ಜಾನುವಾರು ಸಾಗಾಟ: ನಿಯಮ ಜಾರಿಗೆ ಡಿಸಿ ಸೂಚನೆ
Team Udayavani, Jul 28, 2020, 8:01 AM IST
ಮಂಗಳೂರು: ಜಾನುವಾರು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾ.ಪಂ.ಮಟ್ಟದಲ್ಲಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಪಶುಪಾಲನಾ ಇಲಾಖೆಯವರಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶುವೈದ್ಯಾಧಿಕಾರಿ, ಮೇಲ್ಮಟ್ಟದ ಅಧಿಕಾರಿಗಳು ಜಾನು ವಾರು ಸಾಗಣೆಗೆ ಪರವಾನಿಗೆ ನೀಡಬಹುದಾಗಿದ್ದು, ಈ ಬಗ್ಗೆ ಗಮನಹರಿಸಲು ಹೇಳಿದರು.
ಬಕ್ರೀದ್ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಅಕ್ರಮವಾಗಿ ಗೋವು/ಕರುಗಳು, ಒಂಟೆಗಳು ಮತ್ತು ಇತರ ಜಾನುವಾರುಗಳ ಸಾಗಾಣಿಕೆ ಮತ್ತು ವಧೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಸರಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಹಸು/ಕರುಗಳು, ಒಂಟೆಗಳು ಮತ್ತು ಇತರೆ ಜಾನುವಾರುಗಳನ್ನು ಸಾಗಾಣಿಕೆ ಅಥವಾ ವಧೆ ಮಾಡುವಂತಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ನಿಯಮಾವಳಿ ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು. ಅಕ್ರಮ/ ಅನಧಿಕೃತವಾಗಿ ಜಾನುವಾರು ಸಾಗಾಣಿಕೆ ಮಾಡುವ ಸಂದರ್ಭ ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳದೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಕಾನೂನನ್ನು ಉಲ್ಲಂಘಿಸಿ ಜಾನುವಾರು ಸಾಗಾಣಿಕೆ ಮಾಡುವ ವಾಹನ ಅಥವಾ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿ’
ಈ ಸಮಯದಲ್ಲಿ ಪ್ರಾರ್ಥನಾ ಮಂದಿರಗಳಲ್ಲಿ ಹೆಚ್ಚಿನ ಜನರು ಸೇರದಂತೆ ನಿಗಾ ವಹಿಸಿ, ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಲು ಪ್ರತೀ ಠಾಣೆ ವ್ಯಾಪ್ತಿಯಲ್ಲಿ ಶಾಂತಿ ಸಭೆ ಏರ್ಪಡಿಸಿ ಜನರ ಮನವೊಲಿಸಬೇಕು. ಬಕ್ರಿದ್ ಸಂದರ್ಭ ಸೂಕ್ತ ಭದ್ರತೆಯನ್ನು ಮಹಾನಗರಪಾಲಿಕೆ, ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಮೂಲಕ ಮಾಡುವಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತು, ವಾಹನಗಳ ಸುಗಮ ಸಂಚಾರ ಮತ್ತು ವಾಹನಗಳ ನಿಲುಗಡೆಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳು ಜಿಲ್ಲಾಧಿಕಾರಿ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.