Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

ಪಂಪ್‌ವೆಲ್‌ ಸರ್ವಿಸ್‌ ರಸ್ತೆ ಅವ್ಯವಸ್ಥೆ

Team Udayavani, Oct 17, 2024, 2:50 PM IST

7

ಮಹಾನಗರ: ಮಂಗಳೂರು ನಗರ ಸಂಪರ್ಕಿಸುವ ಪಂಪ್‌ವೆಲ್‌ ಸರ್ವಿಸ್‌ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನ ಸವಾರರು ಪರ ದಾಡುವಂತಾಗಿದೆ. ಎಕ್ಕೂರು ಭಾಗದಿಂದ ಆಗಮಿಸುವ ವೇಳೆ ಹೆದ್ದಾರಿಯ ಫ್ಲೈ ಓವರ್‌ನ ಆರಂಭಿಕ ಪ್ರದೇಶದಿಂದ ಪಂಪ್‌ವೆಲ್‌ ಜಂಕ್ಷನ್‌ ತನಕ ಎರಡು ಭಾಗಗಳಲ್ಲಿನ ಸರ್ವಿಸ್‌ ರಸ್ತೆ ಹದಗೆಟ್ಟಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ಅವ್ಯವಸ್ಥೆಯಿಂದ ಸವಾರರು ನಿತ್ಯ ಸಂಕಟ ಅನುಭವಿಸುತ್ತಿದ್ದಾರೆ. ಅಲ್ಲಲ್ಲಿ ಇರುವ ಹೊಂಡಗುಂಡಿಗಳು ಸುಗಮ ಸಂಚಾರಕ್ಕೆ ಬ್ರೇಕ್‌ ಹಾಕುತ್ತಿವೆ. ಹೊಂಡಗುಂಡಿಗಳನ್ನು ತಪ್ಪಿಸಿಕೊಂಡು ಸಂಚರಿಸುವುದೇ ಸಾಹಸ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಇರುವ ಸರ್ವಿಸ್‌ ರಸ್ತೆ ಇದೀಗ ಅಪಾಯಕಾರಿಯಾಗಿ ಪರಿಣಮಿಸಿದೆ.

ನಿತ್ಯ ಟ್ರಾಫಿಕ್‌ ಜಾಮ್‌ ಬಿಸಿ
ಕೇರಳ, ತಲಪಾಡಿ, ಉಳ್ಳಾಲ, ಮುಡಿಪು ಇತ್ಯಾದಿ ಭಾಗಗಳಿಂದ ಮಂಗಳೂರು ನಗರಕ್ಕೆ ಆಗಮಿಸುವ ವಾಹನಗಳು ಪಂಪ್‌ವೆಲ್‌ ಸರ್ವಿಸ್‌ ರಸ್ತೆಯನ್ನು ಅವಲಂಬಿಸಿವೆ. ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳು ಈ ರಸ್ತೆಯಲ್ಲಿ ಓಡಾಡುವ ಕಾರಣದಿಂದಾಗಿ ನಿತ್ಯ ಟ್ರಾಫಿಕ್‌ ಬಿಸಿ ಸವಾರರಿಗೆ ತಪ್ಪಿದ್ದಲ್ಲ. ಬೆಳಗ್ಗಿನ ಸಮಯದಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವ ದೃಶ್ಯ ಸಾಮಾನ್ಯವಾಗಿದೆ. ದ್ವಿಚಕ್ರ ಹಾಗೂ ಇತರ ವಾಹನ ಸವಾರರು ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಡುವುದು ನಿತ್ಯ ಕಂಡುಬರುತ್ತಿದೆ. ಈ ಹಿಂದೆ ಕೆಲವು ಆ್ಯಂಬುಲೆನ್ಸ್‌ಗಳು ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಮಳೆಗಾಲದಲ್ಲಿ ಸಂಚಾರ ದುಸ್ಥರ!
ಬಹುತೇಕ ಮಳೆಗಾಲದಲ್ಲಿ ರಸ್ತೆಗಳ ನೈಜ ಬಣ್ಣ ಬಯಲಾಗುತ್ತದೆ. ಪಂಪ್‌ವೆಲ್‌ ಸರ್ವಿಸ್‌ ರಸ್ತೆಯಲ್ಲೂ ಪ್ರತೀ ವರ್ಷ ಹೊಂಡ ಗುಂಡಿಗಳ ದರ್ಶನವಾಗುತ್ತಿದ್ದು, ಶಾಶ್ವತ ಪರಿಹಾರ ಮರಿಚಿಕೆಯಾಗಿದೆ. ಕೆಲವೊಂದು ಭಾಗಗಳಲ್ಲಿ ತೇಪೆ ಕಾರ್ಯ ನಡೆಸಲಾಗಿದೆ. ಆದರೆ ಮಳೆಗೆ ಅವೆಲ್ಲವೂ ಮಾಯವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಾತ್ರಿ ಸಂಚಾರ ಅಪಾಯಕಾರಿ
ಪಂಪ್‌ವೆಲ್‌ ಸರ್ವಿಸ್‌ ರಸ್ತೆಯಲ್ಲಿ ಅಲ್ಲಲ್ಲಿ ನಿರ್ಮಾಣವಾಗಿರುವ ಹೊಂಡಗುಂಡಿಗಳಿಂದಾಗಿ ರಾತ್ರಿ ಸಂಚಾರ ಅಪಾಯಕಾರಿ. ಹೊಂಡ ಗುಂಡಿಗಳು ಗೋಚರಕ್ಕೆ ಬರದೆ ಸವಾರರಿಗೆ ಸಮಸ್ಯೆಯಾಗುತ್ತಿದೆ. ಈ ರಸ್ತೆಯಲ್ಲಿರುವ ಅಂಡರ್‌ಪಾಸ್‌ನ ಎರಡೂ ಬದಿಗಳಲ್ಲೂ ಹೊಂಡಗುಂಡಿಗಳು ನಿರ್ಮಾಣವಾಗಿವೆ. ಅಂಡರ್‌ ಪಾಸ್‌ನಿಂದ ಬರುವ ವಾಹನಗಳು ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ. ಏಕಾಏಕಿ ವಾಹನಗಳು ಮುನ್ನುಗ್ಗುವುದು ಅಪಾಯಕಾರಿಯಾಗಿದೆ.

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.