ಮೆರವಣಿಗೆ, ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ
Team Udayavani, Nov 21, 2018, 12:21 PM IST
ಮಹಾನಗರ: ಈದ್ ಮಿಲಾದ್ ಆಚರಣೆ ಅಂಗವಾಗಿ ಮುಸ್ಲಿಮರು ಮಂಗಳವಾರ ಮಸೀದಿ ಮತ್ತು ದರ್ಗಾಗಳಲ್ಲಿ ಹಾಗೂ ಈದ್ಗಾ ಪ್ರಾರ್ಥನಾ ಮಂದಿರಗಳಲ್ಲಿ ವಿಶೇಷ ಪ್ರಾರ್ಥನೆ, ಸಾರ್ವಜನಿಕ ರಸ್ತೆಗಳಲ್ಲಿ ಮೆರವಣಿಗೆ, ಬೈಕ್ ರ್ಯಾಲಿಗಳನ್ನು ನಡೆಸಿದರು.
ಇದೇ ವೇಳೆ ಮುಸ್ಲಿಂ ಮಕ್ಕಳಿಗಾಗಿ ಪ್ರವಾದಿ ಮಹಮದ್ ಅವರ ಜೀವನದ ಕುರಿತಂತೆ ಭಾಷಣ, ಹಾಡು ಮತ್ತಿತರ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಸಿಹಿ ತಿಂಡಿ, ಪಾನೀಯಗಳನ್ನು ಹಾಗೂ ಇತರ ತಿನಸುಗಳನ್ನು ನೀಡಲಾಯಿತು. ನಗರದ ಬಂದರ್‌ನ ಕೇಂದ್ರ ಜುಮಾ ಮಸೀದಿಯಲ್ಲಿ ಮತ್ತು ಬಾವುಟಗುಡ್ಡೆಯ ಈದ್ಗಾ ಪ್ರಾರ್ಥನಾ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಇದೇ ವೇಳೆ ಕೇಂದ್ರ ಜುಮಾ ಮಸೀದಿಯಿಂದ ಬಾವುಟಗುಡ್ಡೆ ತನಕ ಮಿಲಾದ್ ಮೆರವಣಿಗೆ ನಡೆದಿದ್ದು, ನೂರಾರು ಮಂದಿ ಮುಸ್ಲಿಮರು ಭಾಗವಹಿಸಿದ್ದರು. ದಫ್ ಕಾರ್ಯಕ್ರಮ ಆಕರ್ಷಣೆಯಾಗಿತ್ತು. ಮೆರವಣಿಗೆಯಲ್ಲಿ ಪ್ರವಾದಿ ಮಹಮದ್ ಅವರ ಗುಣಗಾನ ಮಾಡಿ ಘೋಷಣೆ ಕೂಗಿದರು.
ಸಿಹಿ ತಿಂಡಿ, ಪಾನೀಯ ವಿತರಣೆ
ಬೆಳಗ್ಗೆ ಬಂದರು ಪ್ರದೇಶದಲ್ಲಿ ಮಿಲಾದ್ ಮೆರವಣಿಗೆ ಜರಗಿತು. ಈ ಸಂದರ್ಭ ಗೂಡ್ಸ್ ಶೆಡ್‌ನ ನಿರೇಶ್ವಾಲ್ಯದಲ್ಲಿ ಸ್ಥಳೀಯ ನಿತ್ಯಾನಂದ ಆಶ್ರಮ, ಯುವ ಶಕ್ತಿ ಫ್ರೆಂಡ್ಸ್ ಮತ್ತು ತುಳುನಾಡ ಸಂಜೀವಿನಿ ಸಂಘಟನೆಗಳ ಕಾರ್ಯಕರ್ತರು ಮುಸ್ಲಿ ಮರಿಗೆ ಸಿಹಿ ತಿಂಡಿ ಮತ್ತು ತಂಪು ಪಾನೀಯ ವಿತರಿಸಿ ಸೌಹಾರ್ದ ಮೆರೆದರು.
ಸಾಮರಸ್ಯದ ಸಂಕೇತ
ತುಳುನಾಡ ಸಂಜೀವಿನಿಯ ಸ್ಥಾಪಕಾಧ್ಯಕ್ಷ ಮಹೇಂದ್ರ ಕಾಶಿ ಮಾತನಾಡಿ, ಹೊರ ನಾಡಿನಲ್ಲಿ ಮಂಗಳೂರು ಸದಾ ಕೋಮು ಸಂಘರ್ಷ ನಡೆಯುವ ಪ್ರದೇಶ ಎಂಬ ಭಾವನೆ ಇದೆ. ಆದರೆ ಇಲ್ಲಿ ನಾವೆಲ್ಲ ಸಹೋದರತೆಯಿಂದ, ಸಾಮರಸ್ಯದಿಂದ ಬಾಳುತ್ತಿದ್ದೇವೆ ಎನ್ನುವುದರ ಸಂಕೇತವಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ಎಲ್ಲ ಧರ್ಮದವರು ಸಾಮರಸ್ಯದಿಂದ ಬಾಳುವಂತಾಗಬೇಕು. ಪರಸ್ಪರ ಸೌಹಾರ್ದ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾದೆ ಎಂದು ನಿತ್ಯಾನಂದ ಆಶ್ರಮದ ಟ್ರಸ್ಟಿ ರೋಹಿತ್ ನುಡಿದರು. ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್ ಅವರು ಮೂರೂ ಸಂಘಟನೆಗಳ ಕಾರ್ಯಕ್ರಮಕೆಕ ಮೆಚ್ಚುಗೆ ವ್ಯಕ್ತ ಪಡಿಸಿ ಸೌಹಾರ್ದದ ವಾತಾವರಣಕ್ಕೆ ಇದು ಪೂರಕ ಎಂದರು.
ನಿತ್ಯಾನಂದ ಆಶ್ರಮದ ಸದಸ್ಯ ಸದಾಶಿವ ಶೆಟ್ಟಿ , ಬಿಜೆಪಿ ಪೋರ್ಟ್ ವಾರ್ಡ್ ಅಧ್ಯಕ್ಷ ಯೋಗೀಶ್, ತುಳುನಾಡ ಸಂಜೀವಿನಿಯ ಸ್ಥಾಪಕ ರಾಹುಲ್, ದೇವಿ ಪ್ರಸಾದ್, ಯುವಶಕ್ತಿ ಫ್ರೆಂಡ್ಸ್ ಅಧ್ಯಕ್ಷ ದೀಪಕ್ ಶೆಟ್ಟಿ, ವಿಕಾಸ್, ಯತೀಶ್ ಮೊದಲಾದವರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.