Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
ಕರಾವಳಿ ಸಂಸ್ಕೃತಿಯ ಅನಾವರಣ; 60 ವಸ್ತು ಪ್ರದರ್ಶನ ಮಳಿಗೆ, ಹೆಲಿ ಟೂರಿಸಂ
Team Udayavani, Dec 21, 2024, 3:25 PM IST
ಲಾಲ್‌ಬಾಗ್: ಕರಾವಳಿ ಸಂಸ್ಕೃತಿಯ ಅನಾವರಣದ ‘ಕರಾವಳಿ ಉತ್ಸವ’ಕ್ಕೆ ಶನಿವಾರ ಸಂಜೆ ಚಾಲನೆ ದೊರೆ ಯಲಿದ್ದು ಜ. 19ರ ವರೆಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯ ಕ್ರಮ ನಡೆಯಲಿದೆ.
ಉದ್ಘಾಟನ ಕಾರ್ಯಕ್ರಮದ ಬಳಿಕ ಎರಡು ದಿನ ಪ್ರಸಿದ್ಧ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಲಿದೆ. ತಣ್ಣೀರುಬಾವಿ ಬೀಚ್‌ನಲ್ಲಿ ಡಿ. 28, 29ರಂದು ಬೀಚ್ ಉತ್ಸವ ನಡೆಯಲಿದೆ.
ವಿಶ್ವಗ್ರಾಮದ ವಸ್ತು ಪ್ರದರ್ಶನ
‘ವಿಶ್ವ ಗ್ರಾಮ’ (ಗ್ಲೋಬಲ್ ವಿಲೆಜ್) ಪರಿಕಲ್ಪನೆಯಡಿ ರೂಪುಗೊಳ್ಳಲಿರುವ ಈ ಬಾರಿಯ ವಸ್ತುಪ್ರದರ್ಶನವು ಕರಾವಳಿಯ ನೈಜ ಸಂಸ್ಕೃತಿ, ಸಂಪ್ರದಾಯ, ಸಾಹಿತ್ಯ, ಉಡುಗೆ ತೊಡುಗೆ ಮತ್ತು ಖಾದ್ಯಗಳನ್ನು ಪರಿಚಯಿಸುವ ಉದ್ದೇಶ ಹೊಂದಿದೆ. ವಿವಿಧ ಜನಾಂಗದ ರೀತಿ ರಿವಾಜುಗಳನ್ನು ಪರಿಚಯಿಸಲು ವ್ಯವಸ್ಥೆಯನ್ನು ಮಾಡಲಾ ಗುತ್ತಿದ್ದು ಕೈಮಗ್ಗ, ಕುಂಬಾರಿಕೆ, ಕರಕುಶಲ ವಸ್ತುಗಳ ತಯಾರಿಕೆ ಮತ್ತು ಇನ್ನಿತರ ಕೌಶಲಗಳ ಅನಾವರಣವಾಗಲಿದೆ. ಆದಿವಾಸಿ ಮತ್ತು ಗುಡ್ಡಗಾಡು ಜನಾಂಗದ ಸಾಂಪ್ರದಾಯಿಕ ಉತ್ಪನ್ನಗಳು ಕೂಡ ಸಾರ್ವಜನಿಕರಿಗೆ ಲಭ್ಯವಾಗಲಿದೆ. ವಸ್ತು ಪ್ರದರ್ಶನದಲ್ಲಿ ಒಟ್ಟು 60 ಮಳಿಗೆಗಳಿರಲಿವೆ.
ಜತೆಗೆ ಅಮ್ಯೂಸ್‌ಮೆಂಟ್ ಪಾರ್ಕ್ ಇರ ಲಿದೆ. ಕರಾವಳಿಯ ವೈವಿಧ್ಯಮಯ ಖಾದ್ಯ ಗಳ ತಯಾರಿಕೆ, ಪ್ರದರ್ಶನ, ಮಾರಾಟಗಳನ್ನು ಒಂದೇ ಸೂರಿನಡಿ ಏರ್ಪಡಿಸಲಾಗಿದೆ.
