2 ವರ್ಷದಲ್ಲಿ 4.95 ಕೋ. ರೂ. ಮೌಲ್ಯದ ಸೊತ್ತು ಕಳವು; 3.72 ಕೋ. ರೂ. ಮೊತ್ತದ ಸೊತ್ತು ಜಪ್ತಿ

ಜಪ್ತಿ ಮಾಡಿದ ಸೊತ್ತು ವಾರಸುದಾರರಿಗೆ ಹಸ್ತಾಂತರ

Team Udayavani, Apr 27, 2019, 10:51 AM IST

sandeep-patil

ಸಾಂದರ್ಭಿಕ ಚಿತ್ರ

ಮಂಗಳೂರು: ಇಲ್ಲಿನ ಕಮಿಷನರೆಟ್‌ ವ್ಯಾಪ್ತಿಯಲ್ಲಿ 2018 ಮತ್ತು 2019ರಲ್ಲಿ ವಿವಿಧ ಕಳವು ಪ್ರಕರಣಗಳಲ್ಲಿ ಒಟ್ಟು 4,95,00,000 ರೂ. ಮೌಲ್ಯದ ಸೊತ್ತುಗಳು ಕಳವಾಗಿದ್ದು, ಈ ಪೈಕಿ 3,72,00,000 ರೂ. ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದರು.

ಪೊಲೀಸರು ಜಪ್ತಿ ಮಾಡಿದ ಸೊತ್ತುಗಳನ್ನು ವಾರಸುದಾರರಿಗೆ ಮರಳಿಸುವ ಕವಾಯತು ಶುಕ್ರವಾರ ನಗರದ ನೆಹರೂ ಮೈದಾನಿನಲ್ಲಿ ಜರಗಿದ್ದು, ಸೊತ್ತುಗಳನ್ನು ಕಮಿಷನರ್‌ ವಾರಸುದಾರರಿಗೆ ಹಸ್ತಾಂತರಿಸಿದರು.
2018ನೇ ಸಾಲಿನಲ್ಲಿ ಒಟ್ಟು 4,30,00,000 ರೂ. ಮೌಲ್ಯದ ಸೊತ್ತು ಕಳವಾಗಿದ್ದು ಈ ಪೈಕಿ 3,40,00,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ. 2019ನೇ ಸಾಲಿನಲ್ಲಿ ಒಟ್ಟು 65,00,000 ರೂ. ಮೌಲ್ಯದ ಸೊತ್ತುಗಳು ಕಳವಾಗಿದ್ದು, ಈ ಪೈಕಿ 32,00,000 ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ ಎಂದು ಕಮಿಷನರ್‌ ವಿವರಿಸಿದರು. ಪ್ರಕರಣಗಳ ತನಿಖೆ ನಡೆಸಿ, ಅವುಗಳನ್ನು ಭೇಧಿಸುವಲ್ಲಿ ಯಶಸ್ವಿಯಾದ ಎಲ್ಲ ಪೊಲೀಸ್‌ ಅಧಿಕಾರಿ ಮತ್ತು ಸಿಬಂದಿಯನ್ನು ಅವರು ಅಭಿನಂದಿಸಿದರು.

ಮಂಗಳೂರು ಕೇಂದ್ರ ಉಪ ವಿಭಾಗ ವ್ಯಾಪ್ತಿಯಲ್ಲಿ 39,17,900 ರೂ., ಮಂಗಳೂರು ದಕ್ಷಿಣ ಉಪ ವಿಭಾಗ ವ್ಯಾಪ್ತಿಯಲ್ಲಿ 36,60,410 ರೂ. ಹಾಗೂ ಮಂಗಳೂರು ಉತ್ತರ ಉಪ  ವಿಭಾಗ ವ್ಯಾಪ್ತಿಯಲ್ಲಿ 24,77,180 ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ  ನಗದು, ಚಿನ್ನಾಭರಣ, ವಿವಿಧ ಬೈಕ್‌ಗಳು ಮತ್ತು ಸ್ಕೂಟರ್‌ಗಳು, ಮೊಬೈಲ್‌ ಫೋನ್‌ ಸೆಟ್‌ಗಳು, ಕೆ ಮರಾ ಸೇರಿವೆ. ಈ ಯಶಸ್ಸಿನಲ್ಲಿ ಜಿಲ್ಲೆಯಲ್ಲಿ  ಸೇವೆ ಸಲ್ಲಿಸಿ ಕೆಲವು ಸಮಯ ಹಿಂದೆ ವರ್ಗಾವಣೆಯಾದ ಅಧಿಕಾರಿಗಳ, ಸಿಬಂದಿ ಕೊಡುಗೆ ಇದೆ ಎಂದರು.

