ಪ್ರಧಾನಿ, ಗೃಹ ಸಚಿವರಿಗೆ ಅವಹೇಳನ: ಇಬ್ಬರ ಬಂಧನ
Team Udayavani, Apr 15, 2020, 8:32 AM IST
ಮಂಗಳೂರು: ಕೋವಿಡ್-19 ವೈರಸ್ ಸೋಂಕು ಸಂಬಂಧಿಸಿ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಫೋಟೋಗಳನ್ನು ಹಾಕಿ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನ, ಪ್ರಚೋದನಾಕಾರಿ ಸಂದೇಶ ಹರಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಉರಿಮಜಲು ನಿವಾಸಿ ಅಬ್ದುಲ್ ಬಷೀರ್ ಯಾನೆ ನಿಸಾರ್ ಅಹಮ್ಮದ್ ಮತ್ತು ಪಣಕಜೆ ನಿವಾಸಿ ಮುಹಮ್ಮದ್ ಇಲ್ಯಾಸ್ ಬಂಧಿತರು. ತಾವು ಪಿಎಫ್‌ಐ, ಎಸ್‌ಡಿಪಿಐ ಜತೆಗೆ ಸಂಬಂಧ ಹೊಂದಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆ 1897, ಐಟಿ ಕಾಯ್ದೆ ಸೆಕ್ಷನ್ 67, ವಿಕೋಪ ನಿರ್ವಹಣೆ ಕಾಯ್ದೆ 2005 ಸೆಕ್ಷನ್ 54, ಐಪಿಸಿ 188, 153, 505 ಅನ್ವಯ ನಗರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.