Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ
Team Udayavani, Nov 1, 2024, 9:42 AM IST
ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಅ್ಯಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ಬಂಧಿಸಿ, 2,04,000 ರೂ ಬೆಲೆಯ 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿದೆ.
ಮಾಡೂರು ನಿವಾಸಿ ನಜೀರ್ ಹುಸೈನ್ (50) ಮತ್ತು ಕಿನ್ಯಾ ರೆಹಮತ್ ನಗರದ ಅಫ್ಸಾತ್ (37) ಬಂಧಿತ ಆರೋಪಿಗಳು.
ಖಚಿತ ಮಾಹಿತಿ ಮೇರೆಗೆ ಪೊಲೀಸ್ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದು, ಗಾಂಜಾ ಸಹಿತ ಮಾರಾಟಕ್ಕೆ ಬಳಸಿದ್ದ ಕಾರು ಹಾಗೂ ಎರಡು ಮೊಬೈಲುಗಳನ್ನು ಹಾಗೂ ಒಟ್ಟು ರೂ. 5,14,810 ಬೆಲೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಬ್ಬರ ವಿರುದ್ಧ 195/2024 ಕಲಂ ನಡಿ ಎನ್ ಡಿಪಿಎಸ್ ಆಕ್ಟ್ 1985 ಮತ್ತು ಬಿಎನ್ ಎಸ್ ಕಾಯಿದೆಗಳಡಿ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.