ಬಿಜೈ ಬಟ್ಟಗುಡ್ಡ ಬಳಿ ಗುಡ್ಡ ಕುಸಿತ
Team Udayavani, Jun 3, 2020, 5:13 AM IST
ಮಂಗಳೂರು, ಜೂ.2: ಕಳೆದ ವರ್ಷ ನಗರದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಕುಸಿತ ಸಂಭವಿಸಿದ್ದ ಬಿಜೈ ಬಟ್ಟಗುಡ್ಡ ಈಗ ಮತ್ತೂಮ್ಮೆ ಸಾರ್ವಜನಿ ಕರ ಆತಂಕಕ್ಕೆ ಕಾರಣವಾಗಿದೆ.
ದ.ಕ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗು ತ್ತಿದ್ದು, ಒಂದೇ ಮಳೆಗೆ ಈ ಪ್ರದೇಶದ ಗುಡ್ಡ ಕುಸಿಯಲಾರಂಭಿಸಿದೆ. ಬಟ್ಟಗುಡ್ಡ ಬಳಿ ಗುಡ್ಡ ಕುಸಿಯುವ ಭೀತಿ ಇದ್ದು, ಇನ್ನೂ ಶಾಶ್ವತ ಪರಿಹಾರವಾಗಿಲ್ಲ ಎಂದು “ಉದಯವಾಣಿ ಸುದಿನ’ದಲ್ಲಿ ವರದಿ ಪ್ರಕಟಗೊಂಡಿತ್ತು.
ಕಳೆದ ವರ್ಷ ಮಳೆಗೆ ಭೂಕುಸಿತ ಉಂಟಾಗಿ ಸಾರ್ವಜನಿಕ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಮಳೆಗಾಲ ಮುಗಿದು ವರ್ಷ ಕಳೆದರೂ ಗುಡ್ಡ ಕುಸಿತ ಭಾಗದಲ್ಲಿ ಗೋಣಿ ಚೀಲ ಇಟ್ಟು ತಾತ್ಕಾಲಿಕ ಪರಿಹಾರವನ್ನು ಕಲ್ಪಿಸಲಾಗಿತ್ತೇ ವಿನಾ ಯಾವುದೇ ರೀತಿಯ ಶಾಶ್ವತ ಪರಿಹಾರವಾಗಿಲ್ಲ. ಕಳೆದ ಎರಡು ದಿನಗಳಿಂದ ಆರಂಭ ವಾದ ಮಳೆಗೆ ಮತ್ತೆ ಗುಡ್ಡ ಕುಸಿತ ಆರಂಭವಾಗಿದ್ದು, ಸ್ಥಳೀಯಾಡಳಿತ ತತ್ಕ್ಷಣ ಎಚ್ಚೆತ್ತುಕೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.