ಉಚಿತ ಬೂಸ್ಟರ್ ಡೋಸ್‌ಗೆ ಬಹುಬೇಡಿಕೆ
ಕೋವಿಡ್ ಮುನ್ನೆಚ್ಚರಿಕೆ ಡೋಸ್ ಪಡೆಯುವವರ ಸಂಖ್ಯೆ ಪ್ರಗತಿಯತ್ತ
Team Udayavani, Jul 25, 2022, 10:55 AM IST
ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಏರಿಳಿತ ಕಾಣುತ್ತಿದ್ದು, ಈ ನಡುವೆ ಜಿಲ್ಲೆಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಡೋಸ್ ಪಡೆಯುವವರ ಸಂಖ್ಯೆಯೂ ಪ್ರಗತಿಯತ್ತ ಸಾಗುತ್ತಿದೆ.
18 ರಿಂದ 59 ವಯಸ್ಸಿನವರು ಕೋವಿಡ್ ಮುನ್ನೆಚ್ಚರಿಕೆ ಡೋಸ್ ಪಡೆದುಕೊಳ್ಳಲು ಈ ಹಿಂದೆ ನಿಗದಿತ ದರ ನೀಡಬೇಕಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಮಂದಿ ಅರ್ಹರು ಬೂಸ್ಟರ್ ಪಡೆದುಕೊಳ್ಳಲು ಮುಂದೆ ಬರುತ್ತಿರಲಿಲ್ಲ. ಈಗ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಿಂದ ಜು.15ರಿಂದ 75 ದಿನಗಳ ಕಾಲ 18 ರಿಂದ 59 ವಯಸ್ಸಿನವರಿಗೆ ಉಚಿತ ಮುನ್ನೆಚ್ಚರಿಕೆ ಡೋಸ್ ನೀಡಲು ಕೇಂದ್ರ ಸರಕಾರ ಮುಂದಾಗಿದ್ದು, ಜಿಲ್ಲೆಯಲ್ಲಿ ಬೂಸ್ಟರ್ ಡೋಸ್ ಪಡೆದುಕೊಳ್ಳುವವರ ಸಂಖ್ಯೆಯೂ ಏರುತ್ತಿದೆ.
ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳುವಂತೆ ಈ ಹಿಂದೆ ದಿನಕ್ಕೆ ಸುಮಾರು 250 ರಿಂದ 300 ಮಂದಿಯಷ್ಟೇ ಅರ್ಹರು ಬೂಸ್ಟರ್ ಡೋಸ್ ಪಡೆದುಕೊಳ್ಳುತ್ತಿದ್ದರು. ಆದರೆ, ಉಚಿತ ಲಸಿಕೆ ಘೋಷಣೆ ಬಳಿಕ ದಿನಕ್ಕೆ ಸುಮಾರು 2,000 ದಿಂದ 2,500 ಮಂದಿ ಲಸಿಕೆ ಪಡೆದುಕೊಳ್ಳಲು ಮುಂದೆ ಬರುತ್ತಿದ್ದಾರೆ.
ಕೋವಿಡ್ ಬೂಸ್ಟರ್ ಡೋಸ್ ಪಡೆದುಕೊಳ್ಳುವ ಅಂತರವನ್ನು ಈಗಾಗಲೇ ಕೇಂದ್ರ ಆರೋಗ್ಯ ಸಚಿವಾಲಯ ಇಳಿಕೆ ಮಾಡಿದೆ. ಅದರಂತೆ ಕೋವಿಡ್ ಎರಡನೇ ಹಂತದ ಲಸಿಕೆ ಪಡೆದುಕೊಂಡ 9 ತಿಂಗಳ ಬದಲಾಗಿ ಆರು ತಿಂಗಳಿಗೆ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಹೊಸ ಮಾರ್ಗಸೂಚಿ ಪ್ರಕಾರ 9 ತಿಂಗಳು ಅಥವಾ 39 ವಾರಗಳ ಬದಲಾಗಿ 6 ತಿಂಗಳು ಅಥವಾ 26 ವಾರಗಳಲ್ಲಿ ಇದೀಗ 18-59 ವಯಸ್ಸಿನ ಫಲಾನುಭವಿಗಳು ಕೋವಿಡ್ ಬೂಸ್ಟರ್ ಡೋಸ್ ಪಡೆದುಕೊಳ್ಳಬಹುದಾಗಿದೆ.
