ಮಂಗಳೂರು : ತಡರಾತ್ರಿ ಭೀಕರ ಅಪಘಾತಕ್ಕೆ ಯುವಕ ಬಲಿ, ಮೂವರಿಗೆ ಗಾಯ
Team Udayavani, Jun 27, 2018, 11:08 AM IST
ಮಂಗಳೂರು: ನಗರದ ಹೊರವಲಯದ ಅಡ್ಯಾರ್ ಕಣ್ಣೂರು ಮಸೀದಿಯ ಬಳಿ ಬುಧವಾರ ನಸುಕಿನ 1 ಗಂಟೆಯ ವೇಳೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿ, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಿಂತಿದ್ದ ಕಾರಿಗೆ ಹಿಂಬದಿಯಿಂದ ಶರವೇಗದಲ್ಲಿ ಬಂದ ಕಾರು ಢಿಕ್ಕಿಯಾದ ಪರಿಣಾಮ ಅವಘಡ ಸಂಭವಿಸಿದೆ. ಅಪಘಾತದಲ್ಲಿ 2 ಕಾರು, ರಿಕ್ಷಾ ಮತ್ತು ಸ್ಕೂಟರ್ ಜಖಂಗೊಂಡಿವೆ.
ಮೃತ ಯುವಕ ಅಡ್ಯಾರ್‌ನ ಫಾರೂಕ್ (25) ಎಂದು ತಿಳಿದು ಬಂದಿದ್ದು, ಸ್ಕೂಟರ್ ನಿಲ್ಲಿಸಿ ಮಳೆ ಬರುತ್ತಿದ್ದ ಕಾರಣ ಕಾರಿನೊಳಗೆ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ಹಿಂಬದಿಯಿಂದ ಇನ್ನೊಂದು ಕಾರು ಗುದ್ದಿದೆ ಪರಿಣಾಮವಾಗಿ ಫಾರೂಕ್ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಹನೀಫ್,ಜುನೈದ್ ಮತ್ತು ಸಫìರಾಜ್ ಗಾಯಗೊಂಡಿದ್ದಾರೆ.
ಸಂಚಾರಿ ವಿಭಾಗದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ: ನರಿಂಗಾನ ಕಂಬಳ್ಳೋತ್ಸವದಲ್ಲಿ ಸಿಎಂ
ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್ ಸಿಂಗ್
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ: ನರಿಂಗಾನ ಕಂಬಳ್ಳೋತ್ಸವದಲ್ಲಿ ಸಿಎಂ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ
ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್ ಸಿಂಗ್
Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.