Mangaluru: ಡ್ರಗ್ಸ್ ಸೇವನೆ; ಯುವಕನ ಬಂಧನ
Team Udayavani, Oct 22, 2024, 10:00 PM IST
ಮಂಗಳೂರು: ನಿಷೇಧಿತ ಮಾದಕ ವಸ್ತು (ಡ್ರಗ್ಸ್) ಸೇವನೆ ಮಾಡಿದ ಆರೋಪದಲ್ಲಿ ನಗರದ ಪೂರ್ವ ಠಾಣೆಯ ಪೊಲೀಸರು ಯುವಕನೋರ್ವನನ್ನು ಸೋಮವಾರ ಬಂಧಿಸಿದ್ದಾರೆ.
ಕೇರಳ ವಯನಾಡಿನ ಸುಲ್ತಾನ್ ಬತ್ತೇರಿಯ ಅಮಾಲ್ ಮಾನಸ್ (30) ಬಂಧಿತ. ಸೋಮವಾರ ರಾತ್ರಿ 7 ಗಂಟೆಗೆ ನಗರದ ಪಂಪ್‌ವೆಲ್ ಜಂಕ್ಷನ್ ಬಳಿ ಮಾದಕ ವಸ್ತು ಸೇವಿಸಿದಂತೆ ಕಂಡುಬಂದಿದ್ದ ಈತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.