ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Team Udayavani, Nov 25, 2024, 12:31 PM IST
ಮಂಗಳೂರು: ಪೊಲೀಸ್ ಅಧೀಕ್ಷಕರ ಸೂಚನೆಯ ಮೇರೆಗೆ ಮಾದಕವಸ್ತು ಸೇವನೆ/ಮಾರಾಟ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ, ಕಡಬ, ಅರಂತೋಡು ಸೇರಿದಂತೆ ನಾಲ್ಕು ಪ್ರತ್ಯೇಕ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣಗಳ ವಿವರ ಇಂತಿದೆ:
ಪ್ರಕರಣ 1:
ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಮದ್ಯ ವಶ:
ಅರಂತೋಡು ಪೇಟೆಯ ಅಡ್ಕಬಳೆ ರಸ್ತೆಯ ಗುಳಿಗರಾಜ ಚಿಕನ್ ಸೆಂಟರ್ ಎಂಬ ಹೆಸರಿನ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 1760/- ಮೌಲ್ಯದ 3.960 ಲೀಟರ್ (90 ಎಂ ಎಲ್ನ 44 ಮದ್ಯದ ಸ್ಯಾಚೆಟ್ ಗಳು) ಮದ್ಯವನ್ನು ಸುಳ್ಯ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂತೋಷ್ ಬಿ ಪಿ ರವರು ಕಳೆದ ಶನಿವಾರ(ನ.23) ರಂದು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಅಲ್ಲದೆ ಆರೋಪಿ ದಿನೇಶ್ ಕೆ ಹಾಗೂ ಕಾನೂನು ಬಾಹಿರವಾಗಿ ಮದ್ಯವನ್ನು ಮಾರಾಟ ಮಾಡಿರುವ ವೈನ್ ಶಾಪ್ ನ ಮಾಲಕನ ವಿರುದ್ದ ಕಲಂ 32, 34 ಕರ್ನಾಟಕ ಅಬಕಾರಿ ಕಾಯ್ದೆ 1965 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ 2:
ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ:
ಶನಿವಾರ (ನ.23) ರಾತ್ರಿ ಕಡಬ ಕಸಬ ಸಂತೆ ಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಧ್ಯಪಾನ ಮಾಡುತ್ತಿದ್ದ ಆರೋಪಿತ ಸುರೇಶ (50) ಎಂಬಾತನ ವಿರುದ್ದ ಕಡಬ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆತನ ಬಳಿಯಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣ 3:
ಬಸ್ ನಿಲ್ದಾಣದ ಬಳಿ ಮದ್ಯಪಾನ:
ಶನಿವಾರ (ನ.23) ಸಂಜೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಕಲ್ಲಾಜೆ ಗುಡ್ಡೆ ಎಂಬಲ್ಲಿ ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ಮದ್ಯಪಾನ ಮಾಡುತ್ತಿದ್ದ ಬೆಳಿಯಪ್ಪ ಗೌಡ (58) ಎಂಬಾತನ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಬಳಿಯಿದ್ದ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣ 4:
ಬಸ್ ನಿಲ್ದಾಣದಲ್ಲೇ ಮದ್ಯ ಸೇವನೆ:
ಶನಿವಾರ(ನ.23) ಸಂಜೆ ಬೆಳ್ತಂಗಡಿ ತಾಲೂಕಿನ ಕಳಿಯಾ ಗ್ರಾಮದ ಗೇರುಕಟ್ಟೆ ಬಸ್ಸು ನಿಲ್ದಾಣದಲ್ಲಿ ಇಬ್ಬರು ವ್ಯಕ್ತಿಗಳು ಮದ್ಯ ಸೇವನೆ ಮಾಡುತ್ತಿದ್ದ ಆರೋಪದ ಮೇರೆಗೆ ಯಲ್ಲಪ್ಪ ಹೆಚ್. ಮಾದಾರ್ ಪೊಲೀಸ್ ಉಪ ನಿರಿಕ್ಷಕರು, (ತನಿಖೆ)ಬೆಳ್ತಂಗಡಿ ಪೊಲೀಸ್ ಠಾಣೆರವರು ಸ್ಥಳಕ್ಕೆ ತೆರಳಿ ಆರೋಪಿ ಸತೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದು, ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯಿಂದ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.