ತರಕಾರಿ ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ: ಮಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ
Team Udayavani, Oct 25, 2020, 11:00 AM IST
ಮಂಗಳೂರು: ತರಕಾರಿ ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದವರನ್ನು ರವಿವಾರ ಬೆಳಿಗ್ಗೆ ಮಂಗಳೂರು ಪೊಲೀಸರು ತಡೆದಿದ್ದು, ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಭಜರಂಗ ದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಆಧಾರದಲ್ಲಿ ಪೊಲೀಸರು ಕಾರ್ಯಚಾರಣೆ ನಡೆಸಿದ್ದು, ಮಂಗಳೂರಿನ ಪಂಪವೆಲ್ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಅಕ್ರಮ ಗೋ ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದೆ.
ಪಿಕಪ್ ವಾಹನದಲ್ಲಿ ಗೋ ಸಾಗಾಟ ಮಾಡುತ್ತಿದ್ದು, ತರಕಾರಿ ಸಾಗಾಟ ವಾಹನದಂತೆ ಕಾಣಲು ಮೇಲ್ಗಡೆ ಪ್ಲಾಸ್ಟಿಕ್ ಕ್ರೇಟ್ ಗಳನ್ನು ಇರಿಸಿದ್ದರು.
ವಾಹನದಲ್ಲಿ 4 ಕರು ಮತ್ತು 8 ದನಗಳ ಸಹಿತ ಒಟ್ಟು 12 ಜಾನುವಾರುಗಳು ಇದ್ದವು. ಇವುಗಳನ್ನು ಬಂಟ್ವಾಳ ಕಡೆಯಿಂದ ಸಾಗಿಸಲಾಗುತ್ತಿತ್ತು. ಕಂಕನಾಡಿ ನಗರ ಠಾಣೆ ಪೊಲೀಸರು ಪಂಪ್ವೆಲ್ ಸಮೀಪದ ಉಜ್ಜೋಡಿಯಲ್ಲಿ ವಾಹನವನ್ನು ತಡೆದು ವಶಕ್ಕೆ ಪಡೆದು ಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ
ಈ ಹಿಂದೆಯೂ ಹಾಲಿನ ವಾಹನ, ಮೀನು ಸಾಗಾಟ ವಾಹನದಲ್ಲಿ ಗೋ ಸಾಗಾಟ, ಗೋ ಮಾಂಸ ಸಾಗಾಟ ನಡೆಸುತ್ತಿದ್ದ ವಾಹನಗಳನ್ನು ಮಂಗಳೂರು ಪೊಲೀಸರು ತಡೆದು ವಶಕ್ಕೆ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.