ಕರ್ಕಶ ಹಾರ್ನ್ ಗಳಿಗೆ ಬೀಳಲಿ ತಡೆ


Team Udayavani, Jun 10, 2018, 4:20 PM IST

10-june-16.jpg

ಮಂಗಳೂರು ನಗರ ಸಹಿತ ಗ್ರಾಮೀಣ ಭಾಗಗಳಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ಶಬ್ಧಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದನ್ನು ತಡೆಗಟ್ಟಲು ಸಾರಿಗೆ ಇಲಾಖೆಯಿಂದ ಕ್ರಮಕೈಗೊಂಡಿದ್ದರೂ ಇದು ಸಂಪೂರ್ಣವಾಗಿ ಯಶಸ್ವಿಯಾಗುತ್ತಿಲ್ಲ. ಮಂಗಳೂರು ನಗರದಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಅದರಲ್ಲೂ ನಗರದಲ್ಲಿ ಸಂಚರಿಸುವ ಸಿಟಿ ಖಾಸಗಿ ಬಸ್‌ಗಳ ಕರ್ಕಶ ಹಾರ್ನ್ ನಿಂದ ಸಾರ್ವಜನಿಕರಿಗೆ ದಿನಂಪ್ರತಿ ಕಿರಿಕಿರಿ ಅನುಭವಿಸಬೇಕಾಗುತ್ತದೆ. 

ಈ ಬಗ್ಗೆ ಟ್ರಾಫಿಕ್‌ ಪೊಲೀಸರು ಇತ್ತೀಚೆಗೆ ಅನೇಕ ಪ್ರದೇಶಗಳಲ್ಲಿ ಕಾವಲು ನಿಂತು ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದ್ದಾರೆ. ಆದರೂ ಈ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ನಗರ ಪ್ರದೇಶದಲ್ಲಿ ಅದರಲ್ಲಿಯೂ ಶಾಲಾ ಕಾಲೇಜು ವಠಾರದ ಪಕ್ಕ ಸಂಚರಿಸುವ ರಸ್ತೆಗಳಲ್ಲಿ ಹಾರ್ನ್ ಹಾಕುವುದು ನಿಷೇಧಿಸಲಾಗಿದೆ. ಆದರೂ ಈ ನಿಯಮವನ್ನು ವಾಹನ ಮಾಲಕರು ಪಾಲನೆ ಮಾಡುತ್ತಿಲ್ಲ. ಆರ್‌ಟಿಒ ಅಧಿಕಾರಿಗಳು, ಟ್ರಾಫಿಕ್‌ ಪೊಲೀಸ್‌ ಅಧಿಕಾರಿಗಳು ಎಷ್ಟೇ ಮುನ್ನೆಚ್ಚರಿಕೆ ನೀಡಿದರೂ ಇದಕ್ಕೆ ಕಡಿವಾಣ ಬಿದ್ದಿಲ್ಲ.

ಮಂಗಳೂರಿನಲ್ಲಿ ಸಿಟಿ ಬಸ್‌ ಚಾಲಕರು ಮತ್ತು ನಿರ್ವಾಹಕರಿಗೆ ವರ್ಷಂಪ್ರತಿ ಕಾರ್ಯಾಗಾರ ನಡೆಯುತ್ತದೆ. ಈ ಕಾರ್ಯಾಗಾರದಲ್ಲಿ ಆರ್‌ಟಿಒ ಅಧಿಕಾರಿಗಳು, ಟ್ರಾಫಿಕ್‌ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವರಣೆಯನ್ನು ನೀಡುತ್ತಾರೆ. ಅಲ್ಲದೆ, ವಾಹನ ಮಾಲಕರು ಕೂಡ ನಿಯಮ ಪಾಲನೆಯ ಬಗ್ಗೆ ಚಾಲಕರಿಗೆ ತಿಳುವಳಿಕೆ ನೀಡುತ್ತಾರೆ. ಆದರೂ, ಅನೇಕ ನಿಯಮಗಳು ಗಾಳಿಗೆ ತೂರಲಾಗುತ್ತಿರುವುದು ವಿಪರ್ಯಾಸ. ನಗರದಲ್ಲಿ ಸಂಚರಿಸುವ ಅನೇಕ ವಾಹನಗಳು ಇಂದು ಹೊಗೆ ಉಗುಳುವ ಯಂತ್ರಗಳಾಗಿವೆ. ಎಂಜಿನ್‌ ಸುಸ್ಥಿತಿಯಲ್ಲಿರದೆ ಹೆಚ್ಚಿನ ಪ್ರಮಾಣದಲ್ಲಿ ಹೊಗೆ ಉಗುಳುತ್ತಿರುವ ವಾಹನಗಳನ್ನು ಸಾರಿಗೆ ಇಲಾಖೆ ತಪಾಸಣೆ ನಡೆಸಬೇಕಿದೆ. ಇವಿಷ್ಟೇ ಅಲ್ಲದೆ, ಇತ್ತೀಚಿನ ದಿನಗಳಲ್ಲಿ ವಾಹನಗಳ ಆಯಿಲ್‌ ರಸ್ತೆಗೆ ಸೋರುತ್ತಿದ್ದು, ಇದು ಪರಿಸರವನ್ನು ಹಾಳು ಮಾಡುವುದು ಮಾತ್ರವಲ್ಲದೇ ಅಪಘಾತಕ್ಕೂ ಕಾರಣವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಹಾಗೂ ಶಬ್ಧ ಮಾಲಿನ್ಯ ರಹಿತ ಸುಂದರ
ಪರಿಸರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಠಿನ ಕ್ರಮಕೈಗೊಳ್ಳಬೇಕಿದೆ.

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

7

Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.