ಮನೆಗೆ ತೆರಳಿ ಅರಿವು
ಮಂಗಳೂರು ಪಾಲಿಕೆ ಸೇರಿದಂತೆ ಜಿಲ್ಲೆಯಾದ್ಯಂತ ಡೆಂಗ್ಯೂ ನಿಯಂತ್ರಣದ ನಿಟ್ಟಿನಲ್ಲಿ ಮನೆ ಮನೆ ಸರ್ವೇ ನಡೆಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು, ಮಲೇರಿಯಾ ನಿಯಂತ್ರಣಾ ಕಾರ್ಯಕರ್ತರು, ಆರೋಗ್ಯ ಸುರಕ್ಷತಾ ಅಧಿಕಾರಿಗಳು ಮತ್ತು ಪಾಲಿಕೆ ವ್ಯಾಪ್ತಿಯಲ್ಲಿ ಎಂಪಿಡಬ್ಲ್ಯೂ ಕಾರ್ಯಕರ್ತರು ಮನೆ ಮನೆ ಭೇಟಿ ನೀಡುತ್ತಿದ್ದಾರೆ. ಮನೆಯಲ್ಲಿ ಯಾರು ಅರ್ಹರು ಲಸಿಕೆ ಪಡೆದುಕೊಂಡಿಲ್ಲವೋ, ಎರಡನೇ ಡೋಸ್ ಪಡೆದು ಬೂಸ್ಟರ್ ಡೋಸ್‌ಗೆ ಬಾಕಿ ಇರುವರಲ್ಲಿ ಜಾಗೃತಿ ಮೂಡಿಸುವ ಕೆಲಸವೂ ಒಂದೆಡೆ ನಡೆಯುತ್ತಿದೆ.
ಲಸಿಕೆ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಳ: 18 ರಿಂದ 59 ವಯಸ್ಸಿನವರಿಗೆ ಉಚಿತ ಕೋವಿಡ್ ಬೂಸ್ಟರ್ ಡೋಸ್ ಲಸಿಕೆಯನ್ನು ಕೇಂದ್ರ ಸರಕಾರವು ಘೋಷಣೆ ಮಾಡಿದ ಬಳಿಕ ಲಸಿಕೆ ಪಡೆದುಕೊಳ್ಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸದ್ಯ ದಿನಂಪ್ರತಿ ಸುಮಾರು ಎರಡರಿಂದ ಎರಡೂವರೆ ಸಾವಿರ ಮಂದಿ ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಆರೋಗ್ಯ ಇಲಾಖೆಯಿಂದಲೂ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. – ಡಾ| ರಾಜೇಶ್, ಆರೋಗ್ಯ ಇಲಾಖೆ ಆರ್‌ಸಿಎಚ್ ಅಧಿಕಾರಿ
ಬೂಸ್ಟರ್ ಡೋಸ್ ಅಂಕಿ ಅಂಶ
ತಾಲೂಕು ಅರ್ಹರು ಲಸಿಕೆ ಪಡೆದವರು
ಬಂಟ್ವಾಳ 21,8847 11,961
ಬೆಳ್ತಂಗಡಿ 13,6190 6,388
ಮಂಗಳೂರು 68,4076 75,216
ಪುತ್ತೂರು 17,0497 22,505
ಸುಳ್ಯ 84,067 14,827
ಒಟ್ಟು 12,93677 130897
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.