Mallikatte: ಸಿಟಿ ಆಸ್ಪತ್ರೆ ಜಂಕ್ಷನ್; ರಸ್ತೆ ಕಾಂಕ್ರೀಟ್ ಕಾಮಗಾರಿ ಆರಂಭ
Team Udayavani, Oct 28, 2024, 3:53 PM IST
ಮಲ್ಲಿಕಟ್ಟೆ: ಬಂಟ್ಸ್ ಹಾಸ್ಟೆಲ್ ಕಡೆಯಿಂದ ಮಲ್ಲಿಕಟ್ಟೆಗೆ ಸಾಗುವ ರಸ್ತೆಯ ಸಿಟಿ ಆಸ್ಪತ್ರೆ ಜಂಕ್ಷನ್‌ನಲ್ಲಿ ಒಳಚರಂಡಿ ಕಾಮಗಾರಿಗಾಗಿ ಅಗೆದು ಹಾಕಿದ್ದ ರಸ್ತೆಗೆ ಮತ್ತೆ ಕಾಂಕ್ರೀಟ್ ಹಾಕುವ ಕಾಮಗಾರಿ ಆರಂಭವಾಗಿದೆ.
ಕಾಮಗಾರಿ ಮುಗಿದು ವರ್ಷ ಕಳೆದರೂ ರಸ್ತೆಯನ್ನು ಸಮರ್ಪಕ ವಾಗಿ ದುರಸ್ತಿ ಮಾಡದೆ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಕುರಿತಂತೆ ಅ. 23ರಂದು ‘ಒಳಚರಂಡಿಗೆ ಅಗೆದ ರಸ್ತೆ ಇನ್ನೂ ದುರಸ್ತಿ ಆಗಿಲ್ಲ’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಲಾಗಿತ್ತು. ವರದಿಯಿಂದ ಎಚ್ಚೆತ್ತ ಸ್ಥಳೀಯ ಕಾರ್ಪೋರೆಟರ್, ಮನಪಾ ಅಧಿಕಾರಿಗಳು ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ.
ಕಾಮಗಾರಿ ವೇಳೆ ಬಂಟ್ಸ್ ಹಾಸ್ಟೆಲ್ - ಮಲ್ಲಿಕಟ್ಟೆ ರಸ್ತೆಯನ್ನು ಎರಡೂ ಪಥದಲ್ಲಿ ಅಡ್ಡಲಾಗಿ ಅಗೆದು ಹಾಕಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಂಡು ಸುಮಾರು ಒಂದು ವರ್ಷ ಆಗುತ್ತಾ ಬಂದರೂ ರಸ್ತೆಯನ್ನು ದುರಸ್ತಿ ಮಾಡಿರಲಿಲ್ಲ. ಮಳೆಗಾಲಕ್ಕೆ ಮುನ್ನ ಒಂದು ಬಾರಿ ಡಾಮರು ತೇಪೆ ಹಾಕಲಾಯಿತಾದರೂ ಮುಂಗಾರು ಮಳೆಯ ಅಬ್ಬರಕ್ಕೆ ಕೆಲವೇ ದಿನಗಳಲ್ಲಿ ಎದ್ದು ಹೋಗಿದೆ. ಬಳಿಕ ದೊಡ್ಡ ಗುಂಡಿಗಳು ಉಂಟಾಗಿತ್ತು.
ಅನಂತರ ಗುಂಡಿಗಳಿಗೆ ಜಲ್ಲಿ ಹುಡಿ ಸಿಮೆಂಟ್ ಮಿಶ್ರಣ ತಂದು ಸುರಿಯಲಾಯಿತು. ಅದರೆ ಇದು ಕೂಡ ನೀರಿನೊಂದಿಗೆ ಕೊಚ್ಚಿ ಹೋಗಿತ್ತು. ಕೊನೆಗೂ ರಸ್ತೆಯ ದುರಸ್ತಿ ಕಾಮಗಾರಿ ಆರಂಭವಾಗಿರುವುದಕ್ಕೆ ವಾಹನ ಸವಾರರು, ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.