![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 14, 2020, 7:54 AM IST
ಸುಬ್ರಹ್ಮಣ್ಯ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭೋಜನಶಾಲೆಯಲ್ಲಿ ಗುರುವಾರ ತಡರಾತ್ರಿ ಹುರಿದಿಟ್ಟ ಮಸಾಲೆ ಕಟಾರಕ್ಕೆ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಸ್ಥಳೀಯ ನಾಗರಿಕರು ಬೆಂಕಿ ನಂದಿಸಿ ಸಂಭವಿಸಬಹುದಾದ ಭಾರಿ ದೊಡ್ಡ ಅನಾಹುತವೊಂದನ್ನು ತಪ್ಪಿಸಿದ್ದಾರೆ.
ಬೆಂಕಿ ಅವಘಡ ಸಂಭವಿಸುವ ವೇಳೆ ಸ್ಥಳೀಯರು ಪಕ್ಕದ ನೂಚಿಲದಲ್ಲಿ ಭೂತನೆಮೊತ್ಸವದಲ್ಲಿ ಸೇರಿದ್ದರು. ವಿಷಯ ತಿಳಿದು ಕೂಡಲೇ ದೇವಸ್ಥಾನದ ಭೋಜನ ಶಾಲೆಗೆ ಬಂದು ಬೆಂಕಿ ನಂದಿಸಿದ್ದಾರೆ. ಕ್ಷೇತ್ರದ ಭೋಜನಶಾಲೆಯಲ್ಲಿ ಸುಮಾರು 30 ಗ್ಯಾಸ್ ತುಂಬಿದ ಸಿಲಿಂಡರ್ ಗಳಿದ್ದವು ಎಂದು ತಿಳಿದುಬಂದಿದೆ.
ಬೆಂಕಿಯನ್ನು ನಂದಿಸಿ ಕಟಾರಗಳನ್ನು ಮಸಾಲೆ ಸಹಿತ ಭೋಜನಶಾಲೆಯಿಂದ ಹೊರಗೆ ತರಲಾಗಿದೆ. ಬಳಿಕ ಭೋಜನಶಾಲೆಯನ್ನು ಸ್ವಚ್ಛಗೊಳಿಸಲಾಗಿದೆ. ಬೆಂಕಿ ಹಿಡಿದ ಕಠಾರವನ್ನು ನಂದಿಸಲು ಬಟ್ಟೆ ಸಿಗದೆ ಇದ್ದಾಗ ಗ್ರಾ.ಪಂ ಸದಸ್ಯ ಮಣಿಕಂಠ ಎಂಬವರು ಧರಿಸಿದ ಅಂಗಿ ಕಳಚಿ ಅದರ ಸಹಾಯದಿಂದ ಬೆಚ್ಚಗಿನ ಕಠಾರವನ್ನು ಹೊರಹಾಕಿದರು. ಇವರ ಸಾಹಸಕ್ಕೆ ಸ್ಥಳಿಯರಿಂದ ಶ್ಲಾಘನೆ ವ್ಯಕ್ತವಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.