ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿ: ಎಲ್ಲ ಠಾಣೆಗಳಲ್ಲಿಯೂ ಯುವ ಸಮಿತಿ ಅಸ್ತಿತ್ವಕ್ಕೆ 

ಪೊಲೀಸರೊಂದಿಗೆ ಕೈಜೋಡಿಸಲು 600 ಮಂದಿ ಸಿದ್ಧ

Team Udayavani, Jun 26, 2022, 4:38 PM IST

16

ಮಹಾನಗರ: ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು, ಕಾನೂನು ಸುವ್ಯವಸ್ಥೆ ಕಾಪಾಡಲು ಪೂರಕವಾಗಿ ಪೊಲೀಸರೊಂದಿಗೆ ಕೈಜೋಡಿಸಲು ಸ್ಥಳೀಯ ಕ್ರಿಯಾಶೀಲ ಯುವಕ – ಯುವತಿಯರನ್ನೊಳಗೊಂಡ ಯುವ ಸಮಿತಿ (ಯೂತ್‌ ಕಮಿಟಿ) ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯ ಎಲ್ಲ ಪೊಲೀಸ್‌ ಠಾಣಾ ಮಟ್ಟದಲ್ಲಿಯೂ ಅಸ್ತಿತ್ವಕ್ಕೆ ಬಂದಿದೆ.

ಪ್ರತಿಯೊಂದು ಸಮಿತಿ ತಲಾ ಸುಮಾರು 30- 50 ಮಂದಿಯನ್ನು ಒಳಗೊಂಡಿದೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ 15 ಪೊಲೀಸ್‌ ಠಾಣೆಗಳಿದ್ದು ಸರಾಸರಿ 40 ಸದಸ್ಯರಂತೆ ಒಟ್ಟು ಸುಮಾರು 600 ಮಂದಿ ಸದಸ್ಯರು ಯುವ ಸಮಿತಿಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಈ ಸದಸ್ಯರೊಂದಿಗೆ ಈಗಾಗಲೇ ಪೊಲೀಸರು ಸಂವಹನ ಸಾಧಿಸಿದ್ದಾರೆ.

ಉತ್ತಮ ಹಿನ್ನೆಲೆಯವರಿಗೆ ಆದ್ಯತೆ ಸಾಮಾಜಿಕವಾಗಿ, ಸೇವಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಯುವ ಸಮಿತಿಯಲ್ಲಿ ಆದ್ಯತೆ ನೀಡಲಾಗಿದೆ. ಕ್ರಿಮಿನಲ್‌ ಹಿನ್ನೆಲೆಯುಳ್ಳವರನ್ನು ಸಮಿತಿಯಿಂದ ಸಾಧ್ಯವಾದಷ್ಟು ದೂರ ಇಡಲಾಗಿದೆ. ಯಾವುದೇ ಧರ್ಮ, ಪಕ್ಷ ಅಥವಾ ಇತರ ಯಾವುದೇ ವರ್ಗ ಭೇದ ಮಾಡದೆ ಸಮಿತಿಯನ್ನು ರಚಿಸಲಾಗಿದ್ದು, ಒಂದು ಸಮಿತಿಯಲ್ಲಿ ಸರಾಸರಿ 4ರಿಂದ 5 ಮಂದಿ ಮಹಿಳೆಯರೂ ಇದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಯುವ ಸಮಿತಿಯ ಸದಸ್ಯರೊಂದಿಗೆ ಸ್ಥಳೀಯ ಪೊಲೀಸರು ತಿಂಗಳಿಗೆ ಕನಿಷ್ಠ 2 ಬಾರಿ ಸಂಪರ್ಕ ಸಾಧಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಅಗತ್ಯ ಸಂದರ್ಭದಲ್ಲಿ ಈ ಸಮಿತಿಯ ಸದಸ್ಯರೊಂದಿಗೆ ಸಂಪರ್ಕ-ಸಂವಹನ ನಡೆಸಬಹುದಾಗಿದೆ.

ಭೌತಿಕವಾಗಿ ಯುವ ಸಮಿತಿಯ ಸದಸ್ಯರು ಒಂದೆಡೆ ಸೇರುವುದಿಲ್ಲ. ಆದರೆ ಆ ಸಮಿತಿಯ ಸದಸ್ಯರು ನೇರವಾಗಿ ಪೊಲೀಸರೊಂದಿಗೆ ಸಂಪರ್ಕ ಹೊಂದಿರುತ್ತಾರೆ.

ಸಮಿತಿ ಸದಸ್ಯರಿಗೆ ಬದ್ಧತೆ

ಕೆಲವು ಮಂದಿ ಯುವಕ-ಯುವತಿ ತಾವಾಗಿಯೇ ಒಲವು ವ್ಯಕ್ತಪಡಿಸಿ ಸಮಿತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಕೆಲವು ಮಂದಿ ಪೊಲೀಸರ ಸಲಹೆ ಮೇರೆಗೆ ಸಮಿತಿಯ ಸದಸ್ಯತ್ವ ಪಡೆದಿದ್ದಾರೆ. ಇದು ಖಾಯಂ ಸದಸ್ಯತನವಾಗಿರುವುದಿಲ್ಲ. ಗುರುತಿನ ಕಾರ್ಡ್‌ ಕೂಡ ನೀಡುವುದಿಲ್ಲ. ಸ್ಥಳೀಯವಾದ ಸಂವಹನಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಆದರೆ ಸಮಿತಿ ಸದಸ್ಯರಿಗೆ ಹೆಚ್ಚಿನ ಬದ್ಧತೆ ಇರುತ್ತದೆ. ಉತ್ತಮ ಸಮಾಜಕ್ಕಾಗಿ ಅವರು ಕೊಡುಗೆ ನೀಡಿದಂತಾಗುತ್ತದೆ ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು.

ಉತ್ತಮ ಸಂವಹನಕ್ಕೆ ಸಹಕಾರಿ:  ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯವರ ಸೂಚನೆಯಂತೆ ಎಲ್ಲ ಪೊಲೀಸ್‌ ಠಾಣಾ ಮಟ್ಟದಲ್ಲಿಯೂ ಯುವ ಸಮಿತಿಗಳನ್ನು ರಚಿಸಲಾಗಿದೆ. ಅಪರಾಧ ಹಿನ್ನೆಲೆಯುಳ್ಳವರಿಗೆ ಅವಕಾಶ ನೀಡದಂತೆ ಸೂಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರೊಂದಿಗೆ ಈ ಸಮಿತಿಯ ಸದಸ್ಯರು ಪರೋಕ್ಷವಾಗಿ ಕೈಜೋಡಿಸಲಿದ್ದಾರೆ. ಸಮಾಜದೊಂದಿಗಿನ ಉತ್ತಮ ಸಂವಹನ-ಸಮನ್ವಯಕ್ಕೆ ಇದು ನೆರವಾಗಲಿದೆ. –ಹರಿರಾಂ ಶಂಕರ್‌, ಡಿಸಿಪಿ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗ, ಮಂಗಳೂರು ಪೊಲೀಸ್‌

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.