ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ: ಶಾಸಕ ಡಿ. ವೇದವ್ಯಾಸ ಕಾಮತ್
Team Udayavani, Apr 25, 2020, 7:56 AM IST
ಮಂಗಳೂರು: ಶವ ಸಂಸ್ಕಾರ ವಿಚಾರದಲ್ಲಿ ಗುರುವಾರ ರಾತ್ರಿ ನಡೆದ ಘಟನೆ ನಾಗರಿಕರಲ್ಲಿ ಕೊರೊನಾ ಬಗ್ಗೆ ಇರುವ ತಪ್ಪು ತಿಳುವಳಿಕೆಯಿಂದ ನಡೆದಿದೆಯೇ ವಿನಾ ಉದ್ದೇಶಪೂರ್ವಕ ಅಲ್ಲ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಕೊರೊನಾ ಮಹಮಾರಿ ಮೊದಲ ಬಲಿ ಪಡೆದಾಗ ಇಂತಹದ್ದೇ ಘಟನೆ ಬೋಳೂರು ಪರಿಸರದಲ್ಲಿ ನಡೆದಿತ್ತು. ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕನಾಗಿ ನಾನು ಮತ್ತು ಸ್ಥಳೀಯ ಪಾಲಿಕೆ ಸದಸ್ಯ ಜಗದೀಶ ಶೆಟ್ಟಿ ಅವರು ಅಲ್ಲಿನ ನಾಗರಿಕರಲ್ಲಿ ಇರುವ ತಪ್ಪು ಗ್ರಹಿಕೆ ದೂರ ಮಾಡಿದ್ದೆವು. ಸೋಂಕು ಪೀಡಿತ ವ್ಯಕ್ತಿಯ ಮೃತದೇಹವನ್ನು ಸುಡುವುದರಿಂದ ಯಾವುದೇ ತೊಂದರೆ ಇಲ್ಲ, ದಹನದಿಂದ ಈ ವೈರಸ್ ಹರಡುವುದಿಲ್ಲ ಎಂದು ವೈಜ್ಞಾನಿಕ ಪ್ರಕಾರ ದೃಢಪಟ್ಟ ಮಾಹಿತಿ ನೀಡಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದೆವು ಎಂದು ತಿಳಿಸಿದ್ದಾರೆ.
ಪ್ರತಿಯೊಬ್ಬರೂ ವಾಸ್ತವ ಅರಿತುಕೊಂಡು ಹೃದಯವಂತಿಕೆ, ಮಾನವೀಯತೆ, ಮನುಷ್ಯತ್ವ ತೋರುವ ಮೂಲಕ ಮೃತ ವ್ಯಕ್ತಿಯ ಮನೆಯವರಿಗೆ ಆಗುವ ದುಃಖವನ್ನು ಅರಿಯ
ಬೇಕಾಗಿದೆ. ಮುಂದಿನ ದಿನಗಳಲ್ಲಿ ಎವೆಲ್ಲರೂ ತಪ್ಪು ಮಾಹಿತಿಯಿಂದ ದೂರವಿದ್ದು ಜಿಲ್ಲಾಡಳಿತ ದೊಂದಿಗೆ ಸಂಪೂರ್ಣ ಕೈ ಜೋಡಿಸಬೇಕು. ತಪ್ಪು ಮಾಹಿತಿ ಬಂದರೂ ವಿಚಲಿತರಾಗದೆ ಸಂಯಮ ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಶ್ಮಶಾನದ ಪರಿಸರವನ್ನು ಸಂಪೂರ್ಣ ಸ್ಯಾನಿಟೈಜ್ ಮಾಡುವ ಮೂಲಕ ಜಿಲ್ಲಾಡಳಿತ ಮುಂಜಾಗ್ರತೆ ವಹಿಸುತ್ತದೆ. ಜವಾಬ್ದಾರಿಯುತ ಶಾಸಕನಾಗಿ ನಾನು ನಮ್ಮ ಜನರಿಗೆ ಅನ್ಯಾಯ ಮಾಡುವುದಿಲ್ಲ. ತಪ್ಪು ಮಾಹಿತಿ ಕೊಡುವುದಿಲ್ಲ. ಹಾಗಾಗಿ ತಾವೆಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
“ನನ್ನ ಕ್ಷೇತ್ರದ ಜನರ ಆರೋಗ್ಯದ ಬಗ್ಗೆ ಎಲ್ಲ ರೀತಿಯಿಂದಲೂ ನನಗೆ ಕಾಳಜಿ ಇದೆ. ಹೀಗಿರುವಾಗ, ಕ್ಷೇತ್ರದ ಜನರು ಯಾವುದೇ ಸಂದರ್ಭಗಳಲ್ಲಿಯೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಜನರ ಸುರಕ್ಷತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಿದ್ದು, ಆ ನಿಟ್ಟಿನಲ್ಲಿ ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ’ ಎಂದು ಶಾಸಕರು ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.