ಕಿಂಡಿ ಅಣೆಕಟ್ಟು ಕಾಮಗಾರಿ ಶೇ. 90ರಷ್ಟು ಪೂರ್ಣ

ಮುಚ್ಚೂರು ಕಾನ :4 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯ

Team Udayavani, May 3, 2022, 10:05 AM IST

dam

ಬಜಪೆ: ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಮುಚ್ಚಾರು ಕಾನ ಕಿಂಡಿ ಅಣೆಕಟ್ಟು ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ. ಈ ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಮುಚ್ಚಾರು, ನಿಡ್ಡೋಡಿ, ತೆಂಕ ಮಿಜಾರು ಗ್ರಾಮದ ಸುಮಾರು 2 ಸಾವಿರ ಎಕರೆ ಕೃಷಿ ಜಮೀನಿಗೆ ಇದು ಪ್ರಯೋಜನವಾಗಲಿದೆ. ಜತೆಗೆ ಗ್ರಾ.ಪಂ. ಕುಡಿಯುವ ನೀರಿನ ಕೊಳವೆ ಬಾವಿಗಳಿಗೆ ಹಾಗೂ ಸುತ್ತಮುತ್ತ ಬಾವಿಗಳಿಗೆ ಅಂತರ್ಜಲ ವೃದ್ಧಿಗೂ ಸಹ ಅನುಕೂಲವಾಗಲಿದೆ.

ಜಿ.ಪಂ. ಮಾಜಿ ಸದಸ್ಯ ಜನಾರ್ದನ ಗೌಡ ಪ್ರಸ್ತಾವನೆಯ ಮೇರೆಗೆ ಶಾಸಕ ಡಾ|ಭರತ್‌ ಶೆಟ್ಟಿ ವೈ. ಅವರು ಸಣ್ಣ ನೀರಾವರಿ ಯೋಜನೆಗೆ ಅನುದಾನ ನೀಡಿದ್ದರು. ಫೆ. 15ಕ್ಕೆ ಈ ಕಾಮಗಾರಿಯ ಕಾರ್ಯ ಆರಂಭ ಗೊಂಡಿತ್ತು. ಮೇ 15ರಂದು ಅಣೆಕಟ್ಟಿನ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಗುತ್ತಿಗೆದಾರ ಉದಯ ಕುಮಾರ್‌ ಶೆಟ್ಟಿ ಕುಂದಾಪುರ ತಿಳಿಸಿದ್ದಾರೆ.

ಕಿಂಡಿ ಅಣೆಕಟ್ಟು ಸುಮಾರು 32 ಮೀ. ಉದ್ದ ಹಾಗೂ 4 ಮೀ. ಎತ್ತರವಿದೆ. ಕಂಬದಿಂದ ಕಂಬಕ್ಕೆ ಸುಮಾರು 2 ಮೀಟರ್‌ ಅಂತರವಿದೆ. 4 ವರ್ಷಗಳ ಹಿಂದೆ ಮುಚ್ಚಾರು ಕಾನದ ಹಳೆಯ ಕಿಂಡಿ ಅಣೆಕಟ್ಟು ಶಿಥಿಲ ಗೊಂಡ ಕಾರಣ ಮುಚ್ಚಾರು ಗ್ರಾ.ಪಂ. ವಾಪ್ತಿಯಲ್ಲಿ ಕುಡಿಯುವ ನೀರಿನ ಕೊಳವೆ ಬಾವಿಗಳಿಗೆ, ಕೃಷಿಕರಿಗೆ ಬಹಳ ಸಮಸ್ಯೆಯಾಗಿತ್ತು. ಈ ಯೋಜನೆಯಿಂದ ಕೃಷಿಕರಿಗೆ ಹಾಗೂ ಕೊಳವೆ ಬಾವಿಗಳಿಗೆ ಬಹಳ ಉಪಯೋಗವಾಗಲಿದೆ. ನಾವು ಸಲ್ಲಿಸಿದ ಬೇಡಿಕೆಗೆ ನಮ್ಮ ಶಾಸಕ ಡಾ| ಭರತ್‌ ಶೆಟ್ಟಿ ವೈ. ಯೋಜನೆಗೆ ಅನುದಾನ ಒದಗಿಸಿ ಸಹಕರಿಸಿದ್ದಾರೆ ಎಂದು ಮುಚ್ಚಾರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ನಾರಾಯಣ ಎ.ಎಸ್. ಹೇಳಿದ್ದಾರೆ.

ಜಲಜೀವನ ಮಿಷನ್‌ ಮೂಲಕ ಗ್ರಾಮ ಗ್ರಾಮಗಳಲ್ಲಿ ಓವರ್‌ ಹೆಡ್‌ ಟ್ಯಾಂಕ್‌ಗಳು, ಅದಕ್ಕೆ ಸಂಪರ್ಕಿಸುವ ಪೈಪ್‌ಲೈನ್‌ಗಳು ನಿರ್ಮಾಣವಾಗುತ್ತಿದೆ. ಇನ್ನೊಂದೆಡೆ ಪಶ್ಚಿಮ ವಾಹಿನಿ ಹಾಗೂ ಸಣ್ಣ ನೀರಾವರಿ ಯೋಜನೆಯಡಿ ಕಿಂಡಿ ಅಣೆಕಟ್ಟುಗಳು ನಿರ್ಮಾಣವಾಗುತ್ತಿದೆ. ಕಿಂಡಿ ಅಣೆಕಟ್ಟುಗಳು ಅಂತರ್ಜಲ ವೃದ್ಧಿಗೆ ಸಹಕಾರಿಯಾಗಿದೆ. ಒವರ್‌ ಹೆಡ್‌ ಟ್ಯಾಂಕ್‌ಗಳು ನೀರು ಸರಬರಾಜುಗಳ ಸಂಪರ್ಕ ವ್ಯವಸ್ಥೆಗೆ ಸಹಕಾರಿಯಾಗಲಿದೆ.

ಟಾಪ್ ನ್ಯೂಸ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.