Mangalore: ವಂಚನೆ ಪ್ರಕರಣದಲ್ಲಿ ಭಾಗಿ ಆರೋಪಿಸಿ 30.65 ಲಕ್ಷ ರೂ. ಹಣ ವರ್ಗಾಯಿಸಿ ವಂಚನೆ
Team Udayavani, Nov 7, 2024, 9:50 PM IST
ಮಂಗಳೂರು: ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವುದಕ್ಕೆ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿದ್ದು, ಅರೆಸ್ಟ್ ವಾರೆಂಟ್ ಇರುವುದರಿಂದ ಹೇಳಿದಂತೆ ಕೇಳದಿದ್ದಲ್ಲಿ ತೊಂದರೆ ನೀಡುವುದಾಗಿ ತಿಳಿಸಿ 30.65 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಿಗೆ ಅ. 19ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ನಿಮ್ಮ ಮೊಬೈಲ್ ನಂಬರ್ ಮೂಲಕ ವಂಚನೆ ಪ್ರಕರಣಗಳು ನಡೆದಿವೆ. ಮುಂಬಯಿನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬಯಿನ ಸಹಾರ ಪೊಲೀಸ್ ಠಾಣೆಯಿಂದ ಕರೆ ಬರುವುದಾಗಿ ತಿಳಿಸಿದ್ದಾರೆ. ಅದೇ ದಿನ ಬೆಳಗ್ಗೆ 11 ಗಂಟೆ ವೇಳೆಗೆ ಇನ್ನೋರ್ವ ಅಪರಿಚಿತ ವ್ಯಕ್ತಿ ಅವರ ಮೊಬೈಲ್ಗೆ ವಾಟ್ಸಾಪ್ ವೀಡಿಯೋ ಕಾಲ್ ಮಾಡಿದ್ದಾನೆ. ಆತ ಪೊಲೀಸ್ ಯೂನಿಫಾರಂನಲ್ಲಿದ್ದ. ತನ್ನ ಹೆಸರು ಮನೋಜ್ ಕುಮಾರ್ ಎಂದು ತಿಳಿಸಿದ್ದಾನೆ. ವಿವೇಕ ದಾಸ್ ಎಂಬ ವ್ಯಕ್ತಿ ಮುಂಬಯಿನ ಎಸ್ಬಿಐ ಬ್ಯಾಂಕ್ನಲ್ಲಿ ನಿಮ್ಮ ಹೆಸರಿನಲ್ಲಿ ಖಾತೆ ತೆರೆದು ಅವ್ಯಹಾರದ ಹಣದಲ್ಲಿ 38 ಲಕ್ಷ ರೂ. ಕಮಿಷನ್ ನಿಮಗೆ ನೀಡಿದ್ದಾನೆ. ಆತನನ್ನು ದಸ್ತಗಿರಿ ಮಾಡುವಾಗ ಈ ಬಗ್ಗೆ ಒಪ್ಪಿಕೊಂಡಿರುವುದಾಗಿ ವಿವರಿಸಿದ್ದಾನೆ.
ದೂರುದಾರರು ಒಪ್ಪಿಕೊಳ್ಳದಿದ್ದಾಗ ಕರೆ ಮಾಡಿದಾತ ನಿಮ್ಮ ಹೆಸರಿನಲ್ಲಿರುವ ಎಲ್ಲ ಖಾತೆಗಳನ್ನು ಸ್ಥಗಿತಗೊಳಿಸುವುದಾಗಿ ಬೆದರಿಸಿ, ಅರೆಸ್ಟ್ ವಾರಂಟ್ ಇರುವುದರಿಂದ ಹೇಳಿದ ಹಾಗೆ ಕೇಳದಿದ್ದಲ್ಲಿ ವಿವೇಕ್ದಾಸ್ ಕಡೆಯವರು ಬಂದು ತೊಂದರೆ ನೀಡುತ್ತಾರೆ ಎಂದು ತಿಳಿಸಿದ್ದ. ಇದರಿಂದ ಗಾಬರಿಗೊಂಡ ದೂರುದಾರರು ಅ. 21ರಿಂದ 23ರ ವರೆಗೆ ಹಂತ ಹಂತವಾಗಿ 30.65 ಲಕ್ಷ ರೂ. ಹಣವನ್ನು ಆತ ಹೇಳಿದ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದಾಗಿ ತಿಳಿದುಬಂದಿದ್ದು, ದೂರಿನಲ್ಲಿ ಈ ಬಗ್ಗೆ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.