ನಿರ್ವಹಣೆಯಿಲ್ಲದೆ ಸೊರಗುತ್ತಿದೆ ಟಾಗೋರ್‌ ಪಾರ್ಕ್‌

ಮುಖ್ಯದ್ವಾರದಲ್ಲಿ ಕಸದ ರಾಶಿ; ಮುರಿದ ಗೇಟ್‌

Team Udayavani, Apr 19, 2022, 11:50 AM IST

building

ಬಾವುಟಗುಡ್ಡೆ: ನಗರದಲ್ಲಿ ಹೊಸ ಪಾರ್ಕ್‌ಗಳ ನಿರ್ಮಾಣಕ್ಕೆ ಮುಂದಾ ಗುತ್ತಿರುವ ಸ್ಥಳೀಯಾಡಳಿತ ಈಗಿರುವ ಪಾರ್ಕ್‌ಗಳ ನಿರ್ವಹಣೆಯತ್ತ ಆಸಕ್ತಿ ತೋರುತ್ತಿಲ್ಲ.

ನಗರದ ಪ್ರಮುಖ ಪಾರ್ಕ್‌ ಎನಿಸಿಕೊಂಡಿರುವ ಬಾವುಟಗುಡ್ಡೆ ಬಳಿ ಇರುವ ಟಾಗೋರ್‌ ಪಾರ್ಕ್‌ ಹಲವು ಸಮಯಗಳಿಂದ ನಿರ್ವಹಣೆಯಿಲ್ಲದೆ ಸೊರಗುತ್ತಿದೆ. ಪಾಲಿಕೆ ಅಧೀನದಲ್ಲಿರುವ ಈ ಪಾರ್ಕ್‌ ಅಭಿವೃದ್ಧಿಯತ್ತ ಪಾಲಿಕೆ ಮನಸ್ಸು ಮಾಡಬೇಕಿದೆ. ಪಾರ್ಕ್‌ನ ಪ್ರವೇಶಕ್ಕೆ ಸಮರ್ಪಕ ವ್ಯವಸ್ಥೆಯಿಲ್ಲ. ಈಗಿರುವ ಪಾರ್ಕ್‌ನ ಮುಖ್ಯದ್ವಾರದಲ್ಲಿ ಕಸದ ರಾಶಿ ಸ್ವಾಗತಿಸುತ್ತದೆ. ಗೇಟ್‌ಗಳು ಮುರಿದುಕೊಂಡಿದ್ದು, ಹಗ್ಗದಿಂದ ಕಟ್ಟಲಾಗಿದೆ.

ಪಾರ್ಕ್‌ನ ಒಳಗೂ ಗಿಡಗಳು ನಿರ್ವಹಣೆಯಿಲ್ಲದೆ ಸೊರಗಿದೆ. ಕೆಲವೊಂದು ಗಿಡಗಳ ಕಟಾವು ಮಾಡಲು ಕೂಡ ಸಂಬಂಧಪಟ್ಟ ಇಲಾಖೆ ಮುಂದಾಗಿಲ್ಲ. ಪಾರ್ಕ್‌ನೊಳಗೆ ಬೆಳಗ್ಗೆ ಮತ್ತು ಸಂಜೆ ವೇಳೆ ಮಾತ್ರ ಪ್ರವೇಶಕ್ಕೆ ಅನುಮತಿ ಇದ್ದರೂ ಪಾರ್ಕ್‌ ಆವರಣ ಗೋಡೆ ಹಾರಿ ಕೆಲವರು ಪಾರ್ಕ್‌ ಪ್ರವೇಶಕ್ಕೆ ಮುಂದಾಗುತ್ತಿದ್ದಾರೆ. ಪಾರ್ಕ್‌ ಎದುರು ಕಸ ರಾಶಿಹಾಕಲಾಗಿದ್ದು, ತೆರವು ಕಾರ್ಯಕ್ಕೆ ಸಂಬಂಧಪಟ್ಟವರು ಮುಂದಾಗಿಲ್ಲ. ಸಿಟಿಯ ತುಂಬಾ ಹಳೆಯ ಪಾರ್ಕ್‌ ಎಂದು ಗುರುತಿಸಿಕೊಂಡ ಟಾಗೋರ್‌ ಪಾರ್ಕ್ ನ ಅವ್ಯವಸ್ಥೆಯ ಪರಿಣಾಮ, ಹಿರಿಯ ನಾಗರಿಕರು ಸಹಿತ ಸಾರ್ವಜನಿಕರು ವಾಯು ವಿಹಾರಕ್ಕೆ ತೊಂದರೆ ಉಂಟಾಗಿದೆ.

