Mangaluru: ಕಾಂಕ್ರೀಟ್ ರಸ್ತೆ ನಿರ್ಮಿಸಿದರೂ ಫುಟ್‌ಪಾತ್ ಇಲ್ಲ
ಮಣ್ಣಗುಡ್ಡೆ - ಉರ್ವ ಮಾರ್ಕೆಟ್ ರಸ್ತೆ: ಪಾದಚಾರಿಗಳಿಗೆ ಸಂಕಷ್ಟ
Team Udayavani, Dec 28, 2024, 4:08 PM IST
ಮಣ್ಣಗುಡ್ಡೆ: ಮಣ್ಣಗುಡ್ಡೆ ಗುರ್ಜಿ ಜಂಕ್ಷನ್‌ನಿಂದ ಉರ್ವ ಮಾರ್ಕೆಟ್ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ನಡೆಸಿ ಅಭಿವೃದ್ಧಿಯಾಗಿ ಹಲವು ವರ್ಷಗಳು ಕಳೆದರೂ ಇನ್ನೂ ಸುಸಜ್ಜಿತ ಫುಟ್‌ಪಾತ್ ಇಲ್ಲದೆ, ಪಾದಚಾರಿಗಳು ನಡೆದು ಕೊಂಡು ಹೋಗಲು ಸಮಸ್ಯೆ ಯಾಗುತ್ತಿದೆ.
ಈ ಹಿಂದೆ ಇದ್ದ ಡಾಮರು ರಸ್ತೆಯನ್ನು ದ್ವಿಪಥ ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಪಡಿಸಲಾಗಿದೆ. ಇದರಿಂದಾಗಿ ರಸ್ತೆಯಲ್ಲಿ ವಾಹನ ಸಂಚಾರ ಸುಗಮವಾಗಿದೆ. ಆದರೆ ರಸ್ತೆಯ ಬದಿಯಲ್ಲಿ ಸಾರ್ವಜನಿಕರು ಮಾತ್ರ ಆತಂಕದಿಂದಲೇ ನಡೆದು ಹೋಗಬೇಕಾದ ಪರಿಸ್ಥಿತಿಯಿದೆ.
ಕಾರು, ದ್ವಿಚಕ್ರ ವಾಹನಗಳು ಸೇರಿದಂತೆ ಟೆಂಪೋ ಲಾರಿ ಮೊದ ಲಾದ ಘನ ವಾಹನಗಳು, ಬಸ್ ಕೂಡ ಈ ರಸ್ತೆಯಲ್ಲಿ ಸಂಚರಿಸುತ್ತವೆ. ರಸ್ತೆ ಬದಿಯಲ್ಲಿ ಎಲ್ಲಾದರೂ ನಿಂತು ಮತ್ತೆ ಮುಂದಕ್ಕೆ ಹೋಗಬೇಕಾಗಿದೆ.
ರಸ್ತೆಗೆ ಹೊಂದಿಕೊಂಡಂತೆ ಶಾಲೆ, ಕಾಲೇಜು, ಪಾರ್ಕ್, ವಸತಿ ಸಮು ಚ್ಚಯಗಳು, ಅಂಗಡಿ- ಮಳಿಗೆಗಳು, ಕಲ್ಯಾಣ ಮಂಟಪಗಳು ಇವೆ. ಆದ್ದರಿಂದ ನಿತ್ಯ ಜನರ ಓಡಾಟವೂ ಹೆಚ್ಚಿರುತ್ತದೆ. ಇಂತಹ ರಸ್ತೆಯಲ್ಲಿ ಫುಟ್‌ಪಾತ್ ಇಲ್ಲದಿರುವುದು ಜನರ ಅಸಮಾಧಾನಕ್ಕೂ ಕಾರಣವಾಗಿದೆ.
