“ಆರೋಗ್ಯಯುತ ಸಮಾಜ ನಿರ್ಮಾಣ ಧ್ಯೇಯವಾಗಲಿ ’

ಗಾಂಧೀಜಿಯವರ 150ನೇ ಜನ್ಮ ದಿನಾಚರಣೆ

Team Udayavani, Oct 3, 2019, 3:00 AM IST

x-5

"ಸ್ವಚ್ಛ ಭಾರತ್‌ ಕಾರ್ಯಕ್ರಮ'ವನ್ನು ಮಂಗಳೂರು ವಿವಿಯ ಉಪಕುಲಪತಿ ಪ್ರೊ| ಪಿ.ಎಸ್‌. ಎಡಪಡಿತ್ತಾಯ ಅವರು ಉದ್ಘಾಟಿಸಿದರು.

ಮಂಗಳಗಂಗೋತ್ರಿ: ಸ್ವಚ್ಛತೆ ಅಭಿಯಾನದ ನಿರಂತರ ಪ್ರಕ್ರಿಯೆಯಿಂದ ಸ್ವಚ್ಛ, ಸ್ವಸ್ಥ್ಯ ಮನಸ್ಸಿನೊಂದಿಗೆ ಆರೋಗ್ಯಪೂರ್ಣ ಸಮಾಜವನ್ನು ಕಟ್ಟಲು ಸಾಧ್ಯವಿದೆ. ಇಂತಹ ಜಾಗೃತಿ ಕಾರ್ಯಕ್ರಮದಿಂದ ಸಮಾಜದಲ್ಲಿ ಬದಲಾವಣೆ ಮಾತ್ರ ಅಲ್ಲ ಪರಿವರ್ತನೆಯೂ ಸಾಧ್ಯ ಎಂದು ಮಂಗಳೂರು ವಿವಿಯ ಉಪಕುಲಪತಿ ಪ್ರೊ| ಪಿ.ಎಸ್‌. ಎಡಪಡಿತ್ತಾಯ ಅವರು ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯ, ಮಾತಾ ಅಮೃತಾನಂದವಯಿ ಮಠ, ಎಂಆರ್‌ಪಿಎಲ್‌, ಕೊಣಾಜೆ ಗ್ರಾಮ ಪಂಚಾಯತ್‌, ಕೆಎಸ್‌ಆರ್‌ಪಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಮಹಾತ್ಮಾ ಗಾಂಧಿಯವರ 150ನೇ ಜನ್ಮದಿನದ ಪ್ರಯುಕ್ತ ಬುಧವಾರ ನಡೆದ “ಸ್ವಚ್ಛ ಭಾರತ್‌ ಕಾರ್ಯಕ್ರಮ’ದ ಕೊಣಾಜೆ ವಿವಿಯ ಮಂಗಳಾ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ಆರಂಭದ ಅನಂತರ ಜಿಲ್ಲೆಯಲ್ಲೂ ರಾಮಕೃಷ್ಣ ಮಿಷನ್‌ ಸಹಿತ ಅಮೃತಾನಂದಮಯಿ ಮಠ ಈ ಕಾರ್ಯವನ್ನು ಮುಂದುವರೆಸಿದ್ದು, ಮಂಗಳೂರು ವಿವಿಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಇಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿದೆ. ಇದು ಎಲ್ಲರ ಒಗ್ಗೂಡುವಿಕೆಯಿಂದ ಸಾಧ್ಯವಾಗಿದ್ದು ಮುಂದಿನ ದಿನಗಳಲ್ಲಿ ನಿರಂತರವಾಗಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.

