![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 3, 2019, 2:27 PM IST
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದರನ್‌ವೇ ವಿಸ್ತರಣೆ ಮಾಡಬೇಕು ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳ ಬೇಕು ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.
ಲೋಕಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ಅವರು ಮಂಗಳೂರು ವಿಮಾನ ನಿಲ್ದಾಣದ ರನ್-ವೇಯನ್ನು ವಿಸ್ತರಿಸುವ ವಿಚಾರದ ಬಗ್ಗೆ ಪ್ರಸ್ತಾವಿಸಿದರು.
ಜೂ. 30ರಂದು ದುಬಾೖಯಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ರನ್ ವೇಯಿಂದ ಹೊರಗಡೆ ಜಾರಿದ್ದು, ಸಂಭವನೀಯ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇನ್ನೂ 20 ಅಡಿ ಮುಂದಕ್ಕೆ ವಿಮಾನ ಚಲಿಸಿದ್ದರೆ ಗಂಭೀರ ಅವಘಡ ಸಂಭವಿಸುವ ಸಾಧ್ಯತೆಯಿತ್ತು. 2010ರ ಮೇ 22ರಂದು ದುಬಾೖಯಿಂದ ಮಂಗಳೂರಿಗೆ ಆಗಮಿಸಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಕಿರಿದಾದ ರನ್ ವೇಯಿಂದಾಗಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದು 158 ಪ್ರಯಾಣಿಕರು ಮೃತಪಟ್ಟಿದ್ದರು.
ಇದೇ ರೀತಿ 1981 ಆ. 19ರಂದು ಇಂಡಿಯನ್ ಏರ್‌ಲೈನ್ಸ್ ವಿಮಾನವು ರನ್ ವೇಯಿಂದ ಜಾರಿ ಕಂದಕದ ಸಮೀಪ ನಿಂತಿತ್ತು. ಈ ಎಲ್ಲ ದುರ್ಘಟನೆಗಳಿಗೆ ಕಾರಣ ಕಿರಿದಾದ ರನ್‌ವೇ. ಆದ್ದರಿಂದ ಕೇಂದ್ರ ಸರಕಾರವು ಮಂಗಳೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಹಾಗೂ ಮೂಲಸೌಲಭ್ಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳಬೇಕು ಎಂದು ನಳಿನ್ ಆಗ್ರಹಿಸಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.