KPT Nanthoor Junction: ಓವರ್‌ಪಾಸ್ ನಿರ್ಮಾಣಕ್ಕೆ ಮಳೆಗಾಲ ಅಡ್ಡಿ !
Team Udayavani, Jun 20, 2023, 1:44 PM IST
ಮಹಾನಗರ: ನಗರದ ಕೆಪಿಟಿ ಮತ್ತು ನಂತೂರು ಜಂಕ್ಷನ್‌ಗಳಲ್ಲಿ ವೆಹಿಕ್ಯುಲರ್ ಓವರ್ ಪಾಸ್(ವಿಒಪಿ) ನಿರ್ಮಾಣ ಯೋಜನೆ ಈಗಾಗಲೇ ಹಿನ್ನಡೆ ಕಂಡಿದ್ದು, ಇದೀಗ ಮಳೆಗಾಲ ಆರಂಭಗೊಂಡಿರುವುದರಿಂದ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ.
ಕೆಪಿಟಿ ಜಂಕ್ಷನ್‌ನಲ್ಲಿ 22 ಕೋ.ರೂ. ವೆಚ್ಚದಲ್ಲಿ ವಿಒಪಿ ನಿರ್ಮಿಸಲು ಕಾರ್ಯಾದೇಶವಾಗಿದ್ದು, ಮಳೆಗಾಲದ ಮೊದಲು ಮರಗಳ ತೆರವು, ಸರ್ವಿಸ್ ಕಾಮಗಾರಿ ಕೈಗೆತ್ತಿಕೊಳ್ಳಲು ಯೋಜನೆ ಹಾಕಿಕೊಂಡು ಅನಂತರ ಮುಖ್ಯ ಕಾಮಗಾರಿ ನಡೆಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಕೂಡ ಎರಡು ತಿಂಗಳ ಹಿಂದೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಪ್ರಕಾರ, ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ಪ್ರಗತಿಯಲ್ಲಿವೆ. ಆದರೆ ಯಾವುದೇ ಕಾಮಗಾರಿಗಳು ಆರಂಭಗೊಂಡಿಲ್ಲ.
ಸಂಚಾರ ದಟ್ಟಣೆ ಸವಾಲು
ಕೆಪಿಟಿ ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ-66 ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಗಳು ಸಂಪರ್ಕಿಸುತ್ತವೆ. ವಾಹನ ದಟ್ಟಣೆ ಹೆಚ್ಚಾಗಿದ್ದು ಸಂಚಾರ ನಿರ್ವಹಣೆ ಸವಾಲಾಗಿದೆ. ಹಾಗಾಗಿ ಇಲ್ಲಿ ಕಾಮಗಾರಿ ನಡೆಸುವ ಮೊದಲು ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯ ಅಗತ್ಯವಿದೆ.
ನಂತೂರು ಜಂಕ್ಷನ್‌ನಲ್ಲಿಯೂ ವಿಒಪಿ
ಅಪಾಯಕಾರಿ, ವಾಹನ ದಟ್ಟಣೆಯ ಜಂಕ್ಷನ್ ಆಗಿರುವ ನಂತೂರು ಜಂಕ್ಷನ್‌ನಲ್ಲಿಯೂ ಓವರ್‌ಪಾಸ್ ನಿರ್ಮಾಣ ಯೋಜನೆ ಹಾಕಿಕೊಳ್ಳಲಾಗಿದೆ.
ಈ ಯೋಜನೆ ಕೂಡ ಆರಂಭಗೊಂಡಿಲ್ಲ. ಮೂರು ರಾಷ್ಟ್ರೀಯ ಹೆದ್ದಾರಿಗಳು, ಪಾಲಿಕೆ ರಸ್ತೆ ಸಂಗಮವಾಗುವ ಈ ಸ್ಥಳದಲ್ಲಿ ಪ್ರತಿ ನಿತ್ಯವೂ ಅಪಾಯ ಉಂಟಾಗುತ್ತಿದೆ. ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ನಂತೂರಿನಲ್ಲಿ ಭೂ ಸ್ವಾಧೀನಕ್ಕೆ ಸಂಬಂಧಿಸಿ ಯಾವುದೇ ತೊಡಕಿಲ್ಲ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಕಾಮಗಾರಿ ಆರಂಭಗೊಂಡಿಲ್ಲ.
