಗಿವೆ. ಬೈಕಂಪಾಡಿ ಬರಡ್‌ ರಸ್ಸೆಲ್ ಶಾಲೆಗೆ ಮಳೆ ನೀರು ನುಗ್ಗಿದೆ. ಭಾರೀ ಮಳೆಗೆ ಹೆದ್ದಾರಿ 66 ಹಾನಿಗೊಂಡಿದ್ದು, ಬೃಹತ್‌ ಹೊಂಡಗಳಾಗಿ ವಾಹನಗಳು ತೆವಳುತ್ತಾ ಸಾಗುತ್ತಿವೆ.

ಟಾಪ್ ನ್ಯೂಸ್

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

Tannirbhavi: ಜ. 11, 12ರ ಬೀಚ್‌ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ

Tannirbhavi: ಜ. 11, 12ರ ಬೀಚ್‌ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ

Mangaluru ಎಚ್‌ಎಂಪಿ ವೈರಸ್‌; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ

Mangaluru ಎಚ್‌ಎಂಪಿ ವೈರಸ್‌; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.