ಸಿಸಿಬಿ ಪೊಲೀಸರಿಂದ ಕಾರು ಮಾರಾಟ: ನಗರದಲ್ಲಿ ಸಿಐಡಿ ತನಿಖೆ ಆರಂಭ, 4 ಪೊಲೀಸರ ಹೆಸರು ಉಲ್ಲೇಖ
Team Udayavani, Feb 27, 2021, 11:29 AM IST
ಮಂಗಳೂರು: ಪ್ರಕರಣವೊಂದರ ಆರೋಪಿಗಳಿಗೆ ಸೇರಿದ ಕಾರನ್ನು ಸಿಸಿಬಿ ಪೊಲೀಸರು (ನಗರ ಅಪರಾಧ ಪತ್ತೆದಳ) ಮಾರಾಟ ಮಾಡಿದ್ದಾರೆನ್ನಲಾದ ಪ್ರಕರಣದ ತನಿಖೆಗಾಗಿ ಸಿಐಡಿ ತಂಡ ಮಂಗಳೂರಿಗೆ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.
ಸಿಐಡಿ ಎಸ್‌ಪಿ ರೋಹಿಣಿ ಕಟ್ಟೋಚ್ ಅವರ ನೇತೃತ್ವದ ತಂಡ ತನಿಖೆ ಆರಂಭಿಸಿದ್ದು, ಸಿಐಡಿ ಡಿಜಿಗೆ ವರದಿ ಸಲ್ಲಿಸಲಿದೆ. ಅನಂತರ ಅದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸಲ್ಲಿಕೆಯಾಗಲಿದೆ.
ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪೊಲೀಸ್ ಅಧಿಕಾರಿ ಹಾಗೂ ಸಿಬಂದಿಗೆ ಈಗಾಗಲೆ ನೋಟಿಸ್ ನೀಡಲಾಗಿದೆ. ಪ್ರಾಥಮಿಕ ಹಂತದ ತನಿಖೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಗಾಂವ್ಕರ್ ಅವರು ನಡೆಸಿದ್ದು, ಅದರ ವರದಿಯಲ್ಲಿ ಕಮಿಷನರ್‌ಗೆ ಸಲ್ಲಿಸಿದ್ದಾರೆ.
ನಾಲ್ವರ ಹೆಸರು ಉಲ್ಲೇಖ
ಪ್ರಾಥಮಿಕ ತನಿಖೆಯಲ್ಲಿ ಅಪರಾಧ ಪತ್ತೆದಳ ಹಿಂದಿನ ಎಸ್‌ಐ ಕಬ್ಬಳ್‌ರಾಜ್, ಸಿಸಿಬಿಯ ಆಶಿತ್, ರಾಜ ಹಾಗೂ ನಾರ್ಕೊಟಿಕ್ ಆ್ಯಂಡ್ ಎಕನಾಮಿಕ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಮಕೃಷ್ಣ ಅವರ ಹೆಸರು ಹಾಗೂ ಬ್ರೋಕರ್ ದಿವ್ಯದರ್ಶನ್ ಹೆಸರನ್ನು ಉಲ್ಲೇಖ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹಣ ದ್ವಿಗುಣಗೊಳಿಸಿ ವ್ಯವಹಾರ ನಡೆಸುತ್ತಿದ್ದ ಎಲಿಯಾ ಸಂಸ್ಥೆ ನಡೆಸಿದ ವಂಚನೆ ಪ್ರಕರಣವನ್ನು ಕೂಡ ಸಿಐಡಿಗೆ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.