ಮಂಗಳೂರು: ಕೊರಿಯರ್ ಕಂಪೆನಿಯವನೆಂದು ನಂಬಿಸಿ 72,444 ರೂ. ವಂಚನೆ
Team Udayavani, Apr 19, 2023, 7:12 AM IST
ಮಂಗಳೂರು: ಅಪರಿಚಿತ ವ್ಯಕ್ತಿಯೋರ್ವ ಕೊರಿಯರ್ ಕಂಪೆನಿಯವನೆಂದು ನಂಬಿಸಿ ಲಿಂಕ್ ಕಳುಹಿಸಿ 72,444 ರೂ. ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರುದಾರ ವ್ಯಕ್ತಿಯೋರ್ವರು ಪಾರ್ಸೆಲ್ಗಾಗಿ ಗೂಗಲ್ನಲ್ಲಿ ಕೊರಿಯರ್ ಕಂಪೆನಿಯೊಂದರ ಬಗ್ಗೆ ಮಾಹಿತಿ ಹುಡುಕಾಡುತ್ತಿದ್ದಾಗ ಅವರಿಗೆ 9827698553 ಮೊಬೈಲ್ ಸಂಖ್ಯೆ ದೊರೆತಿತ್ತು. ಆ ಸಂಖ್ಯೆಗೆ ಕರೆ ಮಾಡಿದಾಗ ಆತ ಕೊರಿಯರ್ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡಿರುವುದಾಗಿ ಹೇಳಿ ಲಿಂಕ್ವೊಂದನ್ನು ಕಳುಹಿಸಿದ್ದ. ಅದರ ಮೂಲಕ ಗೂಗಲ್ ಪೇನಲ್ಲಿ 5 ರೂ. ಕಳುಹಿಸುವಂತೆ ತಿಳಿಸಿದ್ದ. ದೂರುದಾರ ವ್ಯಕ್ತಿ ಹಣ ಪಾವತಿಸಿದ್ದರು. ಆದರೆ ಪಾರ್ಸೆಲ್ ಕೊಂಡು ಹೋಗಲು ಯಾರೂ ಬಂದಿರಲಿಲ್ಲ.
ಎ. 15ರಂದು ಅವರ ಬ್ಯಾಂಕ್ ಖಾತೆಗೆ ಪರ್ಸನಲ್ ಲೋನ್ ಮಂಜೂರಾದ ಸಂದೇಶ ಬಂದಿತ್ತು. ಅವರು ಖಾತೆಯನ್ನು ಪರಿಶೀಲಿಸಿದಾಗ ಅವರ ಖಾತೆಯಿಂದ ಒಟ್ಟು 72,444 ರೂ. ಕಡಿತಗೊಂಡಿತ್ತು. ಕೊರಿಯರ್ ಕಂಪೆನಿಯವನೆಂದು ಪರಿಚಯಿಸಿಕೊಂಡ ವ್ಯಕ್ತಿ ಕಳುಹಿಸಿದ ಲಿಂಕ್ಗೆ ಬ್ಯಾಂಕ್ನ ವಿವರ ನೀಡಿದ್ದರಿಂದ ಮೋಸದಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.