Mangaladevi: ಮೂವರು ಮಹಿಳೆಯರ ಚಿನ್ನ ಕಳವು
Team Udayavani, Oct 14, 2024, 9:00 PM IST
ಮಂಗಳೂರು: ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಮೂವರು ಮಹಿಳೆಯರ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳು ಕಳವಾಗಿರುವ ಕುರಿತಂತೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೀಲಾ (55) ಅವರು ಅಕ್ಕನ ಮಗಳು ಸ್ಮಿತಾ ಜತೆ ದೇವಸ್ಥಾನಕ್ಕೆ ಬಂದಿದ್ದು, ದೇವರ ದರ್ಶನ ಪಡೆದು, ಊಟ ಮಾಡಿ ಕೈತೊಳೆದು ದೇವಸ್ಥಾನದ ಅಂಗಳಕ್ಕೆ ಬಂದಾಗ ಅವರ ಕುತ್ತಿಗೆಯಲ್ಲಿದ್ದ ಸುಮಾರು 6 ಪವನ್ನ ಚಿನ್ನದ ಸರ ಕಳವಾಗಿರುವುದು ತಿಳಿದು ಬಂದಿದೆ. ಇದೇ ವೇಳೆ ದೇವಸ್ಥಾನದ ಆವರಣದಲ್ಲಿದ್ದ ಕಮಲಾಕ್ಷಿ (75) ಅವರ ಕುತ್ತಿಗೆಯಲ್ಲಿದ್ದ 3.75 ಪವನ್ ತೂಕದ ಚಿನ್ನದ ಸರ ಮತ್ತು ಮೀನಾಕ್ಷಿ (75) ಅವರ 4.50 ಪವನ್ ತೂಕದ ಚಿನ್ನದ ಸರ ಕಾಣೆಯಾಗಿರುವುದೂ ಬೆಳಕಿಗೆ ಬಂದಿದೆ. ಕಳವು ಮಾಡಲಾದ ಚಿನ್ನದ ಸರಗಳ ಒಟ್ಟು ಮೌಲ್ಯ ಸುಮಾರು 4 ಲಕ್ಷ ರೂ. ಎಂದು ಅಂದಾಜಿಸಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.