ಆಶಾ ಕಾರ್ಯಕರ್ತರಿಗೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ
Team Udayavani, Apr 17, 2020, 9:13 AM IST
ಮಂಗಳೂರು: ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಸರ್ವೆ ನಡೆಸಲಿದ್ದು, ಜನರು ಮಾಹಿತಿ ನೀಡಿ ಸಹಕರಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಯಾರೂ ಮನೆಯಿದ ಹೊರಬರಬೇಡಿ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜಿಲ್ಲೆಯಲ್ಲಿ 12 ಕೋವಿಡ್-19 ಪಾಸಿಟಿವ್ ಪ್ರಕರಣಗಳಲ್ಲಿ 9 ಮಂದಿ ಗುಣಮುಖರಾಗಿದ್ದಾರೆ. ಅವರಿಗೆಲ್ಲ ಮತ್ತೆ 14 ದಿನ ಹೋಂ ಕಾರಂಟೈನ್‌ಗೆ ವೈದ್ಯರು ಸೂಚಿಸಿದ್ದಾರೆ. ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಗುರುತಿಸಿ, ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.
ಕೋವಿಡ್-19 ಸರ್ವೆ ಕಾರ್ಯದ ಮುಂದಿನ ಭಾಗವಾಗಿ ಇಡೀ ಜಿಲ್ಲೆಯಲ್ಲಿ influenza-like illness (ILI) ಅಥವಾ severe acute respiratory infection (SARI) ಸೋಂಕುಗಳಿಂದ ಬಳಲುತ್ತಿರುವವರ ಮಾಹಿತಿ ಕಲೆ ಹಾಕಬೇಕಾಗಿದೆ. ಇದಕ್ಕಾಗಿ ಆಶಾ ಕಾರ್ಯಕರ್ತೆಯರು ಹಾಗೂ ಮ.ನ.ಪಾ. ವ್ಯಾಪ್ತಿಯಲ್ಲಿ ಎಂಪಿಡಬ್ಲ್ಯುಗಳು ಆಗಮಿಸುತ್ತಾರೆ. ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಕೋವಿಡ್-19 ಲಕ್ಷಣಗಳಾದ ಜ್ವರ, ಕೆಮ್ಮು, ಗಂಟಲುನೋವು ಉಸಿರಾಟದ ಸಮಸ್ಯೆಯ ಬಗ್ಗೆ ಕೆಲವು ಸರಳ ಪ್ರಶ್ನೆಗಳನ್ನು ಕೇಳುವರು. ಹೃದ್ರೋಗ ಸಮಸ್ಯೆ, ಮಧುಮೇಹ, ಬಿ.ಪಿ., ಕಿಡ್ನಿ ಸಮಸ್ಯೆ, ಕ್ಯಾನ್ಸರ್, 60 ವರ್ಷ ಮೇಲ್ಪಟ್ಟವರೇ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಲೇರಿಯಾ, ಡೆಂಗ್ಯೂ ಎಚ್ಚರಿಕೆ ಅಗತ್ಯ
ಮಳೆಗಾಲದ ಸಂದರ್ಭ ಸಾಧಾರಣವಾಗಿ ಕಾಣಿಸಿಕೊಳ್ಳುವ ಮಲೇರಿಯಾ ಮತ್ತು ಡೆಂಗ್ಯೂ ಬಗ್ಗೆಯೂ ಎಚ್ಚೆತ್ತುಕೊಳ್ಳಬೇಕಿದೆ. ಆಶಾ ಕಾರ್ಯಕರ್ತರು ಸರ್ವೆ ಸಂದರ್ಭ ಮನೆ ಪರಿಸರದಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ತಾಣಗಳ ಬಗ್ಗೆಯೂ ಗಮನ ಹರಿಸಲಿದ್ದಾರೆ. ಆಶಾ ಕಾರ್ಯಕರ್ತರಿಗೆ ಅಥವಾ ಎಂಪಿಡಬ್ಲ್ಯು ಅವರಿಗೆ ಜನರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವೀಡಿಯೊ ಸಂದೇಶದಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.