14,000 ನಾಡದೋಣಿಗಳನ್ನು ಮೀನುಗಾರಿಕೆಗೆ ಕಳಿಸಲು ತೀರ್ಮಾನ: ಕೋಟಾ ಶ್ರೀನಿವಾಸ ಪೂಜಾರಿ
Team Udayavani, Apr 11, 2020, 7:28 PM IST
ಮಂಗಳೂರು: ಕೇಂದ್ರ ಸರಕಾರ ಮೀನುಗಾರಿಕೆ ನಡೆಸಲು ಅನುಮತಿ ನೀಡಿದ್ದು ಸ್ವಾಗತಾರ್ಹ. ಕಡಲ ಮೀನುಗಾರಿಕೆ ಹಿತದೃಷ್ಟಿಯಿಂದ ಕೇಂದ್ರ ಈ ಆದೇಶ ನೀಡಿದೆ. 14,000 ನಾಡದೋಣಿಗಳನ್ನು ಮೀನುಗಾರಿಕೆಗೆ ಕಳಿಸಲು ತೀರ್ಮಾನ ಮಾಡಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಸಾಮಾಜಿಕ ಅಂತರಕ್ಕೆ ಧಕ್ಕೆಯಾಗದಂತೆ ಮೀನುಗಾರಿಕೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. 14,000 ನಾಡದೋಣಿಗಳನ್ನು ಮೀನುಗಾರಿಕೆಗೆ ಕಳಿಸಲು ತೀರ್ಮಾನ ಮಾಡಲಾಗಿದೆ. ನಾಡದೋಣಿಯಲ್ಲಿ ಕೇವಲ ಐದು ಮಂದಿಯೊಳಗಡೆ ಮಾತ್ರ ಹೋಗಬಹುದು. ಈ ನಾಡದೋಣಿಗಳು ಬೆಳಿಗ್ಗೆ ಹೋಗಿ ಸಂಜೆ ಹಿಂದೆ ಬರುತ್ತವೆ. ಮೀನುಗಾರಿಕೆ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯ ಎಂದರು.
ಈ ಕುರಿತಂತೆ ಶೀಘ್ರವೇ ನಿಯಮಾವಳಿಗಳನ್ನು ಪ್ರಕಟಿಸುತ್ತೇವೆ ಎಂದ ಅವರು, ಶುಕ್ರವಾರ ಕೇರಳದಿಂದ ದೋಣಿ ಮೂಲಕ ಮಂಗಳೂರಿಗೆ ಅಕ್ರಮ ಪ್ರವೇಶ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.