ಪಂಪ್ವೆಲ್ ಮೇಲ್ಸೇತುವೆಯಲ್ಲಿ ಬಿರುಕು !
Team Udayavani, Apr 27, 2020, 5:49 AM IST
ಮಂಗಳೂರು: ಪಂಪ್ವೆಲ್ ಮೇಲ್ಸೇತುವೆಯ ಕೆಲವು ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಮೇಲ್ಸೇತುವೆಯ ಮಧ್ಯಭಾಗದ ಎರಡು ರಸ್ತೆ ಬಿರುಕು ಬಿಟ್ಟಿದೆ. ಶನಿವಾರ ಬೆಳಗ್ಗೆ ಮಂಗಳೂರು ನಗರದಲ್ಲಿ ಸುರಿದ ಮಳೆಗೆ ಪಂಪ್ವೆಲ್ ಮೇಲ್ಸೇತುವೆ ಇಕ್ಕೆಲಗಳಲ್ಲಿ ಹಾಕಲಾಗಿದ್ದ ಜಲ್ಲಿ, ಮಣ್ಣು ಸರ್ವಿಸ್ ರಸ್ತೆಗೆ ಬಿದ್ದಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ವಾಹನ ಸಂಚಾರ ಕಡಿಮೆ ಇದ್ದ ಕಾರಣ ಸಂಚಾರದಲ್ಲಿ ವ್ಯತ್ಯಯ ಕಂಡು ಬಂದಿಲ್ಲ.
ಪಂಪ್ವೆಲ್ ಮೇಲ್ಸೇತುವೆ ಮತ್ತು ರಸ್ತೆ ಒಟ್ಟಾರೆ 1.1 ಕಿ.ಮೀ. ಉದ್ದ ಹಾಗೂ 20 ಮೀ. ಅಗಲ ಹೊಂದಿದೆ. 2017ರ ಅಕ್ಟೋಬರ್ನಲ್ಲಿ ಮೇಲ್ಸೇತುವೆ ಗರ್ಡರ್(ಕಾಂಕ್ರೀಟ್ನ ಉದ್ದದ ಸ್ತಂಭ)ನಲ್ಲಿ ಬಿರುಕು ಕಾಣಿಸಿ ಕೊಂಡಿತ್ತು. ರಾ.ಹೆ. ಪ್ರಾಧಿಕಾರದ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದಾಗ, 1 ಗರ್ಡರ್ನಲ್ಲಿ ಬಿರುಕು ಇರುವುದನ್ನು ಪತ್ತೆಹಚ್ಚಿದ್ದರು. ಇದೀಗ ಮತ್ತೆ ಬಿರುಕು ಕಂಡು ಬಂದಿದ್ದು, ವಾಹನ ಸವಾರರನ್ನು ಆತಂಕಕ್ಕೀಡು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.