ಫುಟ್‌ಪಾತ್‌ನಲ್ಲಿ ವಾಹನ ನಿಲ್ಲಿಸಿದರೆ ಲಾಕ್!
Team Udayavani, Oct 29, 2022, 12:23 PM IST
ಮಹಾನಗರ: ನಗರದ ಫುಟ್‌ಪಾತ್‌ಗಳಲ್ಲಿ ವಾಹನ ನಿಲ್ಲಿಸುವವರ ವಿರುದ್ಧ ಸಂಚಾರ ಪೊಲೀಸರು ಶುಕ್ರವಾರವೂ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ರೀತಿ ನಿಲ್ಲಿಸಿದ ವಾಹನಗಳನ್ನು ಲಾಕ್ ಮಾಡಲಾಗುತ್ತಿದೆ.
ನಗರದ ಹಲವು ಕಡೆಗಳಲ್ಲಿ ಮಂಗಳೂರು ಪಾಲಿಕೆ, ಸ್ಮಾರ್ಟ್‌ಸಿಟಿಯಿಂದ ವ್ಯವಸ್ಥಿತ ಫುಟ್‌ಪಾತ್ ನಿರ್ಮಾಣ ಮಾಡಲಾಗಿದೆ. ಆದರೆ ಬಹುತೇಕ ಕಡೆಗಳಲ್ಲಿ ಆ ಫುಟ್‌ಪಾತ್‌ಗಳು ಪಾದಚಾರಿಗಳಿಗೆ ಅನುಕೂಲವಾಗುತ್ತಿಲ್ಲ. ಬದಲಾಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗಿದ್ದು, ಸಂಚಾರಿ ಪೊಲೀಸರು ಇದೀಗ ಎಚ್ಚೆತ್ತು ವಿವಿಧ ಕಡೆಗಳಲ್ಲಿ ಕಾರ್ಯಾ ಚರಣೆಗೆ ಮುಂದಾಗಿದ್ದಾರೆ.
ಇನ್ನು ಕೆಲವು ಕಡೆಗಳಲ್ಲಿ ಫುಟ್‌ಪಾತ್ ರಸ್ತೆಯ ಮಟ್ಟದಲ್ಲೇ ಇರುವ ಕಾರಣ, ವಾಹನಗಳನ್ನು ನಿಲ್ಲಿಸಲು ಅನುಕೂಲಕರವಾಗಿದೆ. ನಗರದ ಕೆಲವೊಂದು ರಸ್ತೆ ಗಳಲ್ಲಿರುವ ಫುಟ್‌ಪಾತ್‌ನಲ್ಲಿ ವಾಹನ ಗಳು ಸಂಚರಿಸುತ್ತಿದ್ದು, ಇದರಿಂದ ಪಾದ ಚಾರಿಗಳಿಗೆ ಅಪಾಯ ಎದುರಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನಗರದ ವಿವಿಧ ಕಡೆಗಳಲ್ಲಿನ ಫುಟ್‌ಪಾತ್‌ನಲ್ಲಿ ಬೊಲಾರ್ಡ್ಸ್ ಅಳವಡಿಸಲು ಮಹಾನಗರ ಪಾಲಿಕೆ ನಿರ್ಧರಿಸಿದೆ. ಈಗಾಗಲೇ ಎಂ.ಜಿ. ರಸ್ತೆ, ಪಿವಿಎಸ್ ಜಂಕ್ಷನ್ ಸಹಿತ ಹಲವು ಕಡೆಗಳಲ್ಲಿ ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.