ಕ್ರೀಡಾ ನೀತಿ ಅನುಷ್ಠಾನ
ವಿವಿಯಲ್ಲಿ ಈಗಾಗಲೇ ಕ್ರೀಡಾ ನೀತಿ, ಸಾಂಸ್ಕೃತಿಕ ನೀತಿಯನ್ನು ಅನುಷ್ಠಾನಗೊಳಿಸಿದ್ದು, ಮುಂದಿನ ದಿನಗಳಲ್ಲಿ ಸ್ವಸ್ತಿಕ್‌ ಪದ್ಮರಂತಹ ಯುವ ವಿಜ್ಞಾನಿಗಳನ್ನು ಪ್ರೋತ್ಸಾಹಿಸುವ ಮತ್ತು ಅವರಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯ ವಿವಿ ಮಾಡಲಿದೆ ಎಂದರು. ಮಾತಾ ಅಮೃತಾನಂದಮಯಿ ಮಠದ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಮ್ಮಾನ
ಈ ಸಂದರ್ಭ ವಿವಿ ವತಿಯಿಂದ ಪುತ್ತೂರಿನ ಯುವ ವಿಜ್ಞಾನಿ ಸಂಶೋಧಕ ಸ್ವಸ್ತಿಕ್‌ಪದ್ಮ ಅವರನ್ನು ಸಮ್ಮಾನಿಸಲಾಯಿತು. ಸೇವಾ ಯೋಜನೆಯ ಸಂಯೋಜನಾಧಿಕಾರಿ ವಿನಿತಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಎಂ.ಆರ್‌. ಪಿ.ಎಲ್‌ ನ ಗ್ರೂಪ್‌ ಜನರಲ್‌ ಸೆಕ್ರಟರಿ ಬಿ.ಎಚ್‌.ಎಸ್‌. ಪ್ರಸಾದ್‌, ಮಂಗಳೂರು ವಿವಿ ಕುಲಸಚಿವ ಪ್ರೊ|ಎ.ಎಂ. ಖಾನ್‌ ಅಮಲಾ ಭಾರತ ಕಾರ್ಯಕ್ರಮದ ಅಧ್ಯಕ್ಷ ಡಾ| ಜೀವರಾಜ್‌ ಸೊರಕೆ, ನಿಕಟಪೂರ್ವ ಅಧ್ಯಕ್ಷ ಪ್ರಸಾದ್‌ ರಾಜ್‌ ಕಾಂಚನ, ಎನ್ನೆ ಸ್ಸೆಸ್‌ ಸಂಯೋಜಕ ಗೋವಿಂದ ರಾಜ್‌, ಎಂಆರ್‌ಪಿಎಲ್‌ ವ್ಯವಸ್ಥಾಪಕಿ ವೀಣಾ ಶೆಟ್ಟಿ, ಸ್ವತ್ಛತಾ ಆಂದೋಲನದ ಕಾರ್ಯದರ್ಶಿ ಸುರೇಶ್‌ ಅಮೀನ್‌, ಕೆಎಸ್‌ಆರ್‌ಪಿ ಕಮಾಂಡೆಂಟ್‌ ಜನಾರ್ದನ ಆರ್‌, ಕೊಣಾಜೆ ಗ್ರಾ.ಪಂ. ಅಧ್ಯಕ್ಷ ನಝರ್‌ ಷಾ ಪಟ್ಟೋರಿ, ಕೊಣಾಜೆ ಠಾಣಾ ಇನ್‌ಸ್ಪೆಕ್ಟರ್‌ ರವಿನಾಯಕ್‌, ಸುಬ್ರಾಯ ಭಟ್‌ ಮುಖ್ಯ ಅತಿಥಿಗಳಾಗಿದ್ದರು.

ಕಾರ್ಯಕ್ರಮದ ಅಂಗವಾಗಿ ಮಂಗಳೂರು ವಿವಿ ವಿದ್ಯಾರ್ಥಿಗಳು, ಕೆಎಸ್‌ಆರ್‌ಪಿ ಪೊಲೀಸರು, ಕೊಣಾಜೆ ಗ್ರಾಮದ ನಾಗರಿಕರು, ಮಂಗಳೂರು ವಿವಿ ಶಿಕ್ಷಕ ಮತ್ತು ಶಿಕ್ಷಕೇತರ ಉದ್ಯೋಗಿಗಳು ಮಾತಾ ಅಮೃತಾನಂದ ಮಯಿ ಮಠದ ಕಾರ್ಯಕರ್ತರು ಸಹಿತ ಸುಮಾರು 3,000 ಕ್ಕೂ ಹೆಚ್ಚು ಕಾರ್ಯಕರ್ತರು ಮಂಗಳೂರು ವಿವಿ ಪರಿಸರ ಸಹಿತ ಕೊಣಾಜೆ, ಪಜೀರು, ಬೆಳ್ಮ ಗ್ರಾಮ ವ್ಯಾಪ್ತಿಯಲ್ಲಿ 10 ತಂಡಗಳಾಗಿ ರಚಿಸಿ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿದರು.