ರಸ್ತೆ ಬದಿಯಲ್ಲೇ ಪಾರ್ಕಿಂಗ್
ಅಂಗಡಿ – ಮಳಿಗೆಗಳಿಗೆ ಭೇಟಿ ನೀಡುವ ಜನರು ತಮ್ಮ ದ್ವಿಚಕ್ರ ವಾಹನ – ಕಾರು, ಆಟೋ ಮೊದಲಾದವುಗಳನ್ನು ರಸ್ತೆ ಬದಿಯಲ್ಲೇ ನಿಲ್ಲಿಸುವುದು ಕಂಡು ಬರುತ್ತದೆ. ಕಲ್ಯಾಣ ಮಂಟಪ ಗಳಲ್ಲಿ ಕಾರ್ಯಕ್ರಮಗಳು ಇದ್ದಾಗ ವಾಹನಗಳು ರಸ್ತೆ ಬದಿಯಲ್ಲಿ ಸಾಲುಗಟ್ಟಿ ನಿಂತಿರುತ್ತವೆ.
ಇಂತಹ ಸಂದರ್ಭದಲ್ಲಿ ರಸ್ತೆಯಲ್ಲೇ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ. ಇದರಿಂದಾಗಿ ಅಪ ಘಾತಗಳು ಉಂಟಾಗುವ ಸಾಧ್ಯತೆ ಅಧಿಕ. ಈಗಾಗಲೇ ಸಾಕಷ್ಟು ಸಣ್ಣಪುಟ್ಟ ಅವಘಡಗಳು ಇಲ್ಲಿ ಸಂಭವಿಸಿದೆ ಎನ್ನುವುದು ಅಕ್ಕಪಕ್ಕದ ಅಂಗಡಿಗಳ ಮಾಲಕರ ಮಾತು.
ಚಪ್ಪಡಿ ಕಲ್ಲಿನ ಫುಟ್‌ಪಾತ್ ಆದರೂ ನಿರ್ಮಿಸಿ
ಮಣ್ಣಗುಡ್ಡೆಯ ಗಾಂಧಿ ಪಾರ್ಕ್ ಬಳಿ ರಸ್ತೆಯ ಒಂದು ಭಾಗದಲ್ಲಿ ಫುಟ್‌ಪಾತ್ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ಮಳೆ ನೀರು ಹರಿದು ಹೋಗುವ ಚರಂಡಿ ರಚಿಸಲಾಗಿದೆ. ಕನಿಷ್ಠ ಚಪ್ಪಡಿ ಕಲ್ಲುಗಳನ್ನು ಹಾಸಿ ಜನರಿಗೆ ನಡೆದುಕೊಂಡು ಹೋಗಲು ಅನುಕೂಲವಾಗುವಂತೆ ಮಾಡಿದರೆ ರಸ್ತೆಯಲ್ಲಿ ನಡೆಯುವುದು ತಪ್ಪುತ್ತದೆ ಎನ್ನುತ್ತಾರೆ ಸ್ಥಳೀಯರು. ಕೆಲವು ಕಡೆಗಳಲ್ಲಿ ರಸ್ತೆಯ ಅಂಚಿನಲ್ಲೇ ಮಳೆ ನೀರು ಹರಿಯುವ ಚರಂಡಿಯಿದ್ದು, ವಾಹನ ಸವಾರರು ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು ತುಸು ಎಚ್ಚರ ತಪ್ಪಿದರೂ ಅಪಾಯ ಖಚಿತ.
ಸಂಬಂಧಪಟ್ಟವರು ಇನ್ನಾದರೂ ಈ ಬಗ್ಗೆ ಗಮನ ಹರಿಸಿ ಫುಟ್‌ಪಾತ್ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಾರ್ವ ಜನಿಕರು, ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ. ರಸ್ತೆ ನಿರ್ಮಾಣ ಮಾಡುವಾಗಲೇ ಫುಟ್‌ಪಾತ್ ರಚನೆಯನ್ನೂ ಮಾಡಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ ಎನ್ನುವುದು ಪಾದಚಾರಿ ಗಳ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.