ಮಂಗಳೂರು ಸ್ಮಾರ್ಟ್‌ಸಿಟಿ; ವೆನ್ಲಾಕ್, ಲೇಡಿಗೋಶನ್ ಅಭಿವೃದ್ಧಿಗೆ ಚಾಲನೆ
Team Udayavani, Jun 30, 2020, 8:14 AM IST
ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯ ಹೈ ರಿಸ್ಕ್ ಡೆಲಿವರಿ ವಾರ್ಡ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಮಂಗಳೂರು: ಮಂಗಳೂರು ಸ್ಮಾರ್ಟ್‌ಸಿಟಿ ಅನುದಾನದಲ್ಲಿ ಜಿಲ್ಲಾ ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಂಕುಸ್ಥಾಪನೆ ನೆರವೇರಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾರಂಭ ನಡೆಯಿತು. ಸಚಿವರು ಮಾತನಾಡಿ, ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಗಳು ಮಹತ್ವದ ಸೇವೆ ನೀಡುತ್ತಿವೆ. ಜನ ಸಾಮಾನ್ಯರ ಆಶಾಕಿರಣವಾಗಿರುವ ಈ ಆಸ್ಪತ್ರೆಗಳ ಅಭಿವೃದ್ಧಿಯು ಸಾರ್ವಜನಿಕರಿಗೆ ಸರಕಾರವು ನೀಡುತ್ತಿರುವ ದೊಡ್ಡ ಕೊಡುಗೆಯಾಗಿದೆ ಎಂದರು.
ಸ್ಮಾರ್ಟ್‌ಸಿಟಿ ಮೂಲಕ ಮಂಗಳೂರು ನಗರದಲ್ಲಿ ಸುಮಾರು ಒಂದು ಸಾವಿರ ಕೋಟಿ ರೂ.ಗಳಿಗೂ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸ್ಮಾರ್ಟ್‌ಸಿಟಿಯಿಂದ ವೆನ್ಲಾಕ್ ಮತ್ತು ಲೇಡಿಗೋಶನ್ ಆಸ್ಪತ್ರೆಯ ಅಭಿವೃದ್ಧಿಗೆ ಸುಮಾರು 50 ಕೋ.ರೂ.ಗಳಿಗೂ ಅಧಿಕ ವೆಚ್ಚ ಮಾಡಲಾಗುತ್ತಿದ್ದು ಈ ಆಸ್ಪತ್ರೆಗಳು ಹಲವು ವರ್ಷಗಳಿಂದ ಎದುರಿಸುತ್ತಿದ್ದ ಮೂಲಸೌಕರ್ಯಗಳ ಸಮಸ್ಯೆ ನಿವಾರಣೆಗೆ ಒತ್ತು ನೀಡಲಾಗುವುದು ಎಂದರು. ಸಂಸದ ನಳಿನ್ ಕುಮಾರ್ ಕಟೀಲು, ಮೇಯರ್ ದಿವಾಕರ್, ಉಪಮೇಯರ್ ವೇದಾವತಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ ಉಪಸ್ಥಿತರಿದ್ದರು.
ವೆನ್ಲಾಕ್‌ಗೆ ವೆಂಟಿಲೇಟರ್‌ಗಳ ಕೊಡುಗೆ
ಮಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗಳ ಕೊರತೆ ಇದ್ದು, ಜಿಲ್ಲೆಯ ವಿವಿಧ ಉದ್ಯಮಗಳು ನೀಡಿರುವ ವೆಂಟಿಲೇಟರ್‌ಗಳ ಹಸ್ತಾಂತರ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಎಂಆರ್‌ಪಿಎಲ್ ವತಿಯಿಂದ 5, ಎಂಸಿಎಫ್, ಎನ್‌ಎಂಪಿಟಿ ಹಾಗೂ ಕುದುರೆಮುಖ ಅದಿರು ಸಂಸ್ಥೆ ವತಿಯಿಂದ 2 ವೆಂಟಿಲೇಟರ್‌ಗಳನ್ನು ಸಂಸ್ಥೆಯ ಪ್ರತಿನಿಧಿಗಳು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಸ್ತಾಂತರಿಸಿದರು.
ಸಂಸದ ನಳಿನ್ ಕುಮಾರ್ ಮಾತನಾಡಿ, ವೆನ್ಲಾಕ್‌ಗೆ 60 ವೆಂಟಿಲೇಟರ್‌ಗಳ ಅಗತ್ಯವಿದೆ. ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಇದಕ್ಕಾಗಿ 1 ಕೋಟಿ ರೂ. ನೀಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಶಾಸಕರ ನಿಧಿಯಿಂದ 2 ವೆಂಟಿಲೇಟರ್ ಹಾಗೂ ಮಂಗಳೂರು ದಕ್ಷಿಣ ಮತ್ತು ಉತ್ತರ ಶಾಸಕರು ತಮ್ಮ ಅನುದಾನದಿಂದ ತಲಾ 2 ವೆಂಟಿಲೇಟರ್‌ಗಳನ್ನು ನೀಡುವುದಾಗಿ ತಿಳಿಸಿದ್ದಾರೆ. ಇದರಿಂದ ಒಟ್ಟಾರೆ 30 ವೆಂಟಿಲೇಟರ್‌ಗಳು ವೆನ್ಲಾಕ್‌ಗೆ ದೊರಕಿದಂತಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.