Mangaluru: ಭಾಷಣದಲ್ಲಿ ಮಹಿಳೆಯರಿಗೆ ಅವಮಾನ… ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಆಗ್ರಹ
Team Udayavani, Dec 28, 2023, 12:23 PM IST
ಮಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಭಾಷಣದಲ್ಲಿ ಅವಾಚ್ಯ ಶಬ್ಧಗಳನ್ನು ಬಳಸಿ ಅವಮಾನ ಮಾಡಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಬೇಕು ಎಂದು ದ.ಕ ಜಿಲ್ಲಾ ಜಾತ್ಯತೀತ ಪಕ್ಷಗಳು ಮತ್ತು ಸಮಾನ ಮನಸ್ಕರ ಜಂಟಿ ವೇದಿಕೆ ಆಗ್ರಹಿಸಿದೆ.
ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಪ್ರಭಾಕರ ಭಟ್ ಅವರು ಕೇವಲ ಮುಸ್ಲಿಂ ಹೆಣ್ಮಕ್ಕಳಿಗೆ ಮಾತ್ರವಲ್ಲ ಸಮಗ್ರ ಸ್ತ್ರೀ ಕುಲಕ್ಕೆ ಅವಮಾನ ಮಾಡಿದ್ದಾರೆ. ಸರಕಾರ ತಕ್ಷಣ ಅವರನ್ನು ಬಂಧಿಸಲು ಮುಂದಾಗಬೇಕು.
ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಬಹುಸಂಖ್ಯಾಕ ಹಿಂದೂಗಳನ್ನು ಪ್ರಚೋದಿಸುವ ಉದ್ದೇಶ ಅವರು ಈ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ. ಈ ಹಿಂದೆಯೂ ಹಲವು ಬಾರಿ ಅವರು ಹೆಣ್ಮಕ್ಕಳ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ. ಈಗಾಲೇ ಅವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದ್ದು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಸಿಪಿಐ, ಸಿಪಿಐಎಂ, ದಲಿತ ಸಂಘರ್ಷ ಸಮಿತಿ, ರೈತ ಸಂಘ, ಸಹಿತ ವಿವಿಧ ಪಕ್ಷ, ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ: Dense Fog: ದೆಹಲಿಯಲ್ಲಿ ದಟ್ಟ ಮಂಜು: 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.