ಶಾಶ್ವತ ಪರಿಹಾರಕ್ಕೆ ಆಗ್ರಹ
ಕೆಪಿಟಿ ಮತ್ತು ನಂತೂರು ಜಂಕ್ಷನ್‌ಗಳಲ್ಲಿ ನಿರಂತರ ಅಪಘಾತಗಳು ನಡೆಯುತ್ತಿರುವುದರಿಂದ ಮತ್ತು ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗಿರುವ ಹಿನ್ನೆಲೆಯಲ್ಲಿ ಫ್ಲೈ ಓವರ್ ಅಥವಾ ಓವರ್‌ಪಾಸ್ ನಿರ್ಮಿಸಬೇಕೆಂದು ಹಲವಾರು ವರ್ಷಗಳಿಂದ ಆಗ್ರಹಗಳು ಕೇಳಿಬಂದಿವೆ. ಪಾಲಿಕೆಯ ಸಾಮಾನ್ಯಸಭೆ, ಕೆಡಿಪಿ ಸಭೆ, ಹೆದ್ದಾರಿ ಇಲಾಖೆಯ ಸಭೆಗಳಲ್ಲಿಯೂ ಪ್ರಸ್ತಾವಗೊಂಡಿತ್ತು. ಎರಡೂ ಜಂಕ್ಷನ್‌ಗಳಲ್ಲಿ ಸಂಚಾರಿ ಪೊಲೀಸ್‌ರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ಕೆಪಿಟಿಯಲ್ಲಿ ಸಂಚಾರ ನಿರ್ವಹಣೆಗೆ ತಾತ್ಕಾಲಿಕ ಪರಿಹಾರಕ್ಕಾಗಿ ಎಪ್ರಿಲ್‌ನಿಂದ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಲಾಗಿದೆ. ನಂತೂರಿನಲ್ಲಿ ಸಿಗ್ನಲ್ ಲೈಟ್ ಅಳವಡಿಸುವ ಚಿಂತನೆ ಇತ್ತಾದರೂ ಅದನ್ನು ಕೈಬಿಡಲಾಗಿದೆ. ವೃತ್ತವನ್ನು ಕಿರಿದು ಮಾಡಲಾಗಿದೆ. ಆದಾಗ್ಯೂ ವಾಹನ ಸಂಚಾರ ಸುಗಮಗೊಂಡಿಲ್ಲ. ಶಾಶ್ವತ ಪರಿಹಾರವಾಗಿ ಓವರ್‌ಪಾಸ್ ನಿರ್ಮಾಣ ಅತ್ಯವಶ್ಯವಾಗಿದೆ.
ಮಳೆಗಾಲದ ಬಳಿಕ ಕಾಮಗಾರಿ
ಕೆಪಿಟಿ ಜಂಕ್ಷನ್‌ನಲ್ಲಿ ವೆಹಿಕ್ಯುಲರ್ ಓವರ್ ಪಾಸ್ ನಿರ್ಮಾಣಕ್ಕೆ ಭೂಸ್ವಾಧೀನ ಮತ್ತು ಮರಗಳ ತೆರವಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ನಂತೂರು ಜಂಕ್ಷನ್‌ನಲ್ಲಿಯೂ ಓವರ್‌ಪಾಸ್ ನಿರ್ಮಿಸಲಾಗುವುದು. ಭೂ ಸ್ವಾಧೀನಕ್ಕೆ ಸಂಬಂಧಿಸಿ ಯಾವುದೇ ಅಡ್ಡಿ ಇಲ್ಲ. ಮಳೆಗಾಲದ ಬಳಿಕ ಕಾಮಗಾರಿ ಆರಂಭಿಸಲಾಗುವುದು.
-ಅಬ್ದುಲ್ಲಾ ಜಾವೇದ್ ಅಜ್ಮಿ,
ಯೋಜನ ನಿರ್ದೇಶಕರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮಂಗಳೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.