ಹಂಪನಕಟ್ಟೆ, ಡಾ| ಬಿ.ಆರ್. ಅಂಬೇಡ್ಕರ್‌ ವೃತ್ತ, ಸ್ಟೇಟ್‌ಬ್ಯಾಂಕ್‌, ಕೆ.ಎಸ್. ರಾವ್‌ ರಸ್ತೆ, ಬಂಟ್ಸ್‌ಹಾಸ್ಟೆಲ್‌ ಸಹಿತ ಸುತ್ತಮುತ್ತಲಿನ ಮಂದಿಗೆ ವಾಯು ವಿಹಾರಕ್ಕೆಂದು ಸಮರ್ಪಕ ಪಾರ್ಕ್‌ ವ್ಯವಸ್ಥೆ ಇಲ್ಲ. ಸ್ಟೇಟ್‌ಬ್ಯಾಂಕ್‌ ಬಳಿ ಇರುವ ಪುರಭವನ ಎದುರಿನ ಗಾಂಧೀ ಪಾರ್ಕ್‌ ಸದ್ಯ ಅಸ್ತಿತ್ವ ಕಳೆದುಕೊಂಡಿದೆ. ಪಾರ್ಕ್‌ ಭಾಗದಲ್ಲಿ ಅಂಡರ್‌ಪಾಸ್‌ ಕಾಮಗಾರಿ ಆಗುತ್ತಿದ್ದು, ಇನ್ನೇನು ಮತ್ತೆ ಪಾರ್ಕ್‌ ನಿರ್ಮಾಣ ಆಗಬೇಕಿದೆ. ನಗರದಕ್ಕೆ ಪ್ರಮುಖ ಪಾರ್ಕ್‌ ಎನಿಸಿಕೊಂಡಿರುವ ಕದ್ರಿ ಪಾರ್ಕ್‌ ಕೂಡ ಮತ್ತಷ್ಟು ಅಭಿವೃದ್ಧಿಯ ಹಾದಿ ಹಿಡಿಯಬೇಕು. ಮಲ್ಲಿಕಟ್ಟೆ ಪಾರ್ಕ್‌ ಕಾಮಗಾರಿ ಅರ್ಧದಲ್ಲೇ ನಿಂತಿದೆ. ಹೀಗಿರುವಾಗ ಮೂಲ ಸೌಕರ್ಯ ದಲ್ಲೊಂದಾದ ಪಾರ್ಕ್ ಗಳ ಅಭಿವೃದ್ಧಿಯ ಜತೆ, ಹಸುರೀಕರಣಕ್ಕೆ ಮಹಾನಗರ ಪಾಲಿಕೆ ಮುಂದಾಗಬೇಕು ಎನ್ನುತ್ತಾರೆ ಸ್ಥಳೀಯರು.

ಅಭಿವೃದ್ಧಿಗೆ ಅವಕಾಶವಿದೆ

ಸ್ಥಳೀಯ ಮನಪಾ ಸದಸ್ಯ ವಿನಯರಾಜ್‌ ಅವರು ‘ಸುದಿನ’ಕ್ಕೆ ಪ್ರತಿಕ್ರಿಯಿಸಿ, ಸ್ಮಾರ್ಟ್‌ಸಿಟಿ, 15ನೇ ಹಣಕಾಸು ಆಯೋಗ ಸಹಿತ ವಿವಿಧ ಮೂಲಗಳಿಂದ ಪಾರ್ಕ್‌ ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಆದರೆ ಮಂಗಳೂರು ಪಾಲಿಕೆ ಸದ್ಯ ಟಾಗೋರ್‌ ಪಾಕ್‌ರ ಅಭಿವೃದ್ಧಿಗೆ ಈ ಯಾವುದೇ ಮೂಲವನ್ನು ಬಳಸುತ್ತಿಲ್ಲ. ಪರಿಣಾಮ ಸುತ್ತಲಿನ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಈ ಹಿಂದೆ ಸುಮಾರು 16 ಲಕ್ಷ ರೂ. ವೆಚ್ಚದಲ್ಲಿ ಟಾಗೋರ್‌ ಪಾರ್ಕ್‌ ಅಭಿವೃದ್ಧಿಗೊಳಿಸಲಾಗಿತ್ತು. ಬಳಿಕ ಪಾರ್ಕ್‌ ಗಮನಾರ್ಹ ಅಭಿವೃದ್ಧಿ ಕಂಡಿಲ್ಲ’ ಎನ್ನುತ್ತಾರೆ.

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.