ತುಳು ಭಾಷೆ ಕಲಿಕೆಗೆ ಹೆಚ್ಚಿದ ಆಸಕ್ತಿ
Team Udayavani, Dec 31, 2019, 6:39 AM IST
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲೆಗಳಲ್ಲಿ ತುಳುವನ್ನು ತೃತೀಯ ಭಾಷೆಯಾಗಿ ಆಯ್ದುಕೊಂಡು ಎಸೆಸೆಲ್ಸಿ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಕಳೆದ ಐದು ವರ್ಷಗಳಿಂದ ಹೆಚ್ಚುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಾಲಿನಲ್ಲಿ (2019-20) 296 ಹೆಚ್ಚುವರಿ ವಿದ್ಯಾರ್ಥಿಗಳು ತುಳು ಪರೀಕ್ಷೆ ಬರೆಯಲು ಸಿದ್ಧರಾಗಿದ್ದಾರೆ.
2018-19ನೇ ಸಾಲಿನಲ್ಲಿ ಒಟ್ಟು 34 ಶಾಲೆಗಳಿಂದ 660 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಈ ಬಾರಿ 42 ಶಾಲೆಗಳಿಂದ 956 ಮಂದಿ ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಕಲಿಯುತ್ತಿದ್ದಾರೆ. ಪ್ರಸಕ್ತ ವರ್ಷ ದ.ಕ., ಉಡುಪಿ ಜಿಲ್ಲೆಗಳ 42 ಶಾಲೆಗಳಲ್ಲಿ 6ನೇ ತರಗತಿಯಿಂದ 10ನೇ ತರಗತಿ ವರೆಗೆ ಒಟ್ಟು 2,600 ಮಂದಿ ತೃತೀಯ ಭಾಷೆಯಾಗಿ ಕಲಿಯುತ್ತಿದ್ದಾರೆ.
ಪುತ್ತೂರು ತಾಲೂಕಿನ 17 ಶಾಲೆಗಳಲ್ಲಿ 1,219 ಮಂದಿ, ಸುಳ್ಯದ 2 ಶಾಲೆಗಳಲ್ಲಿ 176 ವಿದ್ಯಾರ್ಥಿಗಳು, ಬೆಳ್ತಂಗಡಿಯ 11 ಶಾಲೆಯಲ್ಲಿ 670 ಮಕ್ಕಳ, ಬಂಟ್ವಾಳ ತಾಲೂಕಿನ 3 ಶಾಲೆಗಳಲ್ಲಿ 143 ವಿದ್ಯಾರ್ಥಿಗಳು, ಮಂಗಳೂರಿನ 4 ಶಾಲೆಗಳಲ್ಲಿ 187 ವಿದ್ಯಾರ್ಥಿಗಳು ಮತ್ತು ಉಡುಪಿ ತಾಲೂಕಿನ 5 ಶಾಲೆಗಳಲ್ಲಿ 205 ವಿದ್ಯಾರ್ಥಿಗಳು ಸೇರಿದಂತೆ ಒಟ್ಟಾರೆ 42 ಶಾಲೆಗಳಲ್ಲಿ ಒಂದರಿಂದ ಆರನೇ ತರಗತಿಯವರೆಗೆ 2.600 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಕಲಿಯುತ್ತಿದ್ದಾರೆ.
ಈ ವರ್ಷವೇ ಅತೀ ಹೆಚ್ಚು ವಿದ್ಯಾರ್ಥಿಗಳು
2014-15ರ ಪ್ರಥಮ ಬ್ಯಾಚ್‌ನಲ್ಲಿ ಒಂದು ಶಾಲೆಯಿಂದ 18 ಮಂದಿ ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದರು. 2015-16ರಲ್ಲಿ ಎರಡನೇ ಬ್ಯಾಚ್‌ನಲ್ಲಿ 3 ಶಾಲೆಗಳಿಂದ 25 ವಿದ್ಯಾರ್ಥಿಗಳು, 2016-17ನೇ ಸಾಲಿನಲ್ಲಿ 12 ಶಾಲೆಗಳಿಂದ 283, 2017-18ನೇ ಸಾಲಿನಲ್ಲಿ 22 ಶಾಲೆಗಳಿಂದ 417 ವಿದ್ಯಾರ್ಥಿಗಳು ತುಳು ಪರೀಕ್ಷೆ ಬರೆದಿದ್ದರು. 2018-19ರಲ್ಲಿ 34 ಶಾಲೆಗಳಿಂದ 660 ಮಂದಿ ವಿದ್ಯಾರ್ಥಿಗಳು ತುಳು ಪರೀಕ್ಷೆ ಬರೆದಿದ್ದು, ಈ ವರ್ಷ 39 ಶಾಲೆಗಳಿಂದ 956 ಮಂದಿ ವಿದ್ಯಾರ್ಥಿಗಳು ತೃತೀಯ ಭಾಷೆಯಾಗಿ ತುಳು ಪರೀಕ್ಷೆ ಎದುರಿಸಲು ಸಿದ್ಧವಾಗಿದ್ದಾರೆ.
ಪುತ್ತೂರು ತಾಲೂಕಿನಲ್ಲಿ ಹೆಚ್ಚು
ಉಭಯ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಪುತ್ತೂರು ತಾಲೂಕಿನಲ್ಲಿ ಅತೀ ಹೆಚ್ಚು ಮಂವಿ ವಿದ್ಯಾರ್ಥಿಗಳು ಹತ್ತನೇ ತರಗತಿ ಕಲಿಯುತ್ತಿದ್ದಾರೆ. ಪುತ್ತೂರು ತಾಲೂಕಿನಲ್ಲಿ 346, ಸುಳ್ಯ ತಾಲೂಕಿನಲ್ಲಿ 66, ಬೆಳ್ತಂಗಡಿ ತಾಲೂಕಿನಲ್ಲಿ 342, ಬಂಟ್ವಾಳ ತಾಲೂಕಿನಲ್ಲಿ 57, ಮಂಗಳೂರು ತಾಲೂಕಿನಲ್ಲಿ 63, ಉಡುಪಿ ತಾಲೂಕಿನಲ್ಲಿ 82 ಸೇರಿದಂತೆ 956 ವಿದ್ಯಾರ್ಥಿಗಳು ಈ ಬಾರಿ ಎಸೆಸ್ಸೆಲ್ಸಿ ಕಲಿಯುತ್ತಿದ್ದಾರೆ.
ಕಳೆದ ಐದು ವರ್ಷಕ್ಕೆ ಹೋಲಿಸಿದರೆ ಈ ಬಾರಿ ಎಸೆಸ್ಸೆಲ್ಲಿಯಲ್ಲಿ ತುಳುವನ್ನು ತೃತೀಯ ಭಾಷೆಯಾಗಿ ಕಲಿಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಮುಂದಿನ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಮತ್ತಷ್ಟು ಹೆಚ್ಚಿಸುವ ದೃಷ್ಟಿಯಿಂದ ಈಗಾಗಲೇ ತುಳು ಪಠ್ಯ ಕಲಿತ ವಿದ್ಯಾರ್ಥಿಗಳಿಂದ ಇತರ ವಿದ್ಯಾರ್ಥಿಗಳಿಗೆ ಸಾಧಕ-ಬಾಧಕಗಳ ಬಗ್ಗೆ ಚರ್ಚಾ ಕೂಟ ಏರ್ಪಡಿಸುವ ಚಿಂತನೆ ಇದೆ.
– ದಯಾನಂದ ಕತ್ತಲ್‌ಸಾರ್, ತುಳುಸಾಹಿತ್ಯ ಅಕಾಡೆಮಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.