ಕಾಂಗ್ರೆಸ್ ಸರಕಾರದಿಂದ ದ್ವೇಷ ಸಾಧಿಸುವ ವಾತಾವರಣ: ಕೋಟ
Team Udayavani, May 25, 2023, 8:10 AM IST
ಮಂಗಳೂರು: ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸರಕಾರದಲ್ಲಿ ದ್ವೇಷ ಸಾಧಿಸುವ ವಾತಾವರಣ ಕಂಡುಬರುತ್ತಿದ್ದು ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬುಧವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಪೊಲೀಸರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿ ಹರಿಹಾಯ್ದು ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ. ಚಿತ್ರದುರ್ಗ ಜಿಲ್ಲೆಯ ಶಿಕ್ಷಕರು ಮುಖ್ಯಮಂತ್ರಿಗಳ ಸಾಲದ ಬಗ್ಗೆ ಮಾತನಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಅದನ್ನು ಪುನರ್ ಪರಿಶೀಲಿಸಬೇಕು ಎಂದು ಹೇಳಿದರು.
ತನಿಖೆ ಸ್ವಾಗತಾರ್ಹ
ಸಿದ್ದರಾಮಯ್ಯ ಮತ್ತು ಡಿಕೆಶಿ ಶೇ. 40 ಕಮಿಷನ್ ಬಗ್ಗೆ ತನಿಖೆ ಮಾಡುವುದಾಗಿ ಹೇಳಿದ್ದಾರೆ. ಈ ತನಿಖೆಯನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಂತ್ರಿಯಾಗಿದ್ದ ನನ್ನಿಂದಲೇ ತನಿಖೆ ಆರಂಭವಾಗಲಿ. ಯಾವ ತನಿಖೆಯಲ್ಲಿ ಏನಾಗುತ್ತದೆ ನೋಡೋಣ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.
ಹಿಂದುತ್ವದ ಗುರಿ
ಸಾಮಾನ್ಯವಾಗಿ ಹಿಂದುತ್ವದ ವಿಚಾರ ಕಾಂಗ್ರೆಸ್‌ನ ಗುರಿ ಎಂಬುವುದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿನವಾಗಲಿವೆ. ಯಾರನ್ನೋ ಓಲೈಸಲು ಹಿಂದುತ್ವದ ಚಟುವಟಿಕೆಗಳನ್ನು ನಿಷೇಧ ಮಾಡುವ, ನೈತಿಕ ಪೊಲೀಸ್‌ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ನಡೆಯುತ್ತದೆ ಅಂತ ಅನಿಸುತ್ತದೆ. ಪ್ರಜಾಪ್ರಭುತ್ವದಲ್ಲಿ ವಿಪಕ್ಷವಾಗಿ ನಾವು ಜನಸಾಮಾನ್ಯರಿಗೆ ರಕ್ಷಣೆ ಕೊಡುತ್ತೇವೆ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.