ಮಂಗಳೂರು ಆಕಾಶವಾಣಿಯ ನಿವೃತ್ತ ಮುಖ್ಯಸ್ಥ ಡಾ| ವಸಂತ ಕುಮಾರ್‌ ಪೆರ್ಲ ಸ್ವಾಗತಿಸಿ, ನಿರ್ವಹಿಸಿದರು. ಡಾ| ಗೋವಿಂದರಾಜು ವಂದಿಸಿದರು.

ಸ್ವಚ್ಛತಾ ಅಭಿಯಾನ ಪ್ರೇರಣೆ
ಶಾಸಕ ಯು.ಟಿ. ಖಾದರ್‌ ಮಾತನಾಡಿ, ಸ್ವಚ್ಛತಾ ಅಭಿಯಾನದಂತಹ ಕಾರ್ಯಕ್ರಮಗಳು ಊರಿನ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ. ಯಾವುದೇ ದೇಶ ಅಭಿವೃದ್ಧಿ ಯಾಗಬೇಕಾದರೆ ಸ್ವಚ್ಛತೆಯ ವಿಷಯದಲ್ಲಿ ನಾವು ಪ್ರಥಮವಾಗಿ ಜಾಗೃತರಾಗಬೇಕಿದೆ. ಕಾನೂನಿನ ಮೂಲಕ ಸ್ವಚ್ಛತೆಯನ್ನು ನಡೆಸಲು ಸಾಧ್ಯವಿಲ್ಲ. ಮಹಾತ್ಮ ಗಾಂಧೀಜಿಯವರ ಕನಸಿನಂತೆ ನಮ್ಮ ಮನಸ್ಸನ್ನು ಸ್ವಚ್ಛಗೊಳಿಸುವುದರೊಂದಿಗೆ ಸಮಾಜದ ಸ್ವಚ್ಛತೆಗೆ ಪಣ ತೊಡಬೇಕು ಎಂದರು.

ಪರಿಸರ ಉಳಿವಿಗೆ ರಕ್ಷಕರಾಗಬೇಕಿದೆ
ಪುತ್ತೂರಿನ ಯುವ ವಿಜ್ಞಾನಿ ಸಂಶೋಧಕ ಸ್ವಸ್ತಿಕ್‌ಪದ್ಮ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ನಾವು ಪರಿಸರ ಸ್ವಚ್ಛತೆಗಾಗಿ ಪರಿಸರ ಪೊಲೀಸ್‌ ಆಗಿ ಪ್ರತೀ ದಿನ ಕಾರ್ಯ ನಿರ್ವಹಿಸಬೇಕಿದೆ. ಪ್ಲಾಸ್ಟಿಕ್‌ ನಮಗೆ ಮಾರಕ ಎನ್ನುವುದು ಜನರಲ್ಲಿ ನಂಬಿಕೆ ಆದರೆ ಸಮಸ್ಯೆ ಪ್ಲಾಸ್ಟಿಕ್‌ನದ್ದಲ್ಲ ಅದನ್ನು ಬಳಸುವ ಮನುಷ್ಯರದ್ದು. ನಾವು ಒಂದು ಬಾರಿ ಬಳಸಿ ಅದನ್ನು ಎಲ್ಲೆಂದರಲ್ಲಿ ಎಸೆಯುತ್ತೇವೆ. ಮುಖ್ಯವಾಗಿ ಪ್ಲಾಸ್ಟಿಕ್‌ ಸರಿಯಾಗಿ ನಿರ್ವಹಣೆ ಮಾಡಬೇಕು. ಮುಖ್ಯವಾಗಿ ಪ್ಲಾಸ್ಟಿಕ್‌ನೊಂದಿಗೆ ಜೈವಿಕ ತ್ಯಾಜ್ಯವನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಚಿಂತಿಸಬೇಕಾಗಿದೆ ಎಂದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.