ಇಂದು ಆಕರ್ಷಕ ಮೆರವಣಿಗೆ
ಕರಾವಳಿ ಉತ್ಸವದ ಉದ್ಘಾಟನೆ ಪ್ರಯುಕ್ತ ಶನಿವಾರ ಸಂಜೆ 4ಕ್ಕೆ ಕೊಡಿಯಾಲಬೈಲಿನ ಕೆನರಾ ಕಾಲೇಜಿ ನಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಮೆರವಣಿಗೆ ನಡೆಯಲಿದೆ. ಜಿಲ್ಲೆಯ ಸಂಸ್ಕೃತಿ, ವೈವಿಧ್ಯಮಯ ಸಾಂಪ್ರದಾಯಿಕ ವೇಷ ಭೂಷಣ ಗಳೊಂದಿಗೆ ಕಲಾವಿದರ ತಂಡಗಳು ಮೆರವ ಣಿಗೆಯಲ್ಲಿ ಭಾಗವಹಿಸಲಿವೆ. ಬಳಿಕ ಉದ್ಘಾಟನೆ ನಡೆಯಲಿದೆ.
ರೊಬೊಟಿಕ್ ಬಟರ್‌ಫ್ಲೈ ಪ್ರದರ್ಶನ
ಕದ್ರಿ ಪಾರ್ಕ್‌ನಲ್ಲಿ ಇದೇ ಮೊದಲ ಬಾರಿಗೆ ರೊಬೊಟಿಕ್ ಬಟರ್ ಫ್ಲೈ ಪ್ರದರ್ಶನ ನಡೆಯಲಿದೆ. ಡಿ. 22ರ ಸಂಜೆ 4ರಿಂದ ರಾತ್ರಿ 9 ಗಂಟೆಯವರೆಗೆ ಪ್ರತಿದಿನ ಈ ಪ್ರದರ್ಶನವಿರುತ್ತದೆ.
ಹೆಲಿಕಾಪ್ಟರ್‌ನಲ್ಲಿ ಕರಾವಳಿ ದರ್ಶನ
ಕರಾವಳಿ ಉತ್ಸವವನ್ನು ಈ ಬಾರಿ ರಮಣೀಯವಾಗಿಸಲು ಹೆಲಿಕಾಪ್ಟರ್‌ನಲ್ಲಿ ಕರಾವಳಿ ಸೊಬಗು ಸವಿಯುವ ವ್ಯವಸ್ಥೆ ಮಾಡಲಾಗಿದೆ. ಡಿ. 21ರಿಂದ 29ರ ವರೆಗೆ ನಗರದ ಮೇರಿಹಿಲ್ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಪ್ರಯಾಣ ಪ್ರಾರಂಭವಾಗಲಿದೆ. ಸಾರ್ವಜನಿಕರು ನಗರ ದರ್ಶನ ಹಾಗೂ ಕಡಲ ಕಿನಾರೆಯ ಸೌಂದರ್ಯ ಸವಿಯಲು ಸಿದ್ಧತೆ ಮಾಡಲಾಗಿದೆ. ಹೆಲಿಕಾಪ್ಟರ್ ಪ್ರಯಾಣದ ಪ್ರತೀಟ್ರಿಪ್‌ನಲ್ಲಿ 6 ಜನರಿಗೆ ಸಂಚರಿಸಲು ಅವಕಾಶವಿದೆ. www.helitaxii.com ಸಂಪರ್ಕಿಸಬಹುದು.
ಅಪೂರ್ವ ಉತ್ಸವ
ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದ ಕಾರ್ಯಕ್ರಮಗಳಲ್ಲಿ ಕರಾವಳಿಯ ನೈಜ ಸಂಸ್ಕೃತಿ ಸಾಹಿತ್ಯ, ಉಡುಗೆ ತೊಡುಗೆಗಳು ಹಾಗೂ ಸಾಂಪ್ರದಾಯಿಕ ತಿಂಡಿ ತಿನಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮ ನಡೆಯಲಿದೆ.
– ಮುಲ್ಲೈ ಮುಗಿಲನ್, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.