ಕಳವು ಸಹಿತ ಯಾವುದೇ ಪ್ರಕರಣ ನಡೆದ ಬಳಿಕ ತನಿಖೆ ಮಾಡಿ ಪ್ರಕರಣ ಭೇದಿಸಿದ ಬಳಿಕ ವಶಪಡಿಸಿಕೊಂಡ ಸೊತ್ತುಗಳನ್ನು ಕೋರ್ಟ್‌ ಆದೇಶ ಪಡೆದು ವಾರಸುದಾರರಿಗೆ ಮರಳಿಸಬೇಕಾಗಿದ್ದು, ಈ ಕೆಲಸವನ್ನು ಇಲಾಖೆ ಮಾಡುತ್ತಿದೆ. ಈ ಮೂಲಕ ರಾಜ್ಯ ಪೊಲೀಸರು ಇಲಾಖೆಯಲ್ಲಿ ಪಾರದರ್ಶಕತೆಗೆ ಒತ್ತು ನೀಡಿ ಕೆಲಸ ಮಾಡುತ್ತಿದ್ದಾರೆ. ಇದು ಇಲಾಖೆ ಬಗ್ಗೆ ಜನರಲ್ಲಿರುವ ವಿಶ್ವಾಸವನ್ನು ಇಮ್ಮಡಿಗೊಳಿಸುವ ಕಾರ್ಯಕ್ರಮವಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಡಿಜಿಟಲ್‌ ತಂತ್ರಜ್ಞಾನದ ಬಳಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಜನರು ಯಾವುದೇ ದೂರು, ಸಲಹೆಗಳಿದ್ದಲ್ಲಿ ಫೇಸುºಕ್‌, ವಾಟ್ಸಪ್‌, ಟ್ವಿಟರ್‌ ಮೂಲಕ ನೀಡಿದರೆ ಹೆಚ್ಚು ಅನುಕೂಲ. ಪೊಲೀಸ್‌ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯನ್ನಾಗಿ ಮಾಡುವಲ್ಲಿ ಇಲಾಖೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿ¤ದೆ. ಈ ದಿಸೆಯಲ್ಲಿ ಸಿಟಿ ಪೊಲೀಸ್‌ ಟ್ವಿಟರ್‌ ಖಾತೆಯನ್ನು ತೆರೆದಿದ್ದು, ಜನರು ಅದನ್ನು ಬಳಕೆ ಮಾಡುತ್ತಿದ್ದಾರೆ ಎಂದರು.

ಡ್ರಗ್ಸ್‌ ಮೂಲ ಶೋಧ
ಯುವಜನರು ಡ್ರಗ್ಸ್‌, ಗಾಂಜಾ, ಎಂಡಿಎಂ, ಸಿಂಥೆಟಿಕ್‌ ಮತ್ತಿತರ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದು, ಈ ಬಗ್ಗೆ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ನಿರಂತರ ಕಾರ್ಯಾಚರಣೆ ನಡೆಸಿ ಡ್ರಗ್ಸ್‌ ಸಾಗಾಟದ ಮೂಲವನ್ನು ಪತ್ತೆ ಹಚ್ಚಿ ಸಂಪೂರ್ಣ ಮಟ್ಟ ಹಾಕಲು ಪ್ರಯತ್ನಿಸಲಾಗುವುದು ಎಂದು ವಿವರಿಸಿದರು.

ಶ್ರೀಲಂಕಾ ಬಾಂಬ್‌ ಸ್ಫೋಟ ಘಟನೆ
ಶ್ರೀಲಂಕಾ ಬಾಂಬ್‌ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ನಗರದಲ್ಲಿ ವಿಶೇಷ ನಿಗಾ ಇರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಲಾಡ್ಜ್ , ಹೊಟೇಲ್‌ ತಪಾಸಣೆ, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ವಿಶೇಷ ತಪಾಸಣೆ ಕೈಗೊಳ್ಳಲಾಗಿದೆ. ದಿನದ 24 ಗಂಟೆಯೂ ಪೊಲೀಸ್‌ ಬೀಟ್‌ ನಡೆಸಲಾಗುತ್ತಿದ್ದು, ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೆ ಒಳ ಪಡಿಸಲಾಗುತ್ತಿದೆ ಎಂದರು.
ಡಿಸಿಪಿ ಹನುಮಂತರಾಯ ಸ್ವಾಗತಿಸಿದರು.  ಡಿಸಿಪಿ ಲಕ್ಷ್ಮೀಗಣೇಶ್‌ ವಂದಿಸಿದರು. ಎಎಸ್‌ಐ ಹರಿಶ್ಚಂದ್ರ ಬೈಕಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.